AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Odisha Crime: ಅನ್ನ ಮಾಡಿಲ್ಲವೆನ್ನುವ ಕೋಪದಲ್ಲಿ ಪತ್ನಿಯನ್ನೇ ಹತ್ಯೆ ಮಾಡಿದ ಪತಿ

ಅನ್ನ ಮಾಡದೇ ಕೇವಲ ಸಾಂಬಾರು ಮಾತ್ರ ಮಾಡಿದ್ದಾರೆ ಎಂದು ಕೋಪಗೊಂಡ ವ್ಯಕ್ತಿ ಪತ್ನಿಯನ್ನೇ ಕೊಲೆ ಮಾಡಿರುವ ಘಟನೆ ಒಡಿಶಾದ ಸಂಬಲ್​ಪುರದಲ್ಲಿ ನಡೆದಿದೆ. ಇ

Odisha Crime: ಅನ್ನ ಮಾಡಿಲ್ಲವೆನ್ನುವ ಕೋಪದಲ್ಲಿ ಪತ್ನಿಯನ್ನೇ ಹತ್ಯೆ ಮಾಡಿದ ಪತಿ
ಪೊಲೀಸ್
ನಯನಾ ರಾಜೀವ್
|

Updated on: May 09, 2023 | 7:48 AM

Share

ಅನ್ನ ಮಾಡದೇ ಕೇವಲ ಸಾಂಬಾರು ಮಾತ್ರ ಮಾಡಿದ್ದಾರೆ ಎಂದು ಕೋಪಗೊಂಡ ವ್ಯಕ್ತಿ ಪತ್ನಿಯನ್ನೇ ಕೊಲೆ ಮಾಡಿರುವ ಘಟನೆ ಒಡಿಶಾದ ಸಂಬಲ್​ಪುರದಲ್ಲಿ ನಡೆದಿದೆ. ಇದೀಗ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ, ಜಮನಕಿರಾ ಪೊಲೀಸ್ ಠಾಣಾ ವ್ಯಾಪ್ತಿಯ ನುವಾಧಿ ಗ್ರಾಮದಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ಆರೋಪಿಯನ್ನು 40 ವರ್ಷದ ಸನಾತನ ಧಾರುವಾ ಎಂದು ಗುರುತಿಸಲಾಗಿದ್ದು, ಆತನ ಪತ್ನಿಯನ್ನು 35 ವರ್ಷದ ಪುಷ್ಪಾ ಧರುವಾ ಎಂದು ಗುರುತಿಸಲಾಗಿದೆ.

ಸನಾತನ ಮತ್ತು ಅವರ ಪುಷ್ಪಾ ಅವರಿಗೆ ಒಬ್ಬ ಮಗಳು ಮತ್ತು ಒಬ್ಬ ಮಗನಿದ್ದಾರೆ. ಅವರ ಮಗಳು ಕುಚಿಂದಾದಲ್ಲಿ ಮನೆಗೆಲಸ ಮಾಡುತ್ತಿದ್ದು, ಮಗ ಭಾನುವಾರ ರಾತ್ರಿ ಮಲಗಲು ತನ್ನ ಸ್ನೇಹಿತನ ಮನೆಗೆ ಹೋಗಿದ್ದ.

ಸನಾತನ ರಾತ್ರಿ ಮನೆಗೆ ಬಂದಾಗ ಪತ್ನಿ ಕೇವಲ ಕರಿ ಮಾಡಿದ್ದರು, ಅನ್ನ ಮಾಡಿಲ್ಲವೆಂದು ಕೋಪಗೊಂಡ ಪತಿ ಪತ್ನಿಯನ್ನು ಹತ್ಯೆ ಮಾಡಿದ್ದಾರೆ.

ಮತ್ತಷ್ಟು ಓದಿ: ಹಣ, ಒಡವೆ ಆಸೆಗೆ ಕೊಲೆ ಆರೋಪ; ಹಾಡಹಗಲೇ ವೃದ್ಧ ದಂಪತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಮಗ ಮನೆಗೆ ಹಿಂದಿರುಗಿದ ಬಳಿಕ ತಾಯಿಯ ಹತ್ಯೆ ನಡೆದಿರುವುದು ಬೆಳಕಿಗೆ ಬಂದಿದೆ. ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಶವವನ್ನು ವಶಪಡಿಸಿಕೊಂಡು ಪತಿಯನ್ನು ವಶಕ್ಕೆ ಪಡೆದಿದ್ದಾರೆ.

ಸೋಮವಾರ ಶವಪರೀಕ್ಷೆ ನಡೆಸಲಾಗಿದ್ದು, ಆರೋಪಿ ಪತಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಮನಕಿರಾ ಪೊಲೀಸ್ ಠಾಣೆ ಪ್ರಭಾರಿ ಇನ್ಸ್‌ಪೆಕ್ಟರ್ ಪ್ರೇಮ್‌ಜಿತ್ ದಾಸ್ ಮಾಹಿತಿ ನೀಡಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More