ಅನ್ನ ಮಾಡದೇ ಕೇವಲ ಸಾಂಬಾರು ಮಾತ್ರ ಮಾಡಿದ್ದಾರೆ ಎಂದು ಕೋಪಗೊಂಡ ವ್ಯಕ್ತಿ ಪತ್ನಿಯನ್ನೇ ಕೊಲೆ ಮಾಡಿರುವ ಘಟನೆ ಒಡಿಶಾದ ಸಂಬಲ್ಪುರದಲ್ಲಿ ನಡೆದಿದೆ. ಇದೀಗ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ, ಜಮನಕಿರಾ ಪೊಲೀಸ್ ಠಾಣಾ ವ್ಯಾಪ್ತಿಯ ನುವಾಧಿ ಗ್ರಾಮದಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ಆರೋಪಿಯನ್ನು 40 ವರ್ಷದ ಸನಾತನ ಧಾರುವಾ ಎಂದು ಗುರುತಿಸಲಾಗಿದ್ದು, ಆತನ ಪತ್ನಿಯನ್ನು 35 ವರ್ಷದ ಪುಷ್ಪಾ ಧರುವಾ ಎಂದು ಗುರುತಿಸಲಾಗಿದೆ.
ಸನಾತನ ಮತ್ತು ಅವರ ಪುಷ್ಪಾ ಅವರಿಗೆ ಒಬ್ಬ ಮಗಳು ಮತ್ತು ಒಬ್ಬ ಮಗನಿದ್ದಾರೆ. ಅವರ ಮಗಳು ಕುಚಿಂದಾದಲ್ಲಿ ಮನೆಗೆಲಸ ಮಾಡುತ್ತಿದ್ದು, ಮಗ ಭಾನುವಾರ ರಾತ್ರಿ ಮಲಗಲು ತನ್ನ ಸ್ನೇಹಿತನ ಮನೆಗೆ ಹೋಗಿದ್ದ.
ಸನಾತನ ರಾತ್ರಿ ಮನೆಗೆ ಬಂದಾಗ ಪತ್ನಿ ಕೇವಲ ಕರಿ ಮಾಡಿದ್ದರು, ಅನ್ನ ಮಾಡಿಲ್ಲವೆಂದು ಕೋಪಗೊಂಡ ಪತಿ ಪತ್ನಿಯನ್ನು ಹತ್ಯೆ ಮಾಡಿದ್ದಾರೆ.
ಮತ್ತಷ್ಟು ಓದಿ: ಹಣ, ಒಡವೆ ಆಸೆಗೆ ಕೊಲೆ ಆರೋಪ; ಹಾಡಹಗಲೇ ವೃದ್ಧ ದಂಪತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ದುಷ್ಕರ್ಮಿಗಳು
ಮಗ ಮನೆಗೆ ಹಿಂದಿರುಗಿದ ಬಳಿಕ ತಾಯಿಯ ಹತ್ಯೆ ನಡೆದಿರುವುದು ಬೆಳಕಿಗೆ ಬಂದಿದೆ. ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಶವವನ್ನು ವಶಪಡಿಸಿಕೊಂಡು ಪತಿಯನ್ನು ವಶಕ್ಕೆ ಪಡೆದಿದ್ದಾರೆ.
ಸೋಮವಾರ ಶವಪರೀಕ್ಷೆ ನಡೆಸಲಾಗಿದ್ದು, ಆರೋಪಿ ಪತಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಮನಕಿರಾ ಪೊಲೀಸ್ ಠಾಣೆ ಪ್ರಭಾರಿ ಇನ್ಸ್‌ಪೆಕ್ಟರ್ ಪ್ರೇಮ್‌ಜಿತ್ ದಾಸ್ ಮಾಹಿತಿ ನೀಡಿದ್ದಾರೆ.
ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ