ಗದಗ: ಪೊಲೀಸರ ಮೇಲೆ ಹಲ್ಲೆ ಮಾಡಿದ್ದವನ ಕಾಲಿಗೆ ಗುಂಡೇಟು

ರೋಣ ತಾಲೂಕಿನಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿ ಬಗರ್ ಅಲಿ ಇರಾನಿ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಹೊಳೆಆಲೂರು ಪಂಚನಾಮೆಗೆ ಹೋಗುವಾಗ ಈ ಘಟನೆ ನಡೆದಿದೆ. ಆರೋಪಿಯನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸ್ ಸಿಬ್ಬಂದಿಗೂ ಚಿಕಿತ್ಸೆ ನೀಡಲಾಗಿದೆ.

ಗದಗ: ಪೊಲೀಸರ ಮೇಲೆ ಹಲ್ಲೆ ಮಾಡಿದ್ದವನ ಕಾಲಿಗೆ ಗುಂಡೇಟು
ಗದಗ: ಪೊಲೀಸರ ಮೇಲೆ ಹಲ್ಲೆ ಮಾಡಿದ್ದವನ ಕಾಲಿಗೆ ಗುಂಡೇಟು
Edited By:

Updated on: Nov 23, 2024 | 6:45 PM

ಗದಗ, ನವೆಂಬರ್​ 23: ಪೊಲೀಸರ್ ಮೇಲೆ ಹಲ್ಲೆ ‌ಮಾಡಿ ಪರಾರಿ ಆಗಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡಿನ (Shot) ದಾಳಿ ಮಾಡಿರುವಂತಹ ಘಟನೆ ಜಿಲ್ಲೆಯ ರೋಣ ತಾಲೂಕಿನ ಕುರಹಟ್ಟಿ ಗ್ರಾಮದ ಬಳಿ ನಡೆದಿದೆ.  ಆರೋಪಿ ಬಗರ್ ಅಲಿ ಇರಾನಿ ಮೇಲೆ ಫೈರಿಂಗ್ ಮಾಡಲಾಗಿದೆ. ಗಂಗಾವತಿ ಪೊಲೀಸರ ಮೇಲೆ ಹಲ್ಲೆ ಕೇಸ್​ನಲ್ಲಿ ಬೆಟಗೇರಿ ಬಡಾವಣೆ ಪೊಲೀಸರಿಂದ ಬಂಧಿಸಲಾಗಿತ್ತು. ಹೊಳೆಆಲೂರಗೆ ಪಂಚನಾಮೆ ಹೋಗಿ ವಾಪಸ ಬರುವಾಗ ಘಟನೆ ನಡೆದಿದೆ. ಸದ್ಯ ಆರೋಪಿಯನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಆರೋಪಿ ಬಗರ್ ಅಲಿ ಇರಾನಿ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿ ಆಗಲು ಯತ್ನಿಸಿದ್ದ. ಬಡಾವಣೆ ಠಾಣೆ ಸಿಬ್ಬಂದಿ ಹನುಮಂತ ಓಲೇಕಾರ, ಅಶೋಕ್ ಗಡದ ಮೇಲೆ ಹಲ್ಲೆ ಮಾಡಲಾಗಿದೆ. ಈ ವೇಳೆ ಆತ್ಮರಕ್ಷಣೆಗಾಗಿ ಗರ್ ಅಲಿ ಮೊಣಕಾಲಿಗೆ ಸಿಪಿಐ ಧೀರಜ್​ ಶಿಂಧೆ ಗುಂಡು ಹಾರಿಸಿದ್ದಾರೆ. ಸದ್ಯ ರೋಣ ಆಸ್ಪತ್ರೆಯಲ್ಲಿ ಪೊಲೀಸ್​ ಸಿಬ್ಬಂದಿಗೆ ಚಿಕಿತ್ಸೆ ನೀಡಲಾಗಿದೆ.

ಇದನ್ನೂ ಓದಿ: ಭೋವಿ ನಿಗಮದ ಹಗರಣ: ಸಿಐಡಿ ವಿಚಾರಣೆ ಬಳಿಕ ಆತ್ಮಹತ್ಯೆಗೆ ಶರಣಾದ ಯುವತಿ

ಗದಗ ನಗರದ ಹೆಲ್ತ್ ಕ್ಯಾಂಪ್ ಬಳಿ ಜೂನ್ 28 ರಂದು ಕಳ್ಳತನದ ಆರೋಪದ ಮೇಲೆ ಗಂಗಾವತಿ ಪೊಲೀಸರು ಕರೆದುಕೊಂಡು ಹೋಗುವಾಗ ಹಲ್ಲೆ ಮಾಡಿ ಪರಾರಿ ಆಗಿದ್ದ. ಹಲ್ಲೆ ಬಳಿಕ ಸ್ಕೂಟಿಯಲ್ಲಿ ಹೊಳೆಆಲೂರ ಗ್ರಾಮಕ್ಕೆ ಹೋಗಿದ್ದ. ಬಳಿಕ ಹೊಳೆಆಲೂರನಿಂದ ಟ್ರೈನ್ ಮೂಲಕ‌ ಮಹಾರಾಷ್ಟ್ರಕ್ಕೆ ಹೋಗಿದ್ದ.

ಎರಡು ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರು ಯುವಕರು ಸಾವು

ಎರಡು ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸಾವನ್ನಪ್ಪಿರುವಂತಹ ಘಟನೆ ಗದಗ ತಾಲೂಕಿನ ಹುಲಕೋಟಿ ಗ್ರಾಮದ ಹೊರ ವಲಯದಲ್ಲಿ ನಡೆದಿದೆ. ಸಮೀರ್ ಗುಡಿಸಲಮನಿ (20) ಉಳಿವೇಶ್ ಅಂಗಡಿ (15) ಮೃತ ದುರ್ದೈವಿಗಳು.

ಹುಲಕೋಟಿಯಿಂದ ಹೊಸಳ್ಳಿ ಕಡೆಗೆ ಹೊರಟಿದ್ದ ಉಳಿವೇಶ್​, ಎದುರುಗಡೆಯಿಂದ ಬರುತ್ತಿದ್ದ ಸಮೀರ್ ವಾಹನಕ್ಕೆ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಇಬ್ಬರು ವಾಹನ ಸವಾರರು ಗಂಭೀರ ಗಾಯಗೊಂಡಿದ್ದರು. ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವರರು ಮೃತಪಟ್ಟಿದ್ದಾರೆ.

ಇದನ್ನೂ ಓದಿ: 16 ವರ್ಷದ ಅಪ್ರಾಪ್ತ ಸೊಸೆಯನ್ನೇ ಗರ್ಭಿಣಿ ಮಾಡಿದ ಸೋದರ ಮಾವ

ಉಳಿವೇಶ್ ಬೈಕ್ ಮೇಲೆ ಬರುತ್ತಿದ್ದ ನೇತ್ರಾವತಿ ಎಂಬಾಕೆಗೆ ಗಾಯವಾಗಿದ್ದು, ನೇತ್ರಾವತಿಗೆ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಗದಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:34 pm, Sat, 23 November 24

ಸಂಜೀವ ಕುಮಾರ್​ ಪಾಂಡ್ರೆ, ಗದಗ

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
Loading...
Unable to load recommendations.
Follow Us