AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲೆ ಬೆದರಿಕೆ ಪ್ರಕರಣ: ಪೊಲೀಸ್ ಆಯುಕ್ತರಿಗೆ ದೂರು ನೀಡಿದ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್

ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಹಾಕಿರುವ ಪ್ರಕರಣ ಸಂಬಂಧ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್​ ಅವರು ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಲಾಬೂರಾಮ್​ ಅವರಿಗೆ ದೂರು ನೀಡಿದ್ದಾರೆ.

ಕೊಲೆ ಬೆದರಿಕೆ ಪ್ರಕರಣ: ಪೊಲೀಸ್ ಆಯುಕ್ತರಿಗೆ ದೂರು ನೀಡಿದ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್
ಪ್ರಮೋದ್ ಮುತಾಲಿಕ್
TV9 Web
| Updated By: Rakesh Nayak Manchi|

Updated on:Jun 09, 2022 | 10:38 PM

Share

ಹುಬ್ಬಳ್ಳಿ: ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಹಾಕಿರುವ ಪ್ರಕರಣ ಸಂಬಂಧ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್​ ಅವರು ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಲಾಬೂರಾಮ್​ ಅವರಿಗೆ ದೂರು ನೀಡಿದ್ದಾರೆ. ‘ಮಾರಿಗುಡಿ-6 ಎಂಬ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ಹಾಕಲಾದ ಜೀವಬೆದರಿಕೆ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಅಲ್ಲದೆ ಪೋಸ್ಟ್​ಗೆ ಲೈಕ್ ಹಾಗೂ ಶೇರ್ ಮಾಡಿದವರ ವಿರುದ್ಧವೂ ದೂರು ದಾಖಲಿಸಬೇಕು ಎಂದಿದ್ದಾರೆ. ಇದರ ಜೊತೆಗೆ ದೂರವಾಣಿ ಕರೆ ಮೂಲಕವೂ ಬಂದ ಬೆದರಿಕೆಗಳ ಬಗ್ಗೆಯೂ ದೂರಿನಲ್ಲಿ ತಿಳಿಸಿದ್ದು, ದೂರವಾಣಿ ಸಂಖ್ಯೆಯನ್ನೂ ದೂರಿನಲ್ಲಿ ನೀಡಿದ್ದಾರೆ.

ಇದನ್ನೂ ಓದಿ: ಯಶ್​ಪಾಲ್ ಸುವರ್ಣಗೆ ಕೊಲೆ ಬೆದರಿಕೆ ಪ್ರಕರಣ: ಗನ್ ಮ್ಯಾನ್ ಪಡೆಯುವಂತೆ ಪೊಲೀಸ್ ಇಲಾಖೆಯಿಂದ ಸೂಚನೆ

ಏನಿದರ ಹಿನ್ನೆಲೆ?

ಉಡುಪಿ ಸರ್ಕಾರಿ ಕಾಲೇಜಿನಲ್ಲಿ ಆರಂಭವಾದ ಹಿಜಾಬ್ ವಿವಾದ ಇಡೀ ರಾಜ್ಯಾದ್ಯಂತ ಹಬ್ಬಿತು. ಈ ವಿವಾದ ಸಂಬಂಧ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ ನೀಡಬಾರದು ಎಂದು ಒತ್ತಾಯಿಸಿ ಪ್ರಮೋದ್ ಮುತಾಲಿಕ್ ಅವರೂ ಹೋರಾಟಕ್ಕೆ ಇಳಿದಿದ್ದರು. ಇದರ ಬೆನ್ನಲ್ಲೆ ಮಸೀದಿಗಳಲ್ಲಿ ಮಂದಿರ, ದೇವಸ್ಥಾನಗಳ ಇರುವ ಬಗ್ಗೆ ತನಿಖೆ ನಡೆಸುವಂತೆಯೂ ಹೋರಾಟ ನಡೆಸುತ್ತಿದ್ದಾರೆ. ಈ ಹಿನ್ನೆಲೆ ಅವರಿಗೆ ಕೊಲೆ ಬೆದರಿಕೆಗಳು ಬರಲು ಆಗಮಿಸಿವೆ.

ಇದನ್ನೂ ಓದಿ: Crime News: ಮಟ್ಕಾ ಬುಕ್ಕಿಗಳನ್ನು ಗಡಿಪಾರು ಮಾಡಿ ಬಳ್ಳಾರಿ ಜಿಲ್ಲಾಡಳಿತ ಆದೇಶ

ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮತ್ತು ಯಶ್​ಪಾಲ್ ಸುವರ್ಣ ಅವರಿಗೆ ಮಾರಿಗುಡಿ ಎಂಬ ಇನ್ಸ್ಟಾಗ್ರಾಮ್ ಪೇಜ್​ನಲ್ಲಿ ಬೆದರಿಕೆ ಹಾಕಲಾಗಿದೆ. ಇವರಿಬ್ಬರ ತಲೆ ತೆಗೆದವರಿಗೆ 20 ಲಕ್ಷ ರೂ. ಜಮಾ ಮಾಡಲಾಗುವುದು, ಒಂದು ತಲೆ ತೆಗೆದರೆ 10 ಲಕ್ಷ ನೀಡಲಾಗುವುದು ಎಂದು ಹೇಳಿ ಇಬ್ಬರನ್ನೂ ಹಂದಿಗೆ ಹೋಲಿಕೆ ಮಾಡಿ ಬೆದರಿಕೆ ಹಾಕಲಾಗಿದೆ. ಅಲ್ಲದೆ ಇವರಿಬ್ಬರ ತಲೆ ಉರುಳುವುದು ಶೇ.100ರಷ್ಟು ಖಚಿತ ಎಂದು ಧಮ್ಕಿ ಹಾಕಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:38 pm, Thu, 9 June 22