ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ವಿವಿಧ ಅರಬ್ ರಾಷ್ಟ್ರಗಳಲ್ಲಿ ತಲೆಮರೆಸಿಕೊಂಡ ಆರೋಪಿಗಳು

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಸಂಬಂಧ ತಪ್ಪಿಸಿಕೊಂಡಿರುವ ನಾಲ್ವರು ಆರೋಪಿಗಳು ಭಾರತದಲ್ಲಿ ಇರುವುದೇ ಅನುವಾನವಾಗಿದೆ. ಕೊಲೆಯ ತನಿಖೆ ಎನ್ಐಎ ಹೆಗಲಿಗೆ ಬಿದ್ದಾಗಲೇ ಕೊಲೆಯ ಮಾಸ್ಟರ್ ಮೈಂಡ್​ಗಳು ವಿದೇಶಕ್ಕೆ ಹಾರಿರುವ ಶಂಕೆ ವ್ಯಕ್ತವಾಗಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ವಿವಿಧ ಅರಬ್ ರಾಷ್ಟ್ರಗಳಲ್ಲಿ ತಲೆಮರೆಸಿಕೊಂಡ ಆರೋಪಿಗಳು
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ನಾಲ್ವರು ಪ್ರಮುಖ ಆರೋಪಿಗಳು ವಿದೇಶಕ್ಕೆ ಪರಾರಿ
Follow us
| Updated By: Rakesh Nayak Manchi

Updated on: Jun 29, 2023 | 10:41 AM

ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು (Praveen Nettar) ಕೊಲೆ ಪ್ರಕರಣ ಸಂಬಂಧ ತಪ್ಪಿಸಿಕೊಂಡಿರುವ ನಾಲ್ವರು ಆರೋಪಿಗಳ ತಲೆಗೆ ಒಟ್ಟು 14 ಲಕ್ಷ ರೂಪಾಯಿ ಬಹುಮಾನ ಘೋಷಣೆ ಮಾಡಲಾಗಿದೆ. ಕೆಲವು ದಿನಗಳ ಹಿಂದೆ ಮಂಗಳೂರು ಮತ್ತು ಕೊಡಗಿನಲ್ಲಿ ನಡೆದ ಶೋಧ ಕಾರ್ಯದ ನಂತರ ರಾಷ್ಟ್ರೀಯ ತನಿಖಾ ದಳವು (NIA) ಶರಾಣಾಗತಿಯಾಗಲು ಆರೋಪಿಗಳಿಗೆ ಜೂ.30 ರ ಗಡುವು ನೀಡಿದೆ. ಅಸಲಿಗೆ ಮೋಸ್ಟ್ ವಾಂಟೆಡ್ ಆರೋಪಿಗಳು ಭಾರತದಲ್ಲೇ ಇರುವುದು ಅನುಮಾನ. ನೇಪಾಳದ ಮೂಲಕ ವಿವಿಧ ಅರಬ್ ದೇಶಗಳಿಗೆ ತಲೆಮರೆಸಿಕೊಂಡಿರುವ ವಿಚಾರ ಟಿವಿ9ಗೆ ಎನ್​ಐಎ ಉನ್ನತ ಮೂಲಗಳಿಂದ ತಿಳಿದುಬಂದಿದೆ.

ಉಮರ್ ಫಾರುಕ್, ಅಬುಬಕರ್ ಸಿದ್ದಿಕ್, ತುಫೈಲ್, ಮೊಹಮ್ಮದ್ ಮುಸ್ತಾಫಾ ಕೊಲೆ ಪ್ರಕರಣದಲ್ಲಿ ಎನ್​ಐಎಗೆ ಬೇಕಾಗಿರುವ ಮೋಸ್ಟ್​ ವಾಂಟೆಡ್​ಗಳಾಗಿದ್ದಾರೆ. ಕೊಡಗಿನ ತುಫೈಲ್ ಎಮ್.ಹೆಚ್ ಈ ನಾಲ್ವರಲ್ಲಿ ಪ್ರಮುಖ ಆರೋಪಿಯಾಗಿದ್ದಾನೆ. ಈ ನಾಲ್ವರ ಪತ್ತೆಗೆ ಒಟ್ಟು 14 ಲಕ್ಷ ಬಹುಮಾನ ಘೋಷಣೆ‌ ಮಾಡಲಾಗಿದೆ. ಈ ಪೈಕಿ ತುಫೈಲ್, ಮೊಹಮ್ಮದ್ ಮುಸ್ತಾಫಾ ಸುಳಿವಿಗೆ ತಲಾ 5 ಲಕ್ಷ, ಉಮರ್ ಫಾರುಕ್, ಅಬುಬಕರ್ ಸಿದ್ದಿಕ್ ಪತ್ತೆಗೆ ತಲಾ 2 ಲಕ್ಷ ಬಹುಮಾನ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: ಶರಣಾಗತಿಗೆ ವಾರ್ನಿಂಗ್​​: ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳ ಬಲೆಗೆ ಹೊಸ ಅಸ್ತ್ರ ಪ್ರಯೋಗಿಸಿದ NIA

ಕೊಡಗಿನಲ್ಲಿ ನಡೆದ ಕೋಮುಗಲಭೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ತುಫೈಲ್​ಗೆ ಉಗ್ರ ಸಂಘಟನೆಯ ಪ್ರಮುಖರ ನೇರ ಸಂಪರ್ಕ ಇದೆ. ಅಲ್ಲದೆ, ಜಿಲ್ಲೆಯ ಪಿಎಫ್ಐ ಅಸಾಲ್ಟ್ ತಂಡದಲ್ಲಿ ಈತ ಪ್ರಮುಖನಾಗಿದ್ದನು. ಈ ಎಲ್ಲಾ ಆರೋಪಿಗಳಿಗೆ ಶರಣಾಗತಿಯಾಗಲು ಜೂನ್ 30ರ ಡೆಡ್​ಲೈನ್ ನೀಡಲಾಗಿದೆ. ಹಾಗಾದರೆ ಆರೋಪಿಗಳ ಬಂಧನ ಅಷ್ಟೊಂದು ಜಟಿಲ ಯಾಕೆ‌? ಇಲ್ಲಿದೆ ಟಿವಿ9 ಎಕ್ಸ್​​ಕ್ಲೂಸಿವ್ ಸುದ್ದಿ.

ಅಸಲಿಗೆ ಈ ನಾಲ್ವರು ಆರೋಪಿಗಳು ಭಾರತದಲ್ಲಿ ಇರುವುದೇ ಡೌಟ್. ಕೊಲೆಯ ತನಿಖೆ ಎನ್ಐಎ ಹೆಗಲಿಗೆ ಬೀಳುತ್ತಿದ್ದಂತೆ ಮಾಸ್ಟರ್​ ಮೈಂಡ್​ಗಳು ವಿದೇಶಕ್ಕೆ ಹಾರಿರುವ ಅನುಮಾನ ವ್ಯಕ್ತವಾಗಿದೆ. ಹೌದು, ನೇಪಾಳದ ಮೂಲಕ ದುಬೈ ಸೇರಿದಂತೆ ವಿವಿಧ ಅರಬ್ ರಾಷ್ಟ್ರಗಳಲ್ಲಿ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ನೇಪಾಳದ ಜಾಡು ಹಿಡಿದು ಹೋಗಿದ್ದ ಎನ್​ಐಎ ತಂಡದಿಂದ ಇಬ್ಬರು ಆರೋಪಿಗಳು ಕೂದಲೆಳೆಯಲ್ಲಿ ತಪ್ಪಿಸಿಕೊಂಡಿದ್ದರು ಎಂದು ಎನ್​ಐಎ ಮೂಲಗಳಿಂದ ತಿಳಿದುಬಂದಿದೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ