ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ದಕ್ಷಿಣ ಕನ್ನಡ, ಕೊಡಗು ಜಿಲ್ಲೆಯಲ್ಲಿ ಎನ್​ಐಎ ದಾಳಿ

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯಲ್ಲಿರುವ ನಿಷೇಧಿತ ಪಿಎಫ್​ಐ ಸಂಘಟನೆಯ ಕಾರ್ಯಕರ್ತರ ಮನೆಗಳ ಮೇಲೆ ಎನ್​ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ದಕ್ಷಿಣ ಕನ್ನಡ, ಕೊಡಗು ಜಿಲ್ಲೆಯಲ್ಲಿ ಎನ್​ಐಎ ದಾಳಿ
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ದಕ್ಷಿಣ ಕನ್ನಡ, ಕೊಡಗು ಜಿಲ್ಲೆಯಲ್ಲಿನ ನಿಷೇಧಿತ ಪಿಎಫ್​ಐ ಸಂಘಟನೆ ಕಾರ್ಯಕರ್ತರ ಮನೆಗಳ ಮೇಲೆ ಎನ್​ಐಎ ದಾಳಿ
Follow us
Shivaprasad
| Updated By: Rakesh Nayak Manchi

Updated on:Jun 27, 2023 | 5:52 PM

ಬೆಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು (Praveen Nettar) ಹತ್ಯೆ ಪ್ರಕರಣ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಕೊಡಗು ಜಿಲ್ಲೆಯಲ್ಲಿರುವ ನಿಷೇಧಿತ ಪಿಎಫ್​ಐ (PFI) ಸಂಘಟನೆ ಕಾರ್ಯಕರ್ತರ ಮನೆಗಳ ಮೇಲೆ ಎನ್​ಐಎ (NIA) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಂದು ಬೆಳಗ್ಗೆ ಏಕಕಾಲಕ್ಕೆ 6 ಕಡೆಗಳಲ್ಲಿ ದಾಳಿ ನಡೆಸಿರುವ ಎನ್​ಐಎ ಅಧಿಕಾರಿಗಳು, ಎಲೆಕ್ಟ್ರಾನಿಕ್ ಡಿವೈಸ್​​ಗಳು ಸೇರಿದಂತೆ ಮಹತ್ವದ ದಾಖಲೆಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.

ಎನ್​ಐಎ ಅಧಿಕಾರಿಗಳ ದಾಳಿ ಕುರಿತು ಟಿವಿ9 ಜೊತೆ ಮಾತನಾಡಿದ ಕೊಡಗು ಎಸ್​ಪಿ ರಾಮರಾಜನ್, ನಿಷೇಧಿತ ಸಂಘಟನೆ ಪಿಎಫ್​ಐನಲ್ಲಿ ಭಾಗಿಯಾಗಿದ್ದ ಕಾರ್ಯಕರ್ತರನ್ನು ವಿಚಾರಣೆ ನಡೆಸಲಾಗುತ್ತಿದೆ. ಸೋಮವಾರಪೇಟೆಯಲ್ಲಿ ಹಲವು ಕಾರ್ಯಕರ್ತರನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದರು.

ಇದನ್ನೂ ಓದಿ: ಬಳ್ಳಾರಿಯಲ್ಲಿ ಸುಳ್ಳು ಗುರುತಿನಲ್ಲಿ ವಾಸಿಸುತ್ತಿದ್ದ ಪಿಎಫ್ಐ ಶಸ್ತ್ರಾಸ್ತ್ರ ತರಬೇತುದಾರನನ್ನು ಬಂಧಿಸಿದ ಎನ್‌ಐಎ

ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ಎಂಬಲ್ಲಿ ಅಧಿಕಾರಿಗಳ ಶೋಧ

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದಲ್ಲಿರುವ ಕಾರು ಚಾಲಕ ನೌಶಾದ್ ಎಂಬಾತನ ಮನೆಗೆ ಎನ್​ಐಎ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ದಾಳಿ ವೇಳೆ ನೌಶದ್ ಮನೆಯಲ್ಲಿರಲಿಲ್ಲ,  ಆದರೆ ಲಭ್ಯವಾದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಜುಲೈ‌ 26 ರಂದು ನಡೆದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಹತ್ಯೆಯು ಇಡೀ ರಾಜ್ಯವೇ ದಂಗಾಗುವಂತೆ ಹಾಗೂ ಕರ್ನಾಟಕದ ಬಿಜೆಪಿ ಸರ್ಕಾರದ ಬುಡ ಅಲುಗಾಡಿಸಿತ್ತು. ಅಷ್ಟೇ ಅಲ್ಲದೆ ಬಿಜೆಪಿ ರಾಜ್ಯಾಧ್ಯಕ್ಷರೂ ಆಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್, ಸುಳ್ಯ ತಾಲೂಕು ಶಾಸಕರೂ ಆಗಿರುವ ಸಚಿವ ಎಸ್. ಅಂಗಾರ ವಿರುದ್ಧ ಕಾರ್ಯಕರ್ತರು ತೀವ್ರ ಆಕ್ರೋಶ ಹೊರಹಾಕಿದ್ದರು. ರಾಜ್ಯಾದ್ಯಂತ ಕಾರ್ಯಕರ್ತರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು, ಸರ್ಕಾರದ ಕಠಿಣ ಕ್ರಮದ ಹೇಳಿಕೆಯನ್ನು ಟೀಕಿಸಿದರು, ಯುವ ಮೂರ್ಚಾದ ಮುಖಂಡರು ರಾಜೀನಾಮೆಯ ಬಿಸಿ ತಟ್ಟಿಸಿದ್ದರು.

ಪ್ರಕರಣ ಸಂಬಂಧ ತನಿಖೆಯಲ್ಲಿ ರಾಜ್ಯ ಸರ್ಕಾರ ಎನ್​ಐಎಗೆ ವಹಿಸಿತ್ತು. ಬಳಿಕ ರಾಜ್ಯದ ಹಲವೆಡೆ ದಾಳಿಗಳನ್ನು ನಡೆಸಿದ್ದ ಎನ್​ಐಎ ಅಧಿಕಾರಿಗಳು, ಈ ಸಂಘಟನೆಯ ರಾಜಕೀಯ ಪಕ್ಷ ಎಸ್​ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಜ್ ಪರಂಗೀಪೇಟೆ ಮನೆ ಮೇಲೂ ದಾಳಿ ನಡೆಸಿ ಶೋಧ ನಡೆಸಿದ್ದರು. ಅಲ್ಲದೆ, ಈಗಾಗಲೇ ಎನ್​ಐಎ ಅಧಿಕಾರಿಗಳು ಚಾರ್ಜ್​ಶೀಟ್ ಸಲ್ಲಿಕೆ ಮಾಡಿದ್ದಾರೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:34 pm, Tue, 27 June 23

ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ