ಪ್ರವೀಣ್ ನೆಟ್ಟಾರು ಹಂತಕರಿಗಾಗಿ ಪುತ್ತೂರು, ಸುಳ್ಯದಲ್ಲಿ ಎನ್​ಐಎ ತಂಡದಿಂದ ವ್ಯಾಪಕ ತಲಾಶ್​

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಉಳಿದ ಆರೋಪಿಗಳಿಗಾ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಎನ್​ಐಎ ಶೋಧ ಕಾರ್ಯ ನಡೆಸುತ್ತಿದೆ.

ಪ್ರವೀಣ್ ನೆಟ್ಟಾರು ಹಂತಕರಿಗಾಗಿ ಪುತ್ತೂರು, ಸುಳ್ಯದಲ್ಲಿ ಎನ್​ಐಎ ತಂಡದಿಂದ ವ್ಯಾಪಕ ತಲಾಶ್​
ಪ್ರವೀಣ್ ನೆಟ್ಟಾರು ಹಂತಕರ ಬಗ್ಗೆ ಮಾಹಿತಿ ನೀಡಿದವರಿಗೆ ನಗದು ಬಹುಮಾನ ಘೋಷಿಸಿದ NIA
Edited By:

Updated on: Nov 03, 2022 | 2:26 PM

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ತಲೆಮರೆಸಿಕೊಂಡಿರುವ ಉಳಿದ ಆರೋಪಿಗಳ ಬಂಧನಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸುತ್ತಮುತ್ತ ರಾಷ್ಟ್ರೀಯ ತನಿಖಾ ದಳದ (ಎನ್​ಐಎ) ಶೋಧ ಕಾರ್ಯ ನಡೆಸುತ್ತಿದೆ. ಪುತ್ತೂರು, ಬೆಳ್ಳಾರೆ, ಸುಳ್ಯದಲ್ಲಿ ಎನ್​ಐಎ ಅಧಿಕಾರಿಗಳ ಒಟ್ಟು ಆರು ತಂಡಗಳಿಂದ ಶೋಧ ಕಾರ್ಯ ನಡೆಸಲಾಗುತ್ತಿದ್ದು, ಸಾರ್ವಜನಿಕರಿಂದ ಮಾಹಿತಿ ಕಲೆ ಹಾಕಿಕೊಳ್ಳಲಾಗುತ್ತಿದೆ. ನಾಲ್ವರು ಅರೋಪಿಗಳ ಸುಳಿವು ಕೊಟ್ಟವರಿಗೆ ಒಟ್ಟು 14 ಲಕ್ಷ ನಗದು ಬಹುಮಾನ ನೀಡುವುದಾಗಿ ಅಧಿಕಾರಿಗಳು ಘೋಷಿಸಿದ್ದಾರೆ. ಇಬ್ಬರು ಆರೋಪಿ ಬಗ್ಗೆ ಮಾಹಿತಿ ನೀಡಿದರೆ 5 ಲಕ್ಷ ರೂಪಾಯಿ ಹಾಗೂ ಇನ್ನಿಬ್ಬರ ಆರೋಪಗಳ ಬಗ್ಗೆ ಮಾಹಿತಿ ತಿಳಿಸಿದರೆ 2 ಲಕ್ಷ ಬಹುಮಾನ ರೂ. ನಗದು ಬಹುಮಾನ ನೀಡುವುದಾಗಿ ಎನ್‌ಐಎ ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ.

ನಾಲ್ವರು ಪ್ರಮುಖ ಆರೋಪಿಗಳ ಬಗ್ಗೆ ಮಾಹಿತಿ ನೀಡಿದರೆ ಒಟ್ಟು 14 ಲಕ್ಷ ರೂ. ನಗದು ಬಹುಮಾನ ನೀಡುವಾಗಿ ಘೋಷಿಸಲಾಗಿದೆ. ಮೊಹಮ್ಮದ್ ಮುಸ್ತಫಾ ಮತ್ತು ತುಫೈಲ್ ಬಗ್ಗೆ ಮಾಹಿತಿ ನೀಡಿದರೆ 5 ಲಕ್ಷ ರೂ. ಬಹುಮಾನ, ಇನ್ನು ಇಬ್ಬರು ಆರೋಪಿಗಳಾದ ಉಮರ್ ಫಾರೂಕ್‌ ಹಾಗೂ ಅಬೂಬಕರ್ ಸಿದ್ದಿಕ್‌ ಬಗ್ಗೆ ಮಾಹಿತಿ ನೀಡಿದರೆ 2 ಲಕ್ಷ ಬಹುಮಾನ ರೂಪಾಯಿ ನಗದು ಬಹುಮಾನ ನೀಡುವಾಗಿ ಎನ್​ಐಎ ಪ್ರಕಟಣೆಯಲ್ಲಿ ತಿಳಿಸಿದೆ.

ಏನಿದು ಪ್ರಕರಣ?

ದಕ್ಷಿಣ ಕನ್ನಡ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾಗಿದ್ದ ಪ್ರವೀಣ್ ನೆಟ್ಟಾರು ಅವರನನ್ನು ಜುಲೈ 26 ರಂದು ಬೆಳ್ಳಾರೆಯಲ್ಲಿರವ ಅವರ ಕೋಳಿ ಅಂಗಡಿ ಬಳಿಯೇ ಹಂತಕರು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದರು. ಇದು ಇಡೀ ರಾಜ್ಯಾದ್ಯಂತ ಕಾರ್ಯಕರ್ತರಲ್ಲಿ ಕಿಚ್ಚು ಹತ್ತಿಸಿತ್ತು. ಇದರ ಬಿಸಿಗೆ ಬಿಜೆಪಿ ರಾಜ್ಯ ಸರ್ಕಾರದ ಬುಡವೇ ಅಲುಗಾಡಿತ್ತು. ನಂತರ ಸರ್ಕಾರ ಈ ಪ್ರಕರಣವನ್ನು ಎನ್​ಐಎ ತನಿಖಗೆ ವಹಿಸಿತ್ತು.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:26 pm, Thu, 3 November 22