Haveri News: ಖಾಸಗಿ ಬಸ್ ಪಲ್ಟಿಯಾಗಿ ಚಾಲಕ ಸೇರಿ ಇಬ್ಬರು ಸಾವು
ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೊಟೇಬೆನ್ನೂರು ಗ್ರಾಮದ ಬಳಿ ಇಂದು(ಜೂ.29) ಮುಂಜಾನೆ ಖಾಸಗಿ ಬಸ್ ಪಲ್ಟಿಯಾಗಿ ಚಾಲಕ ಸೇರಿ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಹಾವೇರಿ: ಜಿಲ್ಲೆಯ ಬ್ಯಾಡಗಿ(Byadagi) ತಾಲೂಕಿನ ಮೊಟೇಬೆನ್ನೂರು ಗ್ರಾಮದ ಬಳಿ ಇಂದು(ಜೂ.29) ಮುಂಜಾನೆ ಖಾಸಗಿ ಬಸ್ ಪಲ್ಟಿಯಾಗಿ ಚಾಲಕ ಸೇರಿ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ, ಬಸ್ ಡಿವೈಡರ್ಗೆ ಡಿಕ್ಕಿಯಾಗಿ ಪಲ್ಟಿಯಾಗಿದ್ದು, ಬೆಳಗಾವಿ ಮೂಲದ ಬಸ್ ಚಾಲಕ ಸದಾನಂದ(50), ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದಾರೆ. ಹಲವು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಂಗಳೂರಿನಿಂದ ಮೀರಜ್ಗೆ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಈ ಕುರಿತು ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಸು ಕದ್ದು ಪರಾರಿಯಾಗುತ್ತಿದ್ದ ಕಳ್ಳನ ಬಂಧನ
ಮೈಸೂರು: ಹಸು ಕದ್ದು ಪರಾರಿಯಾಗುತ್ತಿದ್ದ ಕಳ್ಳನನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಂಜನಗೂಡು ತಾಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಆರೋಪಿ ರೇವಣ್ಣ(40). ಗ್ರಾಮದ ಕೂಸಮ್ಮ ಎಂಬುವರಿಗೆ ಸೇರಿದ ಹಸು ಇದಾಗಿದ್ದು, ಇದನ್ನು ಕಳ್ಳತನ ಮಾಡಲು ಯತ್ನಿಸಿದ್ದ. ಈ ವೇಳೆ ಸ್ಥಳೀಯರು ಸೇರಿ ಹಿಡಿದು ಪೊಲೀಸರಿಗೆ ಕೊಟ್ಟಿದ್ದಾರೆ. ಈ ಕುರಿತು ಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:04 am, Thu, 29 June 23