ಒಡಿಶಾ: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ, ಶಾಲಾ ಶಿಕ್ಷಕನ ಬಂಧನ
ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ಶಾಲಾ ಶಿಕ್ಷಕನನ್ನು ಬಂಧಿಸಿರುವ ಘಟನೆ ಒಡಿಶಾದಲ್ಲಿ ನಡೆದಿದೆ. 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸಂಬಲ್‌ಪುರದ ಆಂಗ್ಲ ಮಾಧ್ಯಮ ಶಾಲೆಯೊಂದರ ಶಿಕ್ಷಕನನ್ನು ಒಡಿಶಾ ಪೊಲೀಸರು ಗುರುವಾರ ಬಂಧಿಸಿದ್ದಾರೆ.
ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ಶಾಲಾ ಶಿಕ್ಷಕನನ್ನು ಬಂಧಿಸಿರುವ ಘಟನೆ ಒಡಿಶಾದಲ್ಲಿ ನಡೆದಿದೆ. 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸಂಬಲ್‌ಪುರದ ಆಂಗ್ಲ ಮಾಧ್ಯಮ ಶಾಲೆಯೊಂದರ ಶಿಕ್ಷಕನನ್ನು ಒಡಿಶಾ ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಪೊಲೀಸರ ಪ್ರಕಾರ, ಶಿಕ್ಷಕರೊಬ್ಬರು ಬಾಲಕಿ ಸೇರಿದಂತೆ ಹಲವು ವಿದ್ಯಾರ್ಥಿಗಳನ್ನು ತರಗತಿಗೆ ಬರುವಂತೆ ಹೇಳಿದ್ದರು. ಕೆಲವು ನಿಮಿಷಗಳ ನಂತರ, ಆಕೆ ಸ್ನೇಹಿತರನ್ನು ಹೊರಗೆ ಹೋಗುವಂತೆ ಕೇಳಿದ್ದರು. ಶಿಕ್ಷಕ ಬಾಲಕಿಯ ಸ್ನೇಹಿತನಿಗೆ ತನ್ನ ನೀರಿನ ಬಾಟಲಿಯನ್ನು ತರುವಂತೆ ಕೇಳಿದ್ದಾರೆ, ಆಗ ತರಗತಿಯಲ್ಲಿ ಬಾಲಕಿ ಮಾತ್ರ ಇದ್ದು, ಆರೋಪಿ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ತನ್ನ ಸಹಪಾಠಿ ಹಿಂತಿರುಗಿದಾಗ, ಬಾಲಕಿ ಘಟನೆಯ ಬಗ್ಗೆ ಅವರಿಗೆ ತಿಳಿಸಿದಳು ಮತ್ತು ಮನೆಗೆ ತಲುಪಿದ ನಂತರ ಅವಳು ತನ್ನ ಪೋಷಕರಿಗೆ ವಿಷಯ ತಿಳಿಸಿದಳು, ನಂತರ ಅವರು ವಿಷಯವನ್ನು ಪ್ರಾಂಶುಪಾಲರಿಗೆ ತಿಳಿಸಿದರು, ಅವರು ಪೊಲೀಸರಿಗೆ ಮಾಹಿತಿ ನೀಡಿದರು.
ನಾವು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇವೆ. ಕಾನೂನು ತನ್ನದೇ ಆದ ಕ್ರಮವನ್ನು ತೆಗೆದುಕೊಳ್ಳುತ್ತದೆ ಎಂದು ಅವರು ಹೇಳಿದರು. ಸಂಬಲ್‌ಪುರ ಸದರ್ ಸಬ್ ಕಲೆಕ್ಟರ್ ಪುಷ್ಪಾಂಜಲಿ ಪಾಂಡಾ ಕೂಡ ಪೊಲೀಸರೊಂದಿಗೆ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಶಾಲಾ ಅಧಿಕಾರಿಗಳು ಮತ್ತು ಪೋಷಕರು ಇಬ್ಬರೂ ಪೊಲೀಸರಿಗೆ ದೂರು ನೀಡಿದ್ದಾರೆ. ಕಾನೂನು ಕ್ರಮವನ್ನು ಪ್ರಾರಂಭಿಸಲಾಗುವುದು ಎಂದು ಪಾಂಡಾ ಹೇಳಿದರು.
ಮತ್ತಷ್ಟು ಓದಿ: ಕಾರ್ ಪಾರ್ಕಿಂಗ್ ವಿಚಾರವಾಗಿ ಯುವತಿಗೆ ಕಿರುಕುಳ: ದೂರು ದಾಖಲಿಸಿಕೊಳ್ಳಲು ಪೊಲೀಸರ ಹಿಂದೇಟು
ಘಟನೆಗೆ ಸಂಬಂಧಿಸಿದಂತೆ ಐಪಿಸಿ ಮತ್ತು ಪೋಕ್ಸೊ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಶಿಕ್ಷಕನನ್ನು ವಶಕ್ಕೆ ಪಡೆಯಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಸಂಬಲ್‌ಪುರ ಸದರ್ ಎಸ್‌ಡಿಪಿಒ ಪಿಕೆ ಸಾಹು ತಿಳಿಸಿದ್ದಾರೆ.
ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ