
ಬೀದರ್: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮನೆಯಲ್ಲೇ ನೇಣು ಬಿಗಿದುಕೊಂಡು ಪ್ರೊಬೆಷನರಿ ಎಸ್ಐ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಸವಕಲ್ಯಾಣದ ಮಹದೇವ್ ನಗರದಲ್ಲಿ ನಡೆದಿದೆ. ರೇಖಾ ಕಿರಣ್ ಕುಮಾರ್ ಕೋರೆ (26) ಆತ್ಮಹತ್ಯೆಗೆ ಶರಣಾದ ಎಸ್ಐ.
ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಕಡಗಂಚಿ ನಿವಾಸಿಯಾಗಿರುವ ರೇಖಾ ಕಿರಣ್ ಅವರು 8 ವರ್ಷದ ಹಿಂದೆ ಮದುವೆಯಾಗಿದ್ದರು. ರೇಖಾಗೆ ಇಬ್ಬರು ಮಕ್ಕಳು ಸಹ ಇದ್ದರು. ಕಳೆದ 8 ತಿಂಗಳಿನಿಂದ ಬಸವಕಲ್ಯಾಣದಲ್ಲಿ ಪಿಎಸ್ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.