ಡ್ರಾಪ್ ಕೊಡುವ ನೆಪದಲ್ಲಿ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ಯಲು ಯತ್ನಿಸಿದವನಿಗೆ ಧರ್ಮದೇಟು

12 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಯುವಕನ್ನು ಸ್ಥಳೀಯರು ಹಿಡಿದು ಧರ್ಮದೇಟು ನೀಡಿದ್ದಾರೆ. ಡ್ರಾಪ್ ಕೊಡುವ ನೆಪದಲ್ಲಿ ಬೈಕ್​ನಲ್ಲಿ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ಯಲು ಯತ್ನಿಸಿದ ವೇಳೆ ಗೂಸಾ ಬಿದ್ದಿವೆ.

ಡ್ರಾಪ್ ಕೊಡುವ ನೆಪದಲ್ಲಿ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ಯಲು ಯತ್ನಿಸಿದವನಿಗೆ ಧರ್ಮದೇಟು
Follow us
Sahadev Mane
| Updated By: ರಮೇಶ್ ಬಿ. ಜವಳಗೇರಾ

Updated on: Aug 25, 2024 | 2:20 PM

ಬೆಳಗಾವಿ, (ಆಗಸ್ಟ್ 25): ಶಾಲಾ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನನ್ನು ಹಿಡಿದು ಸಾರ್ವಜನಿಕರು ಧರ್ಮದೇಟು ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ರಾಯಬಾಗ ಪಟ್ಟಣದ ಕೈರಕೋಡಿ ನಿವಾಸಿ ಸುನೀಲ್ ದೀಪಾಳೆ ಎಂಬಾತನಿಂದ ಕೃತ್ಯ ನಡೆದಿದೆ. ಸುನೀಲ್ 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.

ಬಾಲಕಿ ಪಟ್ಟಣದ ಕಂಚರವಾಡಿ ರೋಡ್ ಕಡೆಯಿಂದ ತೆರಳುತ್ತಿದ್ದಳು. ಈ ವೇಳೆ ಬಾಲಕಿಗೆ ಡ್ರಾಪ್ ಕೊಡುವ ನೆಪದಲ್ಲಿ ಬೈಕ್ ಮೇಲೆ ಕೂರಿಸಿಕೊಂಡಿದ್ದಾನೆ. ನಂತರ ನಿರ್ಜನ ಪ್ರದೇಶದ ಕಡೆಗೆ ಕರೆದ್ಯೊಯಲು ಯತ್ನಿಸಿದ್ದಾನೆ. ಇದರಿಂದ ಗಾಬರಿಗೊಂಡ ಬಾಲಕಿ ಗಾಡಿ ನಿಲ್ಲಿಸಲು ಹೇಳಿದ್ದಾಳೆ. ಆದರೆ ನಿಲ್ಲಸದೇ ಇದ್ದಾಗ ಬಾಲಕಿ ಕಿರುಚಾಡಿದ್ದಾಳೆ. ಆಕೆಯ ಕಿರುಚಾಟ ಕೇಳಿ ಸ್ಥಳಕ್ಕೆ ಸ್ಥಳೀಯರು ದೌಡಾಯಿಸಿದ್ದಾರೆ.

ಇದನ್ನೂ ಓದಿ: ಉಡುಪಿ: ಯುವತಿಗೆ ಮಾದಕ ಪದಾರ್ಥ ನೀಡಿ ಅತ್ಯಾಚಾರವೆಸಗಿದ ಅಲ್ತಾಫ್

ಕೂಡಲೇ ಸುನೀಲ್‌ನನ್ನು ಹಿಡಿದುಕೊಂಡ ಸ್ಥಳೀಯರು ಅತ್ಯಾಚಾರಕ್ಕೆ ಯತ್ನಿಸಿದ್ದು ತಿಳಿಯುತ್ತಿದ್ದಂತೆ ಧರ್ಮದೇಟು ನೀಡಿ ರಾಯಬಾಗ ಪೊಲೀಸ್‌ರಿಗೆ ಒಪ್ಪಿಸಿದ್ದಾರೆ. ಆರೋಪಿಗೆ ರಾಯಬಾಗ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಕುರಿತು ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ