AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pune Crime: ಅತ್ತಿಗೆ ಹಾಗೂ ಆಕೆಯ ಇಬ್ಬರು ಮಕ್ಕಳನ್ನು ಕೊಂದು ಮೃತದೇಹವನ್ನು ಸುಟ್ಟು ಹಾಕಿದ ವ್ಯಕ್ತಿ

ವ್ಯಕ್ತಿಯೊಬ್ಬ ಅತ್ತಿಗೆ ಹಾಗೂ ಆಕೆಯ ಇಬ್ಬರು ಮಕ್ಕಳನ್ನು ಕೊಂದು ಮೃತದೇಹವನ್ನು ಸುಟ್ಟು ಹಾಕಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.

Pune Crime: ಅತ್ತಿಗೆ ಹಾಗೂ ಆಕೆಯ ಇಬ್ಬರು ಮಕ್ಕಳನ್ನು ಕೊಂದು ಮೃತದೇಹವನ್ನು ಸುಟ್ಟು ಹಾಕಿದ ವ್ಯಕ್ತಿ
Crime Scene
Follow us
ನಯನಾ ರಾಜೀವ್
|

Updated on: Apr 06, 2023 | 2:25 PM

ವ್ಯಕ್ತಿಯೊಬ್ಬ ಅತ್ತಿಗೆ ಹಾಗೂ ಆಕೆಯ ಇಬ್ಬರು ಮಕ್ಕಳನ್ನು ಕೊಂದು ಮೃತದೇಹವನ್ನು ಸುಟ್ಟು ಹಾಕಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. 30 ವರ್ಷದ ವ್ಯಕ್ತಿಯೊಬ್ಬ ತನ್ನ ಅತ್ತಿಗೆ ಹಾಗೂ ಇಬ್ಬರು ಅಪ್ರಾಪ್ತ ಮಕ್ಕಳನ್ನು ಕತ್ತು ಹಿಸುಕಿ ಕೊಲೆ ಮಾಡಿ ಬಳಿಕ ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾನೆ. ಬುಧವಾರ ಸಂಜೆ ಕೊಂಡ್ವಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಆರೋಪಿಯು ತನ್ನ 25 ವರ್ಷದ ಅತ್ತಿಗೆ ಇತರ ಪುರುಷರೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಆರೋಪಿಸಿ ಜಗಳ ಶುರು ಮಾಡಿದ್ದ, ಕೋಪದಲ್ಲಿ ಮೂವರನ್ನೂ ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯನ್ನು ಬಂಧಿಸಲಾಗಿದೆ ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ) ಮತ್ತು 201 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಟಿಂಡರ್ ಮ್ಯಾಚ್‌ನಲ್ಲಿ ಪ್ರೀತಿಯ ಬಲೆಗೆ ಬಿದ್ದ ಹಣಕಾಸು ಸಲಹೆಗಾರ; ಲವ್ ಸ್ಕ್ಯಾಮ್​ನಲ್ಲಿ ರೂ.14.8 ಕೋಟಿ ಕಳೆದುಕೊಂಡ!

ಬುಧವಾರ ಆರೋಪಿ ಮತ್ತು ಮಹಿಳೆ ಇತರ ಪುರುಷರೊಂದಿಗೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಜಗಳವಾಡಿದ್ದರು. ಆರೋಪಿಯು ಕೋಪದ ಭರದಲ್ಲಿ ಅತ್ತಿಗೆ ಮತ್ತು ಅವಳ 4 ಮತ್ತು 6 ವರ್ಷದ ಇಬ್ಬರು ಮಕ್ಕಳನ್ನು ಕತ್ತು ಹಿಸುಕಿ ಕೊಂದಿದ್ದಾನೆ ಎಂದು ಕೊಂಡ್ವಾ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

ಮೃತದೇಹಗಳನ್ನು ವಿಲೇವಾರಿ ಮಾಡುವ ಉದ್ದೇಶದಿಂದ ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ಕೊಂಡ್ವಾದ ಪಿಸೋಲಿ ಪ್ರದೇಶದಲ್ಲಿ ಮಹಿಳೆಯ ಮನೆಯ ಮುಂದೆ ಟಿನ್ ಶೆಡ್‌ನಲ್ಲಿ ಬೆಡ್‌ಶೀಟ್ ಮತ್ತು ಕಟ್ಟಿಗೆಯನ್ನು ಬಳಸಿ ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾನೆ. ಘಟನೆ ಕುರಿತು ಇನ್ನೂ ತನಿಖೆ ನಡೆಯುತ್ತಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ