ವರದಕ್ಷಿಣೆ ಕಿರುಕುಳದಿಂದಾಗಿ ಮನೆಬಿಟ್ಟು ಹೋಗಿದ್ದ ಪತ್ನಿಯ ಜುಟ್ಟು ಹಿಡಿದು ರಸ್ತೆಯಲ್ಲಿ ಎಳೆದುಕೊಂಡು ಬಂದ ಪತಿ

ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಮನೆಬಿಟ್ಟು ಹೋಗಿದ್ದ ಪತ್ನಿಯ ಜುಟ್ಟು ಹಿಡಿದು ರಸ್ತೆಯಲ್ಲಿ ಧರ ಧರನೆ ಎಳೆದುಕೊಂಡು ಬಂದಿರುವ ಘಟನೆ ಪಂಜಾಬ್​ನ ಗುರುದಾಸ್​ಪುರದಲ್ಲಿ ನಡೆದಿದೆ. ಚೋಧ್ಯಾನ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಇದರ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವರದಕ್ಷಿಣೆ ಬೇಡಿಕೆಯ ಮೇರೆಗೆ ಪತಿ ತನಗೆ ಪದೇ ಪದೇ ಹೊಡೆದು ಹಿಂಸೆ ನೀಡುತ್ತಿದ್ದ ಎಂದು ಮಹಿಳೆಯ ತಾಯಿ ಭೈನಿ ಮಿಯಾನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ವರದಕ್ಷಿಣೆ ಕಿರುಕುಳದಿಂದಾಗಿ ಮನೆಬಿಟ್ಟು ಹೋಗಿದ್ದ ಪತ್ನಿಯ ಜುಟ್ಟು ಹಿಡಿದು ರಸ್ತೆಯಲ್ಲಿ ಎಳೆದುಕೊಂಡು ಬಂದ ಪತಿ
ಮಹಿಳೆ
Follow us
ನಯನಾ ರಾಜೀವ್
|

Updated on: Sep 27, 2023 | 12:35 PM

ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಮನೆಬಿಟ್ಟು ಹೋಗಿದ್ದ ಪತ್ನಿಯ ಜುಟ್ಟು ಹಿಡಿದು ರಸ್ತೆಯಲ್ಲಿ ಧರ ಧರನೆ ಎಳೆದುಕೊಂಡು ಬಂದಿರುವ ಘಟನೆ ಪಂಜಾಬ್​ನ ಗುರುದಾಸ್​ಪುರದಲ್ಲಿ ನಡೆದಿದೆ. ಚೋಧ್ಯಾನ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಇದರ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವರದಕ್ಷಿಣೆ ಬೇಡಿಕೆಯ ಮೇರೆಗೆ ಪತಿ ತನಗೆ ಪದೇ ಪದೇ ಹೊಡೆದು ಹಿಂಸೆ ನೀಡುತ್ತಿದ್ದ ಎಂದು ಮಹಿಳೆಯ ತಾಯಿ ಭೈನಿ ಮಿಯಾನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮಹಿಳೆಯನ್ನು ಮೀನು ಎಂದು ಗುರುತಿಸಲಾಗಿದೆ. ಸೋಮವಾರ ವರದಕ್ಷಿಣೆ ವಿಚಾರವಾಗಿ ಅತ್ತೆಯಂದಿರಿಂದ ಹಲ್ಲೆಗೊಳಗಾಗಿ ಗಂಡನ ಮನೆಯಿಂದ ಚಿಕ್ಕಮ್ಮನ ಮನೆಗೆ ಹೋಗಿದ್ದಳು, ಆಕೆಯ ನಿರ್ಧಾರದಿಂದ ಕುಪಿತಳಾದ ಪತಿ ಮನೆಗೆ ಬಂದು ಆಕೆಯನ್ನು ಥಳಿಸಿ ಆಕೆಯ ಕೂದಲು ಹಿಡಿದು ಎಳೆದೊಯ್ದ ಘಟನೆ ನಡೆದಿದೆ.

ಆತ ತನ್ನ ಪತ್ನಿಯನ್ನು ಥಳಿಸಿ ಆ ರೀತಿ ಎಳೆದೊಯ್ಯುತ್ತಿದ್ದರೂ, ಜನರು ಮೂಕ ಪ್ರೇಕ್ಷಕರಾಗಿ ಅಲ್ಲಿಯೇ ನಿಂತಿದ್ದರು. ಆದರೆ ಕೆಲವರು ವಿಡಿಯೋ ಮಾಡಿಕೊಂಡಿದ್ದಾರೆ. ವರದಕ್ಷಿಣೆ ನೀಡುವಂತೆ ತನ್ನ ಪತಿ ಹಾಗೂ ಅತ್ತೆ ನಿರಂತರವಾಗಿ ಕಿರುಕುಳ ನೀಡುತ್ತಲೇ ಇದ್ದಾರೆ. ನಮ್ಮ ಆರ್ಥಿಕ ಪರಿಸ್ಥಿತಿ ಸರಿ ಇಲ್ಲದ ಕಾರಣ ಹಣವನ್ನು ನೀಡಲು ಸಾಧ್ಯವಾಗುತ್ತಿಲ್ಲ, ಹೀಗಾಗಿ ಮನೆಯನ್ನು ಬಿಟ್ಟು ಹೋಗಲು ನಿರ್ಧರಿಸಿದ್ದೆ ಎಂದು ಮಹಿಳೆ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಚಿಕ್ಕಮಗಳೂರು: ಕೋಟಿ ರೂ., ಕೆಜಿ ಚಿನ್ನ, ಫಾರ್ಚುನರ್ ಕಾರು ಕೊಟ್ಟರೂ ಸಾಕಾಗಿಲ್ಲ; ಕೈ ಮಾಜಿ ಸಚಿವನ ಪುತ್ರನ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ

ಮಹಿಳೆಯ ತಾಯಿ ಪಂಚಾಯತ್ ಸದಸ್ಯರೊಂದಿಗೆ ಸ್ಥಳಕ್ಕಾಗಮಿಸಿ ಆಸ್ಪತ್ರೆಗೆ ಕರೆದೊಯ್ದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಸಂಬಂಧ ದೂರು ಸ್ವೀಕರಿಸಿದ್ದು, ಸಂತ್ರಸ್ತೆಯ ಹೇಳಿಕೆಯನ್ನು ದಾಖಲಿಸಿಕೊಂಡ ನಂತರ ಆರೋಪಿಗಳ ವಿರುದ್ಧ ತನಿಖೆ ಆರಂಭಿಸುವುದಾಗಿ ಸಬ್ ಇನ್ಸ್‌ಪೆಕ್ಟರ್ ಮೋಹನ್ ಲಾಲ್ ತಿಳಿಸಿದ್ದಾರೆ.

ಮೀನು ಅವರ ತಂದೆ ಮಾನಸಿಕ ಅಸ್ವಸ್ಥರಾಗಿದ್ದು, ನಮ್ಮದು ಬಡ ಕುಟುಂಬ, ಹಣ ನೀಡಲು ಸಾಧ್ಯವಾಗಲಿಲ್ಲ. ಆಕೆಗೆ ನ್ಯಾಯ ಒದಗಿಸಿಕೊಡಬೇಕೆಂದು ಮನವಿ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಸಿವಿಲ್ ಆಸ್ಪತ್ರೆಗೆ ಆಗಮಿಸಿದ ಭೈನಿ ಮಿಯಾನ್ ಖಾನ್ ಪೊಲೀಸ್ ಠಾಣೆಯ ತನಿಖಾಧಿಕಾರಿ ಸಬ್ ಇನ್ಸ್‌ಪೆಕ್ಟರ್ ಮೋಹನ್ ಲಾಲ್ ಅವರು ಮಾತನಾಡಿ, ಸಂತ್ರಸ್ತೆ ಮೀನು ಅವರ ದೂರನ್ನು ಸ್ವೀಕರಿಸಿದ್ದಾರೆ ಎಂದು ಹೇಳಿದರು. ಆರೋಪಿಗಳ ಹೇಳಿಕೆ ಪಡೆದ ನಂತರವಷ್ಟೇ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಭೈರತಿ ರಣಗಲ್’ ಲುಕ್​ನಲ್ಲೇ ಶಿವಣ್ಣನ ಸಿನಿಮಾ ನೋಡಲು ಬಂದ ಡಾಲಿ ಧನಂಜಯ್
‘ಭೈರತಿ ರಣಗಲ್’ ಲುಕ್​ನಲ್ಲೇ ಶಿವಣ್ಣನ ಸಿನಿಮಾ ನೋಡಲು ಬಂದ ಡಾಲಿ ಧನಂಜಯ್
ಜವಾರಿ ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ಹನುಮಂತ
ಜವಾರಿ ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ಹನುಮಂತ
Daily Devotional: ಶನಿ ನೇರ ಸಂಚಾರ ಯಾರಿಗೆಲ್ಲ ಅದೃಷ್ಟ? ವಿಡಿಯೋ ನೋಡಿ
Daily Devotional: ಶನಿ ನೇರ ಸಂಚಾರ ಯಾರಿಗೆಲ್ಲ ಅದೃಷ್ಟ? ವಿಡಿಯೋ ನೋಡಿ
ಶನಿದೇವ ಕುಂಬ ರಾಶಿಗೆ ಪ್ರವೇಶಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಶನಿದೇವ ಕುಂಬ ರಾಶಿಗೆ ಪ್ರವೇಶಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಮನೆಯಲ್ಲಿ ಸಲಗೆನಾ, ಸ್ಟ್ರೀಕ್ಟಾ? ವಿದ್ಯಾರ್ಥಿನಿ ಪ್ರಶ್ನೆಗೆ ಡಿಕೆಶಿ ಉತ್ತರ
ಮನೆಯಲ್ಲಿ ಸಲಗೆನಾ, ಸ್ಟ್ರೀಕ್ಟಾ? ವಿದ್ಯಾರ್ಥಿನಿ ಪ್ರಶ್ನೆಗೆ ಡಿಕೆಶಿ ಉತ್ತರ
ತಮಗೊಂದು ಗ್ಯಾರಂಟಿ ನೀಡುವಂತೆ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಡಿಸಿಎಂ ಉತ್ತರ
ತಮಗೊಂದು ಗ್ಯಾರಂಟಿ ನೀಡುವಂತೆ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಡಿಸಿಎಂ ಉತ್ತರ
ರಸ್ತೆ ದಾಟುವಾಗ ಬಸ್ ಡಿಕ್ಕಿ ಹೊಡೆದು ಕಾಲೇಜು ಯುವತಿ ಭೀಕರ ಸಾವು
ರಸ್ತೆ ದಾಟುವಾಗ ಬಸ್ ಡಿಕ್ಕಿ ಹೊಡೆದು ಕಾಲೇಜು ಯುವತಿ ಭೀಕರ ಸಾವು
ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ