ಶ್ವಾನಗಳಿಗೆ ವಿಷವುಣಿಸಿ ಕೊಂದಿದ್ದ ಆರೋಪಿ ಅರೆಸ್ಟ್!
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇತ್ತೀಚೆಗೆ ಬೀದಿ ನಾಯಿಗಳಿಗ ಸಾವಿಗೆ ಕಾರಣವಾಗಿದ್ದ ಆರೋಪಿ ಜೋಸೆಫ್ ಫ್ರಾನ್ಸಿಸ್ನನ್ನು ಪುಟ್ಟೇನಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿದ ಸಾಕ್ಷ್ಯಾಧಾರ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ದೃಶ್ಯಾವಳಿ ಆಧರಿಸಿ ಆರೋಪಿಯನ್ನು ಸೆರೆಹಿಡಿದಿದ್ದಾರೆ. ಅನಾಥಾಶ್ರಮದ ಮೇಲ್ವಿಚಾರಕ: ಅನಾಥಾಶ್ರಮವೊಂದರ ಮೇಲ್ವಿಚಾರಕನಾಗಿದ್ದ ಜೋಸೆಫ್, ಅನಾಥಾಶ್ರಮದಲ್ಲಿ ಉಳಿದ ಆಹಾರವನ್ನ ರಸ್ತ ಬದಿಯಲ್ಲಿ ಹಾಕಿರುವುದಾಗಿ ಹೇಳಿಕೆ ನೀಡಿದ್ದಾನೆ. ಅದೇ ಆಹಾರವನ್ನ ತಿಂದು ನಾಯಿಗಳು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಹಾಗಾಗಿ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ. ಜ.26ರಂದು ಜೆ.ಪಿ.ನಗರದ ಎಂ.ಎಸ್.ರಾಮಯ್ಯ […]
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇತ್ತೀಚೆಗೆ ಬೀದಿ ನಾಯಿಗಳಿಗ ಸಾವಿಗೆ ಕಾರಣವಾಗಿದ್ದ ಆರೋಪಿ ಜೋಸೆಫ್ ಫ್ರಾನ್ಸಿಸ್ನನ್ನು ಪುಟ್ಟೇನಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿದ ಸಾಕ್ಷ್ಯಾಧಾರ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ದೃಶ್ಯಾವಳಿ ಆಧರಿಸಿ ಆರೋಪಿಯನ್ನು ಸೆರೆಹಿಡಿದಿದ್ದಾರೆ.
ಅನಾಥಾಶ್ರಮದ ಮೇಲ್ವಿಚಾರಕ: ಅನಾಥಾಶ್ರಮವೊಂದರ ಮೇಲ್ವಿಚಾರಕನಾಗಿದ್ದ ಜೋಸೆಫ್, ಅನಾಥಾಶ್ರಮದಲ್ಲಿ ಉಳಿದ ಆಹಾರವನ್ನ ರಸ್ತ ಬದಿಯಲ್ಲಿ ಹಾಕಿರುವುದಾಗಿ ಹೇಳಿಕೆ ನೀಡಿದ್ದಾನೆ. ಅದೇ ಆಹಾರವನ್ನ ತಿಂದು ನಾಯಿಗಳು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಹಾಗಾಗಿ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ.
ಜ.26ರಂದು ಜೆ.ಪಿ.ನಗರದ ಎಂ.ಎಸ್.ರಾಮಯ್ಯ ನಗರದಲ್ಲಿ ಅನುಮಾನಾಸ್ಪದವಾಗಿ ಶ್ವಾನಗಳು ಮೃತಪಟ್ಟಿದ್ದವು. ಆಹಾರ ತಿಂದು 7 ನಾಯಿಗಳು ಸಾವಿಗೀಡಾಗಿದ್ದರೆ, 4 ನಾಯಿಗಳು ಅಸ್ವಸ್ಥವಾಗಿದ್ದವು. ಇದರ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದ ಸ್ಥಳೀಯರು, ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.