ಶ್ವಾನಗಳಿಗೆ ವಿಷವುಣಿಸಿ ಕೊಂದಿದ್ದ ಆರೋಪಿ ಅರೆಸ್ಟ್​!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇತ್ತೀಚೆಗೆ ಬೀದಿ ನಾಯಿಗಳಿಗ ಸಾವಿಗೆ ಕಾರಣವಾಗಿದ್ದ ಆರೋಪಿ ಜೋಸೆಫ್ ಫ್ರಾನ್ಸಿಸ್​ನನ್ನು ಪುಟ್ಟೇನಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿದ ಸಾಕ್ಷ್ಯಾಧಾರ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ದೃಶ್ಯಾವಳಿ ಆಧರಿಸಿ ಆರೋಪಿಯನ್ನು ಸೆರೆಹಿಡಿದಿದ್ದಾರೆ. ಅನಾಥಾಶ್ರಮದ ಮೇಲ್ವಿಚಾರಕ: ಅನಾಥಾಶ್ರಮವೊಂದರ ಮೇಲ್ವಿಚಾರಕನಾಗಿದ್ದ ಜೋಸೆಫ್, ಅನಾಥಾಶ್ರಮದಲ್ಲಿ ಉಳಿದ ಆಹಾರವನ್ನ ರಸ್ತ ಬದಿಯಲ್ಲಿ ಹಾಕಿರುವುದಾಗಿ ಹೇಳಿಕೆ ನೀಡಿದ್ದಾನೆ. ಅದೇ ಆಹಾರವನ್ನ ತಿಂದು ನಾಯಿಗಳು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಹಾಗಾಗಿ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ. ಜ.26ರಂದು ಜೆ.ಪಿ.ನಗರದ ಎಂ.ಎಸ್.ರಾಮಯ್ಯ […]

ಶ್ವಾನಗಳಿಗೆ ವಿಷವುಣಿಸಿ ಕೊಂದಿದ್ದ ಆರೋಪಿ ಅರೆಸ್ಟ್​!
ಸಾಧು ಶ್ರೀನಾಥ್​

Updated on: Feb 01, 2020 | 4:50 PM

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇತ್ತೀಚೆಗೆ ಬೀದಿ ನಾಯಿಗಳಿಗ ಸಾವಿಗೆ ಕಾರಣವಾಗಿದ್ದ ಆರೋಪಿ ಜೋಸೆಫ್ ಫ್ರಾನ್ಸಿಸ್​ನನ್ನು ಪುಟ್ಟೇನಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿದ ಸಾಕ್ಷ್ಯಾಧಾರ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ದೃಶ್ಯಾವಳಿ ಆಧರಿಸಿ ಆರೋಪಿಯನ್ನು ಸೆರೆಹಿಡಿದಿದ್ದಾರೆ.

ಅನಾಥಾಶ್ರಮದ ಮೇಲ್ವಿಚಾರಕ:
ಅನಾಥಾಶ್ರಮವೊಂದರ ಮೇಲ್ವಿಚಾರಕನಾಗಿದ್ದ ಜೋಸೆಫ್, ಅನಾಥಾಶ್ರಮದಲ್ಲಿ ಉಳಿದ ಆಹಾರವನ್ನ ರಸ್ತ ಬದಿಯಲ್ಲಿ ಹಾಕಿರುವುದಾಗಿ ಹೇಳಿಕೆ ನೀಡಿದ್ದಾನೆ. ಅದೇ ಆಹಾರವನ್ನ ತಿಂದು ನಾಯಿಗಳು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಹಾಗಾಗಿ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ.

ಜ.26ರಂದು ಜೆ.ಪಿ.ನಗರದ ಎಂ.ಎಸ್.ರಾಮಯ್ಯ ನಗರದಲ್ಲಿ ಅನುಮಾನಾಸ್ಪದವಾಗಿ ಶ್ವಾನಗಳು ಮೃತಪಟ್ಟಿದ್ದವು. ಆಹಾರ ತಿಂದು 7 ನಾಯಿಗಳು ಸಾವಿಗೀಡಾಗಿದ್ದರೆ, 4 ನಾಯಿಗಳು ಅಸ್ವಸ್ಥವಾಗಿದ್ದವು. ಇದರ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದ ಸ್ಥಳೀಯರು, ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಿಸಿದ್ದರು.

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us