Raichur: ಶಾರ್ಟ್ ಸರ್ಕ್ಯೂಟ್ನಿಂದ ಎಸಿ ಸ್ಫೋಟ: ತಾಯಿ, ಇಬ್ಬರು ಮಕ್ಕಳು ಸಜೀವದಹನ
ಶಾರ್ಟ್ ಸರ್ಕ್ಯೂಟ್ನಿಂದ ಎಸಿ ಸ್ಫೋಟಗೊಂಡ ಹಿನ್ನೆಲೆ ತಾಯಿ ಮತ್ತು ಇಬ್ಬರು ಮಕ್ಕಳು ಸಜೀವ ದಹನವಾಗಿರುವಂತಹ ಘಟನೆ ರಾಯಚೂರು ತಾಲ್ಲೂಕಿನ ಶಕ್ತಿನಗರದಲ್ಲಿ ನಡೆದಿದೆ.
ರಾಯಚೂರು: ಶಾರ್ಟ್ ಸರ್ಕ್ಯೂಟ್ನಿಂದ ಎಸಿ ಸ್ಫೋಟಗೊಂಡ (AC blast) ಹಿನ್ನೆಲೆ ತಾಯಿ ಮತ್ತು ಇಬ್ಬರು ಮಕ್ಕಳು ಸಜೀವ ದಹನವಾಗಿರುವಂತಹ ಘಟನೆ ರಾಯಚೂರು ತಾಲ್ಲೂಕಿನ ಶಕ್ತಿನಗರದಲ್ಲಿ ನಡೆದಿದೆ. ತಾಯಿ ರಂಜಿತಾ(33), ಮಕ್ಕಳಾದ ಮೃದಲ್(13), ತಾರುಣ್ಯ(5) ಮೃತರು. ಮೂಲತಃ ಮಂಡ್ಯ ನಿವಾಸಿಗಳು ಎಂದು ಗುರುತಿಸಲಾಗಿದೆ. ಸಿದ್ದಲಿಂಗಯ್ಯ ಸ್ವಾಮಿ ಪತ್ನಿ ಮತ್ತು ಮಕ್ಕಳನ್ನು ಕಳೆದುಕೊಂಡಿದ್ದಾರೆ. ಸ್ಥಳಕ್ಕೆ ಶಕ್ತಿನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಮೃತರ ಸಂಬಂಧಿಕರ ಹೇಳಿಕೆ ಆಧರಿಸಿ ಪೊಲೀಸರು ದೂರು ದಾಖಲಿಸಲಿಕೊಂಡಿದ್ದಾರೆ.
ಅನುಮಾನಸ್ಪದವಾಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು
ಚಿಕ್ಕಮಗಳೂರು: ಅನುಮಾನಸ್ಪದವಾಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವನ್ನಪ್ಪಿರುವಂತಹ ಘಟನೆ ನಗರದ AIT ಬಾಯ್ಸ್ ವಸತಿ ನಿಲಯದಲ್ಲಿ ನಡೆದಿದೆ. ಕಿಶೋರ್ ಮೃತ ಇಂಜಿನಿಯರಿಂಗ್ ವಿದ್ಯಾರ್ಥಿ. ಹಾಸ್ಟೆಲ್ ಕಿಟಕಿಗೆ ನೇಣುಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿಯ ಶವಪತ್ತೆಯಾಗಿದೆ. ದ್ವಿತೀಯ ವರ್ಷದ ಇಂಜಿನಿಯರಿಂಗ್ ಓದುತ್ತಿದ್ದ ಮೃತ ಕಿಶೋರ್, ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ನಿವಾಸಿ. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಕ್ಲುಲ್ಲಕ ಕಾರಣಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ
ಆನೇಕಲ್: ಕ್ಲುಲ್ಲಕ ಕಾರಣಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವಂತಹ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಬನ್ನೇರುಘಟ್ಟ ಸಮೀಪದ ಹಕ್ಕಿ ಪಿಕ್ಕಿ ಕಾಲೋನಿಯಲ್ಲಿ ನಡೆದಿದೆ. ಹಕ್ಕಿ ಪಿಕ್ಕಿ ಕಾಲೋನಿ ನಿವಾಸಿ ದೊಡ್ಡ ಮಾದಯ್ಯ(57) ಕೊಲೆಯಾದ ವ್ಯಕ್ತಿ. ಕಳೆದ ಶನಿವಾರ ರಾತ್ರಿ ತಲೆ ಮೇಲೆ ಸೈಜು ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿದೆ. ಪಚ್ವಿ ಆಟ(ಹುಣಸೆ ಬೀಜ) ಆಡುವ ವೇಳೆ ಗಲಾಟೆ ನಡೆದಿದೆ. ಕುಡಿದ ಅಮಲಿನಲ್ಲಿ ಜೊತೆಯಲ್ಲಿದ್ದವರನ್ನು ನಿಂದಿಸಿದ್ದು, ಈ ವೇಳೆ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದೆ. ಬನ್ನೇರುಘಟ್ಟ ಪೊಲೀಸರಿಂದ ಆರು ಮಂದಿ ಶಂಕಿತ ಆರೋಪಿಗಳ ವಶಕ್ಕೆ ಪಡೆದಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಇದನ್ನೂ ಓದಿ: ಅಧಿಕಾರಿಗಳಿಂದ ಕಿರುಕುಳ ಆರೋಪ: ಆತ್ಮಹತ್ಯೆಗೆ ಯತ್ನಿಸಿದ ಅಂಬೇಡ್ಕರ್ ಸೇವಾ ಸಮಿತಿ ಮುಖಂಡ
ವಿಷ ಸೇವಿಸಿ ಪತಿ ಆತ್ಮಹತ್ಯೆ, ಪತ್ನಿ ವಿರುದ್ಧ ಪೊಲೀಸರಿಗೆ ದೂರು
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಉಗ್ಗೆಹಳ್ಳಿ ಗ್ರಾಮದ ಜಗದೀಶ್ ಎಂಬಾತ ಎರಡು ದಿನದ ಹಿಂದೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ. ಇದಕ್ಕೆ ಆತನ ಪತ್ನಿಯೇ ಕಾರಣ ಎಂದು ಮೃತನ ಕುಟುಂಬಸ್ಥರು ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ನೇತ್ರಾವತಿ ವಿರುದ್ಧ ದೂರು ನೀಡಿದ್ದರು. ನಿನ್ನೆ(ಮಾ.5) ಮನೆಯಿಂದ ನಾಪತ್ತೆಯಾಗಿದ್ದ ಮೃತನ ಪತ್ನಿ ನೇತ್ರಾವತಿ, ಮನನೊಂದು ಮನೆಯ ಸಮೀಪದ ಕಾಫಿ ತೋಟದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಕುರಿತುಪ್ರಕರಣ ದಾಖಲಾಗಿತ್ತು.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 9:51 pm, Mon, 6 March 23