ರಾಯಚೂರಿನ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಅವಘಡ: ಆಯತಪ್ಪಿ ಕೆಳಕ್ಕೆ ಬಿದ್ದ ಮೂವರು ಕಾರ್ಮಿಕರ ಸ್ಥಿತಿ ಗಂಭೀರ

ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಮೇಲಿಂದ ಕೆಳಕ್ಕೆ ಬಿದ್ದ ಮೂವರು ಕಾರ್ಮಿಕರ ಸ್ಥಿತಿ ಗಂಭೀರವಾಗಿರುವಂತಹ ಘಟನೆ ಜಿಲ್ಲೆಯ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಅವಘಡ ಸಂಭವಿಸಿದೆ.

ರಾಯಚೂರಿನ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಅವಘಡ: ಆಯತಪ್ಪಿ ಕೆಳಕ್ಕೆ ಬಿದ್ದ ಮೂವರು ಕಾರ್ಮಿಕರ ಸ್ಥಿತಿ ಗಂಭೀರ
ಪ್ರಾತಿನಿಧಿಕ ಚಿತ್ರImage Credit source: vistaranews.com
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Jan 04, 2023 | 8:01 PM

ರಾಯಚೂರು: ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಮೇಲಿಂದ ಕೆಳಕ್ಕೆ ಬಿದ್ದ ಮೂವರು ಕಾರ್ಮಿಕರ (labourers) ಸ್ಥತಿ ಗಂಭೀರವಾಗಿರುವಂತಹ ಘಟನೆ ಜಿಲ್ಲೆಯ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಅವಘಡ ಸಂಭವಿಸಿದೆ. ಸೋನುಕುಮಾರ್(28), ಮಹದೇವ(32), ರಾಮಪ್ರೀತ್​(29) ಗಂಭೀರವಾಗಿ ಗಾಯಗೊಂಡ ಕಾರ್ಮಿಕರು. ಆರ್​ಟಿಪಿಎಸ್​ನ 1ನೇ ಘಟಕದ 50 ಮೀಟರ್​ ಎತ್ತರದಲ್ಲಿ ಸ್ಕ್ರ್ಯಾಬ್​ ಕಟಿಂಗ್​ ಕೆಲಸ ಮಾಡುವಾಗ ಆಯತಪ್ಪಿ ಕೆಳಗೆಬಿದ್ದು ದುರ್ಘಟನೆ ಸಂಭಸಿದೆ. ಸದ್ಯ ಗಾಯಾಳುಗಳನ್ನು ರಾಯಚೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಶಕ್ತಿನಗರ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದರು. ಇನ್ನು ಶಕ್ತಿನಗರದ ಶಾಖೋತ್ಪನ್ನ ವಿದ್ಯುತ್ ಉತ್ಪಾದನಾ 7ನೇ ಘಟಕದ ಎಚ್. ಟಿ. 6.6 ಕೆ. ವಿ. ಪ್ಯಾನಲ್​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡತ್ತು. ಬೆಂಕಿಯಿಂದ 210ಮೆಗಾ ವ್ಯಾಟ್ ವಿದ್ಯುತ್​ ಉತ್ಪಾದನ ಘಟಕದ ಯು. ಸಿ.ಬಿ. ಸ್ವಿಚ್ ಗೇರ್‌ ಸುಟ್ಟು ಕರಕಲಾಗಿದ್ದು, ಒಂದು ವಾರ ಕಾಲ ವಿದ್ಯುತ್​ ಉತ್ಪಾದನೆಯನ್ನ ಸ್ಥಗಿತ ಮಾಡಲಾಗಿದೆ. ಈ ಕುರಿತು ಶಕ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ತಲೆ ಮೇಲೆ ಕಲ್ಲು ಎತ್ತಿಹಾಕಿ ಯುವಕನ ಬರ್ಬರ ಹತ್ಯೆ

ಕಲಬುರಗಿ: ತಲೆ ಮೇಲೆ ಕಲ್ಲು ಎತ್ತಿಹಾಕಿ ಯುವಕನ ಬರ್ಬರ ಹತ್ಯೆ ಮಾಡಿರುವಂತಹ ಘಟನೆ ಜಿಲ್ಲೆಯ ಭವಾನಿ ನಗರದ ಜನನಿಬಿಡ ಪ್ರದೇಶದಲ್ಲಿ ನಡೆದಿದೆ. ಪ್ರಶಾಂತ್ ಕುಂಬಾರ್(30) ಹತ್ಯೆಗೊಳಗಾದ ಯುವಕ. ಮಂಜುನಾಥ ಸ್ವಾಮಿ ಎಂಬಾತನಿಂದ ಕೃತ್ಯವೆಸಲಾಗಿದೆ. ಹತ್ಯೆಯಾದ ಪ್ರಶಾಂತ್ ಕುಂಬಾರ್ ಚೆನ್ನವೀರ ನಗರದ ನಿವಾಸಿ ಎಂದು ತಿಳಿದುಬಂದಿದೆ. ಹಳೇ ವೈಷಮ್ಯದ ಹಿನ್ನೆಲೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಕಮಿಷನರ್ ಡಾ.ವೈ.ಎಸ್.ರವಿಕುಮಾರ್ ಭೇಟಿ ನೀಡಿ ಪರಶೀಲನೆ ಮಾಡಿದರು. ಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಮೈಸೂರು: ರಕ್ಷಿಸಬೇಕಾದವಳೇ ಸುಪಾರಿ ಕೊಟ್ಟು ಕೊಲ್ಲಿಸಿದ್ಲಾ ಲೇಡಿ ಪೊಲೀಸ್ ಕಾನ್ಸ್​ಟೇಬಲ್?

ಬೆಂಗಳೂರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಯುವತಿ ಶವ ಪತ್ತೆ

ಬೆಂಗಳೂರು: ನಗರದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಯುವತಿ ಶವ ಪತ್ತೆಯಾಗಿರುವಂತಹ ಘಟನೆ ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. 23 ವರ್ಷದ ಯುವತಿ ಶವ ಎನ್ನಲಾಗುತ್ತಿದೆ. ಗೂಡ್ಸ್ ಪ್ಲಾಟ್​ಫಾರ್ಮ್​ನ ಬಾಕ್ಸ್​ವೊಂದರಲ್ಲಿ ಶವ ಪತ್ತೆಯಾಗಿದ್ದು, ಪ್ಲಾಸ್ಟಿಕ್ ಕವರ್​​ನಲ್ಲಿ ಶವ ಇಟ್ಟು ದುಷ್ಕರ್ಮಿಗಳು ಸೀಲ್ ಮಾಡಿದ್ದಾರೆ. ವಾಸನೆ ಬಂದ ಹಿನ್ನೆಲೆ ಪರಿಶೀಲಿಸಿದಾಗ ಯುವತಿ ಶವ ಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಯಶವಂತಪುರ ರೈಲ್ವೆ ಪೊಲೀಸ್​​​ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಬೆಂಗಳೂರಿನ ಕಾಲೇಜೊಂದರಲ್ಲಿ ಹಾಡಹಗಲೇ ಯುವತಿಗೆ ಚಾಕು ಇರಿದು ಕೊಲೆ ಮಾಡಿದ ಯುವಕ: ಪ್ರೀತಿ ಪ್ರೇಮದ ಶಂಕೆ

ಎರಡು ಪ್ರಕರಣಕ್ಕೆ ಸಾಮ್ಯತೆ

ಕಳೆದ ಒಂದು ತಿಂಗಳಲ್ಲಿ ಎರಡನೇ ಮೃತದೇಹ ಪತ್ತೆಯಾಗಿದ್ದು, ಇದೇ ಮಾದರಿಯಲ್ಲಿ ಕಳೆದ ಡಿಸೆಂಬರ್ 6 ರಂದು ರೈಲ್ವೆ ನಿಲ್ದಾಣದಲ್ಲೂ ಮೃತದೇಹ ಪತ್ತೆಯಾಗಿತ್ತು. ಕೆ.ಜಿಎಫ್​ನಿಂದ ಬೆಂಗಳೂರೊಗೆ ಬರುತ್ತಿದ್ದ ರೈಲಿನಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ಮಹಿಳೆ ದೇಹ ಪತ್ತೆಯಾಗಿತ್ತು. ಬೆಡ್ ಶೀಟ್, ಬಟ್ಟೆಗಳ ನಡುವೆ ದೇಹ ತುರುಕಲಾಗಿತ್ತು. ಮಹಿಳೆಯ ಯಾವುದೇ ಗುರುತುಗಳು ಪತ್ತೆಯಾಗಿರಲಿಲ್ಲ. ರೈಲು ಖಾಲಿ ಆಗಿದ್ರು ಚೀಲವನ್ನು ಯಾರು ತೆಗೆದುಕೊಳ್ಳದೆ ಇದ್ದಾಗ ಅನುಮಾನ ಬಂದು ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಬಳಿಕ ಪರಿಶೀಲನೆ ಮಾಡಿದಾಗ ಮೃತ ದೇಹವಿರುವುದು ಪತ್ತೆಯಾಗಿತ್ತು. ಬೈಯಪ್ಪನಹಳ್ಳಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಸದ್ಯ ಎರಡು ಪ್ರಕರಣಕ್ಕೆ ಸಾಮ್ಯತೆ ಇದೆ ಎನ್ನಲಾಗುತ್ತಿದೆ.

ರಾಜ್ಯದ ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ