ರಾಯಚೂರು: ಕೂಲಿ ಕೆಲಸ ಮಾಡುತ್ತೇನೆಂದು ಕಳ್ಳತನ ಮಾಡುತ್ತಿದ್ದ ಕುಖ್ಯಾತ ಕಳ್ಳನ ಬಂಧನ

ಕೂಲಿ ಕೆಲಸ ಮಾಡುತ್ತೇನೆಂದು ಬಿಂಬಿಸಿ ಕಳ್ಳತನ ಮಾಡುತ್ತಿದ್ದ ರಾಯಚೂರಿನ ಕುಖ್ಯಾತ ಕಳ್ಳ ನಾಗರಾಜ್ ದೇವರಮನಿ ಎಂಬಾತನನ್ನು ದೇವದುರ್ಗ ಪೊಲೀಸರು ಬಂಧಿಸಿದ್ದಾರೆ. ಆರೋಪಿ ನಾಗರಾಜ್ ಇತ್ತೀಚೆಗೆ ಮನೆಗಳ್ಳತನ ಹಾಗೂ ಚಿನ್ನದ ಅಂಗಡಿಯಲ್ಲಿ ಕಳ್ಳತನ ಮಾಡಿದ್ದ. ಸದ್ಯ ಪೊಲೀಸರು ಬಂಧಿಸಿದ್ದಾರೆ.

ರಾಯಚೂರು: ಕೂಲಿ ಕೆಲಸ ಮಾಡುತ್ತೇನೆಂದು ಕಳ್ಳತನ ಮಾಡುತ್ತಿದ್ದ ಕುಖ್ಯಾತ ಕಳ್ಳನ ಬಂಧನ
ನಾಗರಾಜ್ ದೇವರಮನಿ ಎಂಬ ಕಳ್ಳನನ್ನು ಬಂಧಿಸಿದ ಪೊಲೀಸರು
Follow us
TV9 Web
| Updated By: ಆಯೇಷಾ ಬಾನು

Updated on: Sep 04, 2023 | 12:48 PM

ರಾಯಚೂರು, ಸೆ.24: ಕೂಲಿ ಕೆಲಸ ಮಾಡುತ್ತೇನೆಂದು ಬಿಂಬಿಸಿ ಕಳ್ಳತನ ಮಾಡುತ್ತಿದ್ದ ರಾಯಚೂರಿನ(Raichur) ಕುಖ್ಯಾತ ಕಳ್ಳ ನಾಗರಾಜ್ ದೇವರಮನಿಯನ್ನು ದೇವದುರ್ಗ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಇತ್ತೀಚೆಗೆ ಮನೆಗಳ್ಳತನ ಹಾಗೂ ಚಿನ್ನದ ಅಂಗಡಿಯಲ್ಲಿ ಕಳ್ಳತನ ಮಾಡಿದ್ದ. ಸದ್ಯ ಬಂಧಿತನಿಂದ 6 ಲಕ್ಷ ಮೌಲ್ಯದ 85 ಗ್ರಾಂ ಚಿನ್ನಾಭರಣ ಹಾಗೂ 70 ಗ್ರಾಂ ಬೆಳ್ಳಿ ಆಭರಣ ಜಪ್ತಿ ಮಾಡಲಾಗಿದೆ. ದೇವದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿ ಬಂಧನ

ಇನ್ನು ಮತ್ತೊಂದೆಡೆ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಕೊಂಗರಹಳ್ಳಿ ಬಳಿ ಗಾಂಜಾ ಮಾರುತ್ತಿದ್ದ ಆಂಧ್ರದ ಪೆದ್ದಗಿರಗರಪಲ್ಲಿ ಮೂಲದ ಚಲಪತಿ ಎಂಬಾತನನ್ನು ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಬಳಿ ಇದ್ದ 6 ಕೆಜಿ 160 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ. ಕೆಜಿಎಫ್ ಸಿಇಎನ್ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಪ್ರತ್ಯೇಕ ಘಟನೆ: ಸಮುದ್ರ ವಿಹಾರಕ್ಕೆ ಬಂದಿದ್ದ ವೈದ್ಯ ಸಮುದ್ರಪಾಲು, ಹಾಸನದಲ್ಲಿ ಕೋಟೆ ನೋಡಲು ಬಂದು ಕಾಲು ಜಾರಿ ಬಿದ್ದಿದ್ದ ಯುವಕ ಪಾರು

ಯುವಕನಿಗೆ ಚೂರಿ ಇರಿದ ಮೂವರು ಆರೋಪಿಗಳ ಬಂಧನ

ಮಂಗಳೂರು ಹೊರವಲಯದ ಸುರತ್ಕಲ್‌ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ಯುವಕನಿಗೆ ಚೂರಿ ಇರಿದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸುರತ್ಕಲ್ ಕಳವಾರು ನಿವಾಸಿಗಳಾದ ಪ್ರಶಾಂತ್ (28), ಧನರಾಜ್ (23), ಯಜ್ಞೆಶ್ (22) ಬಂಧಿತ ಆರೋಪಿಗಳು.

ಮಂಗಳೂರು ಹೊರವಲಯದ ಕಳವಾರು ಎಂಬಲ್ಲಿ‌ ಕಳವಾರು ಶಾಂತಿಗುಡ್ಡೆ ನಿವಾಸಿ ಅಬ್ದುಲ್ ಸಫ್ವಾನ್‌ (23) ಎಂಬಾತನಿಗೆ ಮೂವರು ಆರೋಪಿಗಳು ಚೂರಿ ಇರಿದಿದ್ದರು. ಅಬ್ದುಲ್ ಸಫ್ವಾನ್ ತನ್ನ ಸ್ನೇಹಿತ ಮೊಹಮ್ಮದ್ ಸಫ್ವಾನ್ ನೊಂದಿಗೆ ಬೈಕ್ ನಲ್ಲಿ ತೆರಳುತಿದ್ದಾಗ ಎರಡು ಬೈಕ್​ನಲ್ಲಿ ಬಂದ ಆರೋಪಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದರು. ಘಟನೆಯಲ್ಲಿ ಅಬ್ದುಲ್ ಸಫ್ವಾನ್‌ ಅವರ ಕೈ, ತೋಳು ಹಾಗೂ ಬೆನ್ನಿಗೆ ಚೂರಿಯಿಂದ ಇರಿದ ಗಾಯಗಳಾಗಿದ್ದವು. ಗಾಯಗೊಂಡ ಸಫ್ವಾನ್​ನನ್ನು ಮಂಗಳೂರಿನ ಖಾಸಗಿ‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಸಫ್ವಾನ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ತೆರಳಿ ಸುರತ್ಕಲ್ ಠಾಣೆಯ ಪೊಲೀಸರು ತನಿಖೆ ನಡೆಸಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್