ರಾಯಚೂರು: ಮಾಜಿ ಗ್ರಾ.ಪಂಚಾಯತಿ ಸದಸ್ಯನಿಂದ ಲೈಂಗಿಕ ಕಿರುಕುಳ: ಪೊಲೀಸ್ ಠಾಣೆಗೆ ದೂರು ನೀಡಿದ ಮಹಿಳೆಯರು
ಮಾಜಿ ಗ್ರಾಮ ಪಂಚಾಯತಿ ಸದಸ್ಯನಿಂದ ಅದೇ ಗ್ರಾಮದ ಒಂದೇ ಕುಟುಂಬದ ಇಬ್ಬರು ಹೆಣ್ಣುಮಕ್ಕಳ ಮೇಲೆ ನಿತ್ಯ ಕಿರುಕುಳ ನೀಡುತ್ತಿರುವುದಾಗಿ ಆರೋಪ ಕೇಳಿಬಂದಿದ್ದು, ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹಿರೇಹಣಗಿ ಗ್ರಾಮದ ಮಾಜಿ ಗ್ರಾಮ ಪಂಚಾಯತಿ ಸದಸ್ಯ ಹನುಮಂತಪ್ಪ ಎಂಬುವವನಿಂದ ಒಂದೇ ಕುಟುಂಬದ ಇಬ್ಬರು ಮಹಿಳೆಯರಿಗೆ ಲೈಂಗಿಕ ಕಿರುಕುಳ ಕೊಟ್ಟಿರುವುದಾಗಿ ಆರೋಪ ಕೇಳಿಬಂದಿದೆ. ಅದೇ ಗ್ರಾಮದ ಮಹಿಳೆಯರು ಮನೆಯಿಂದ ಹೊಲಕ್ಕೆ ಹೋಗುವಾಗ ಟಾರ್ಚರ್ ನೀಡುತ್ತಿದ್ದನಂತೆ, ಜೊತೆಗೆ ಅಂಗಡಿ ಮುಂಗಟ್ಟುಗಳಿಗೆ ಹೋದರು ಫಾಲೋ ಮಾಡಿಕೊಂಡು ಬಂದು ಕಿರಕುಳ ಕೊಡುತ್ತಿರುವುದಾಗಿ ಆರೋಪ ಕೇಳಿ ಬಂದಿದ್ದು, ಇದೀಗ ಗ್ರಾ.ಪಂ. ಸದಸ್ಯನ ವಿರುದ್ಧ ಕವಿತಾಳ ಪೊಲೀಸ್ ಠಾಣೆಯಲ್ಲಿ ಮಹಿಳೆಯರು ಪ್ರಕರಣ ದಾಖಲಿಸಿದ್ದಾರೆ.
ಇನ್ನು ಆರೋಪಿ ಹನುಮಂತಪ್ಪ 2 ವರ್ಷಗಳಿಂದ ನಿತ್ಯ ಕಿರುಕುಳ ನೀಡುತ್ತಿದ್ದು, ಒಂದೊಮ್ಮೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ಬಂದು ಸಿಗರೇಟ್ನಿಂದ ಮೈಸುಟ್ಟು ವಿಕೃತಿ ಮೆರೆದಿದ್ದಾನೆ. ಇದರ ಜೊತೆಗೆ ಸುಖಾ ಸುಮ್ಮನೆ ಫೋನ್ನಲ್ಲಿ ಮಾತನಾಡಿರುವ ಆಡಿಯೋ ಇವೆ ಎಂದು ಬೆದರಿಕೆ ಹಾಕಿ, ಹೇಳಿದಂತೆ ಕೇಳಲೇ ಬೇಕು, ಇಲ್ಲದಿದ್ರೆ ಆಡಿಯೋ ವೈರಲ್ ಮಾಡೋದಾಗಿ ಬ್ಲಾಕ್ ಮೇಲ್ ಕೂಡ ಮಾಡಿದ್ದಾನೆ. ಇದರಿಂದ ನೊಂದ ಮಹಿಳೆಯರು ಇದೀಗ ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಮಲೆಮಹದೇಶ್ವರ ಬೆಟ್ಟದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ
ಚಾಮರಾಜನಗರ: ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಬೆಟ್ಟದ ಯಾತ್ರಿನಿವಾಸದ ಹಿಂದೆ ಇರುವ ಮರಕ್ಕೆ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಕುರಿತು ಮಹದೇಶ್ವರ ಬೆಟ್ಟದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ