ರಾಯಚೂರು: ದಲಿತ ಮುಖಂಡನ ಬರ್ಬರ ಹತ್ಯೆ ಪ್ರಕರಣ; ಮೂವರ ಬಂಧನ

| Updated By: ವಿವೇಕ ಬಿರಾದಾರ

Updated on: Nov 02, 2023 | 11:46 AM

ದಲಿತ ಮುಖಂಡನ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನ್ವಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ಮಾರ್ಗದರ್ಶನದಲ್ಲಿ ತನಿಖೆ ನಡೆದಿದೆ.

ರಾಯಚೂರು: ದಲಿತ ಮುಖಂಡನ ಬರ್ಬರ ಹತ್ಯೆ ಪ್ರಕರಣ; ಮೂವರ ಬಂಧನ
ಕೊಲೆಯಾದ ಪ್ರಸಾದ್​
Follow us on

ರಾಯಚೂರು ನ.02: ದಲಿತ ಮುಖಂಡನ (Dalita Leader) ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನ್ವಿ ಪೊಲೀಸರು (Police) ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಕೇಶವ, ರಾಮು, ದೇವರೆಡ್ಡಿ ಬಂಧಿತ ಆರೋಪಿಗಳು. ವಿಚಾರಣೆ ವೇಳೆ, ಮೃತ ಪ್ರಸಾದ್ ಈ ಹಿಂದೆ ನಮಗೆ ಕಿರುಕುಳ ನೀಡಿದ್ದನು. ಈ ಹಿನ್ನೆಲೆಯಲ್ಲಿ ಕೊಲೆ ಮಾಡಿರುವುದಾಗಿ ಆರೋಪಿಗಳು ಬಾಯಿಬಿಟ್ಟಿದ್ದಾರೆ. ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ಮಾರ್ಗದರ್ಶನದಲ್ಲಿ ತನಿಖೆ ನಡೆದಿದೆ. ಅಕ್ಟೋಬರ್ 30 ರಂದು ಮಾನ್ವಿ ತಾಲ್ಲೂಕಿನ ಮದ್ಲಾಪುರದ ಕಾಲುವೆ ಬಳಿ ದಲಿತ ಮುಖಂಡ ಪ್ರಸಾದ್ (40) ಎಂಬುವರನ್ನು ಕೊಲೆ ಮಾಡಲಾಗಿತ್ತು. ಮಾನ್ವಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಣೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಮಡಿಕೇರಿ: ಕಳೆದ ಭಾನುವಾರ ಕಾಣೆಯಾಗಿದ್ದ ಸೋಮವಾರಪೇಟೆ ತಾಲೂಕಿನ ಸುಂಟಿಕೊಪ್ಪ ನಿವಾಸಿ ಪೌಲ್ ಡಿಸೋಜಾ (50) ಅವರ ಶವ ಪತ್ತೆಯಾಗಿದೆ. ಡಿಸೋಜಾ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕೌಟುಂಬಿಕ ಕಲಹ, ಚಾಕುವಿನಿಂದ ಇರಿದು ಸೋದರ ಮಾವನನ್ನೇ ಕೊಲೆಗೈದ ಅಳಿಯ

ಟ್ರ್ಯಾಕ್ಟರ್​​ಗೆ ಲಾರಿ ಡಿಕ್ಕಿಯಾಗಿ ವ್ಯಕ್ತಿ ಸಾವು

ಚಿತ್ರದುರ್ಗ: ಹಿರಿಯೂರು ತಾಲೂಕಿನ ಕೆ.ಆರ್.ಹಳ್ಳಿ ಗೇಟ್ ಬಳಿ ಟ್ರ್ಯಾಕ್ಟರ್​​ಗೆ ಲಾರಿ ಡಿಕ್ಕಿಯಾಗಿ ಓರ್ವ ಮೃತಪಟ್ಟಿದ್ದಾನೆ. ತುಮಕೂರು ಜಿಲ್ಲೆ ಶಿರಾ ಮೂಲದ ನಿವಾಸಿ ಮಂಜಣ್ಣ (45) ಮೃತ ದುರ್ದೈವಿ. ಘಟನೆಯಲ್ಲಿ 8 ಮಂದಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳಿಗೆ ಹಿರಿಯೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹಿರಿಯೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ