Crime News: ರಾಜಸ್ಥಾನದ ಕೋಚಿಂಗ್ ಹಾಸ್ಟೆಲ್‌ನಲ್ಲಿ 18 ವರ್ಷದ ವಿದ್ಯಾರ್ಥಿಯ ಶವ ಪತ್ತೆ; ಮರಣೋತ್ತರ ಪರೀಕ್ಷೆಗೆ ಪೋಷಕರು ನಿರಾಕರಣೆ

Shocking News: ರಾಜಸ್ಥಾನದ ಕೋಟಾದಲ್ಲಿ ಮೃತ ವಿದ್ಯಾರ್ಥಿಯ ಪೋಷಕರು ಮರಣೋತ್ತರ ಪರೀಕ್ಷೆ ನಡೆಸಲು ನಿರಾಕರಿಸಿದ್ದು, ಬಳಿಕ ಅವರ ಮನವೊಲಿಸಿ ಮೃತದೇಹವನ್ನು ಅಂತಿಮ ವಿಧಿವಿಧಾನಗಳಿಗಾಗಿ ಅವರಿಗೆ ಹಸ್ತಾಂತರಿಸಲಾಗಿದೆ. ಮೃತರು ಉತ್ತರ ಪ್ರದೇಶದ ಪ್ರಯಾಗರಾಜ್ ನಿವಾಸಿಯಾಗಿದ್ದಾರೆ.

Crime News: ರಾಜಸ್ಥಾನದ ಕೋಚಿಂಗ್ ಹಾಸ್ಟೆಲ್‌ನಲ್ಲಿ 18 ವರ್ಷದ ವಿದ್ಯಾರ್ಥಿಯ ಶವ ಪತ್ತೆ; ಮರಣೋತ್ತರ ಪರೀಕ್ಷೆಗೆ ಪೋಷಕರು ನಿರಾಕರಣೆ
ಸಾಂದರ್ಭಿಕ ಚಿತ್ರ
Follow us
ಸುಷ್ಮಾ ಚಕ್ರೆ
|

Updated on: Aug 20, 2024 | 6:16 PM

ಜೈಪುರ: ರಾಜಸ್ಥಾನದ ಕೋಟಾದಲ್ಲಿ 18 ವರ್ಷದ ಕೋಚಿಂಗ್ ವಿದ್ಯಾರ್ಥಿಯೊಬ್ಬ ತನ್ನ ಹಾಸ್ಟೆಲ್ ಕೊಠಡಿಯ ಸ್ನಾನಗೃಹದಲ್ಲಿ ಅನುಮಾನಾಸ್ಪದವಾಗಿ ಶವವಾಗಿ ಪತ್ತೆಯಾಗಿದ್ದಾನೆ. ಹಾಸ್ಟೆಲ್​ನ ಉಸ್ತುವಾರಿಯಿಂದ ಮಾಹಿತಿ ಪಡೆದ ಪೊಲೀಸ್ ತಂಡ ಸ್ಥಳಕ್ಕೆ ಆಗಮಿಸಿ ಸಾಕ್ಷ್ಯ ಸಂಗ್ರಹಿಸಿದೆ. ಆದರೆ, ಆ ಬಾಲಕನ ಪೋಷಕರ ಕೋರಿಕೆಯ ಮೇರೆಗೆ ಪೊಲೀಸರು ಎಫ್‌ಐಆರ್ ದಾಖಲಿಸಿಲ್ಲ. ಮರಣೋತ್ತರ ಪರೀಕ್ಷೆ ನಡೆಸಲು ಪೋಷಕರು ಕೂಡ ನಿರಾಕರಿಸಿದ್ದಾರೆ. ಅವರ ಇಚ್ಛೆಯ ಮೇರೆಗೆ ಮೃತದೇಹವನ್ನು ಅಂತಿಮ ವಿಧಿವಿಧಾನಕ್ಕಾಗಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತನನ್ನು ಉತ್ತರ ಪ್ರದೇಶದ ಪ್ರಯಾಗರಾಜ್ ನಿವಾಸಿ ಕುಶಾಗ್ರಾ ರಸ್ತೋಗಿ ಎಂದು ಗುರುತಿಸಲಾಗಿದ್ದು, ಸೋಮವಾರದಂದು ಆತನ ಶವ ಪತ್ತೆಯಾಗಿರುವ ಜವಾಹರ್ ನಗರ ಪ್ರದೇಶದ ಹಾಸ್ಟೆಲ್‌ನಲ್ಲಿ ವಾಸವಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈ ವರ್ಷದ ಏಪ್ರಿಲ್‌ನಲ್ಲಿ ಇಂಜಿನಿಯರಿಂಗ್ ಕೋರ್ಸ್‌ಗೆ ಪ್ರವೇಶಕ್ಕಾಗಿ ಕೋಟಾದ ಕೋಚಿಂಗ್ ಇನ್‌ಸ್ಟಿಟ್ಯೂಟ್‌ಗೆ ಕುಶಾಗ್ರಾ ರಸ್ತೋಗಿ ದಾಖಲಾಗಿದ್ದರು ಮತ್ತು ಹಾಸ್ಟೆಲ್‌ನಲ್ಲಿ ವಾಸಿಸಲು ಪ್ರಾರಂಭಿಸಿದರು ಎಂದು ಅವರು ಹೇಳಿದರು.

ಇದನ್ನೂ ಓದಿ: Shocking News: 14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಸ್ತನ, ಗುಪ್ತಾಂಗ ಕತ್ತರಿಸಿ ಬರ್ಬರ ಹತ್ಯೆ

ಸೋಮವಾರ ಬೆಳಿಗ್ಗೆ ಆತ ಎಂದಿನಂತೆ ಎದ್ದ ನಂತರ ಫ್ರೆಶ್ ಆಗಲು ಸ್ನಾನಗೃಹಕ್ಕೆ ಹೋಗಿದ್ದ. ಅಲ್ಲೇ ಆತನ ಶವ ಪತ್ತೆಯಾಗಿದೆ ಎಂದು ಡಿಎಸ್ಪಿ ರಾಜೇಶ್ ಟೇಲರ್ ತಿಳಿಸಿದ್ದಾರೆ. 15-20 ನಿಮಿಷಗಳ ನಂತರವೂ ಹುಡುಗ ಹೊರಗೆ ಬರದಿದ್ದಾಗ, ಅಲ್ಲಿದ್ದವರು ಸ್ನಾನಗೃಹದ ಬಾಗಿಲನ್ನು ಬಡಿದರು. ಆದರೂ ಲಾಕ್ ತೆರೆಯದ ಕಾರಣ ಬಾಗಿಲನ್ನು ಒಡೆಯಲಾಗಿತ್ತು. ಆಗ ಆತ ನೆಲದ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಮಲಗಿರುವುದನ್ನು ಕಂಡು ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ವೈದ್ಯರು ಅವರಿಗೆ ಸಿಪಿಆರ್ ನೀಡಿದರು ಆದರೆ ಅಷ್ಟರಲ್ಲಾಗಲೇ ಆತ ಸಾವನ್ನಪ್ಪಿದ್ದ. ಬಳಿಕ ಮೃತನ ಪೋಷಕರು ಮರಣೋತ್ತರ ಪರೀಕ್ಷೆಯನ್ನು ನಿರಾಕರಿಸಿದರು, ಆದ್ದರಿಂದ ಈ ವಿಷಯದಲ್ಲಿ ಯಾವುದೇ ಪ್ರಕರಣವನ್ನು ದಾಖಲಿಸದೆ ದೇಹವನ್ನು ಅವರಿಗೆ ಹಸ್ತಾಂತರಿಸಲಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!