Shocking News: ಅಮ್ಮನೊಂದಿಗೆ ಬೆಚ್ಚಗೆ ಮಲಗಿದ್ದ 3 ವರ್ಷದ ಮಗುವನ್ನು ಎತ್ತಿಕೊಂಡು ಹೋಗಿ ಅತ್ಯಾಚಾರ!

Crime News: ರಾಜಸ್ಥಾನದ ಜೋಧ್‌ಪುರದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ 3 ವರ್ಷದ ಹೆಣ್ಣು ಮಗುವನ್ನು ಅಪಹರಿಸಿ ಅತ್ಯಾಚಾರವೆಸಗಿದ್ದಾನೆ. ಆ ಕಾಮುಕ ಮಗುವನ್ನು ಹೆಗಲ ಮೇಲೆ ಎತ್ತಿಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿ ವಿಡಿಯೋದಲ್ಲಿ ಸೆರೆಯಾಗಿದೆ. ಈ ಕುರಿತು ಪೊಲೀಸ್ ತನಿಖೆ ನಡೆಯುತ್ತಿದೆ.

Shocking News: ಅಮ್ಮನೊಂದಿಗೆ ಬೆಚ್ಚಗೆ ಮಲಗಿದ್ದ 3 ವರ್ಷದ ಮಗುವನ್ನು ಎತ್ತಿಕೊಂಡು ಹೋಗಿ ಅತ್ಯಾಚಾರ!
3 ವರ್ಷದ ಮಗುವನ್ನು ಎತ್ತಿಕೊಂಡು ಹೋಗಿ ಅತ್ಯಾಚಾರ!

Updated on: Aug 19, 2024 | 10:45 PM

ಜೋಧ್​ಪುರ: ರಾಜಸ್ಥಾನದ ಜೋಧ್​ಪುರದಲ್ಲಿ ದೇವಸ್ಥಾನದ ಹೊರಗೆ ತನ್ನ ಹೆತ್ತವರೊಂದಿಗೆ ಮಲಗಿದ್ದಾಗ 3 ವರ್ಷದ ಹೆಣ್ಣು ಮಗುವನ್ನು ಅಪಹರಿಸಲಾಗಿದೆ. ಆಕೆಯನ್ನು ನಿರ್ಜನ ಪ್ರದೇಶಕ್ಕೆ ಎತ್ತಿಕೊಂಡು ಹೋಗಿ ಅತ್ಯಾಚಾರ ನಡೆಸಲಾಗಿದೆ. ಬೆಳಗ್ಗೆ 6.30ರ ಸುಮಾರಿಗೆ ಸ್ಟಾಲ್ ಹಾಕಲು ಆ ಸ್ಥಳಕ್ಕೆ ಬಂದ ಮಹಿಳೆಯೊಬ್ಬರು ಮಗುವನ್ನು ಬಟ್ಟೆಯಲ್ಲಿ ಸುತ್ತಿ ಎಸೆದಿರುವುದನ್ನು ನೋಡಿ ಪೊಲೀಸರಿಗೆ ವಿಷಯ ತಿಳಿಸಿದ್ದಾಳೆ. ಆ ಮಗುವಿನ ಮೈಮೇಲೆ ಗಾಯಗಳು, ತುಟಿಗಳು ಮತ್ತು ಬೆನ್ನಿನ ಮೇಲೆ ಕಚ್ಚಿದ ಗುರುತುಗಳಿದ್ದವು.

ರಾಜಸ್ಥಾನದ ಜೋಧ್​ಪುರ ಜಿಲ್ಲೆಯಲ್ಲಿ ಚಿಂದಿ ಆಯುವವನ 3 ವರ್ಷದ ಮಗಳ ಮೇಲೆ ಭಾನುವಾರ ಮುಂಜಾನೆ ಈ ಅತ್ಯಾಚಾರ ನಡೆದಿದೆ. ವಾಸಿಸಲು ಮನೆಯಿಲ್ಲದ ಕಾರಣದಿಂದ ಆತ ತನ್ನ ಹೆಂಡತಿ ಮತ್ತು ಮಗುವಿನ ಜೊತೆ ದೇವಸ್ಥಾನದ ಹೊರಭಾಗದಲ್ಲಿ ಮಲಗುತ್ತಿದ್ದ. ಈ ವೇಳೆ ಆತನ ಕೇವಲ 3 ವರ್ಷದ ಮಗುವನ್ನು ಕಿಡ್ನಾಪ್ ಮಾಡಿ, ಅತ್ಯಾಚಾರ ನಡೆಸಲಾಗಿದೆ.


ಇದನ್ನೂ ಓದಿ: Shocking News: ಅಣ್ಣನಿಗೆ ರಾಖಿ ಕಟ್ಟಲು ಹೋಗುತ್ತೇನೆ ಎಂದ ಪತ್ನಿಯ ಮೂಗು ಕತ್ತರಿಸಿದ ಗಂಡ

ಮಾಹಿತಿ ಮೇರೆಗೆ ಸ್ಥಳಕ್ಕಾಗಮಿಸಿದ ಪೊಲೀಸರು ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ. ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ತಂಡವನ್ನೂ ಕರೆಸಿ ಪರಿಶೀಲನೆ ನಡೆಸಲಾಗಿದೆ. ನಸುಕಿನ 2 ಗಂಟೆ ಸುಮಾರಿಗೆ ವ್ಯಕ್ತಿಯೊಬ್ಬ ಬಾಲಕಿಯನ್ನು ಕರೆದುಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಕಂಡುಬಂದಿದೆ. ಪೊಲೀಸರು ಸಿಸಿಟಿವಿ ರೆಕಾರ್ಡಿಂಗ್‌ಗಳನ್ನು ಆಧರಿಸಿ, ಆರೋಪಿಗಳನ್ನು ಗುರುತಿಸಲು ಪ್ರಯತ್ನಿಸುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
Follow Us