ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಹತ್ಯೆ ಮಾಡಿ ಬಾವಿಗೆ ಎಸೆದಿದ್ದ ಆರೋಪಿಗಳ ಬಂಧನ

ರಾಜಸ್ಥಾನದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ, ಕೊಲೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಸಮೀರ್ ಮತ್ತು ಗುಲಾಂ ಎಂದು ಗುರುತಿಸಲಾಗಿದೆ. ಪ್ರಕರಣದಲ್ಲಿ ಓರ್ವ ಅಪ್ರಾಪ್ತನನ್ನು ಕೂಡ ಬಂಧಿಸಲಾಗಿದ್ದು, ಮೂವರನ್ನೂ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸ್Image Credit source: NDTV
Follow us
ನಯನಾ ರಾಜೀವ್
|

Updated on: Sep 26, 2023 | 10:04 AM

ರಾಜಸ್ಥಾನದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ, ಕೊಲೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಸಮೀರ್ ಮತ್ತು ಗುಲಾಂ ಎಂದು ಗುರುತಿಸಲಾಗಿದೆ. ಪ್ರಕರಣದಲ್ಲಿ ಓರ್ವ ಅಪ್ರಾಪ್ತನನ್ನು ಕೂಡ ಬಂಧಿಸಲಾಗಿದ್ದು, ಮೂವರನ್ನೂ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಚುರುವಿನ 10ನೇ ತರಗತಿ ವಿದ್ಯಾರ್ಥಿ ಭಾನುವಾರ ನಾಪತ್ತೆಯಾಗಿದ್ದಳು, . ಆಕೆಯ ಕುಟುಂಬದವರು ನಾಪತ್ತೆಯಾಗಿರುವ ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ಆರಂಭಿಸಿದ್ದು, ಸೋಮವಾರ ಮಧ್ಯಾಹ್ನ ಆಕೆಯ ಶವ ಬಾವಿಯಲ್ಲಿ ಪತ್ತೆಯಾಗಿತ್ತು. ಫತೇಪುರ್ ಮಾಜಿ ಶಾಸಕ ನಂದ್ ಕಿಶೋರ್ ಮಹಾರಿಯಾ ಮತ್ತು ಇತರ ಬಿಜೆಪಿ ನಾಯಕರು ಕುಟುಂಬಕ್ಕೆ ನ್ಯಾಯಕ್ಕಾಗಿ ಒತ್ತಾಯಿಸಿ ಧರಣಿ ಪ್ರತಿಭಟನೆ ನಡೆಸಿದರು.

ಬಾಲಕಿಯ ಕುಟುಂಬವು ಮೂವರ ವಿರುದ್ಧ ಅಪಹರಣ, ಸಾಮೂಹಿಕ ಅತ್ಯಾಚಾರ, ಬ್ಲ್ಯಾಕ್‌ಮೇಲಿಂಗ್ ಮತ್ತು ಕೊಲೆಯ ಆರೋಪ ಹೊರಿಸಿದ್ದರು. ನ್ಯಾಯಯುತ ತನಿಖೆ ನಡೆಸುವುದಾಗಿ ಮತ್ತು ಆರೋಪಿಗಳನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ಭರವಸೆ ನೀಡಿದರು. ನಂತರ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದಾಖಲಿಸಿ ಮೂವರನ್ನು ಬಂಧಿಸಲಾಯಿತು.

ಮತ್ತಷ್ಟು ಓದಿ: ಹರಿಯಾಣ: ಅರಣ್ಯದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ 16 ವರ್ಷದ ಬಾಲಕರು!

ಕುಟುಂಬಕ್ಕೆ ಆರ್ಥಿಕ ನೆರವು ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಅಶೋಕ್ ಗೆಹ್ಲೋಟ್ ಸರ್ಕಾರವನ್ನು ಗುರಿಯಾಗಿಸಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಸ್ತೆ ದಾಟುವಾಗ ಬಸ್ ಡಿಕ್ಕಿ ಹೊಡೆದು ಕಾಲೇಜು ಯುವತಿ ಭೀಕರ ಸಾವು

ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ

ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ

ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ

ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ

ಮಹಾರಾಷ್ಟ್ರದ ಪನ್ವೇಲ್​ನಲ್ಲಿ ಇಸ್ಕಾನ್​ನಿಂದ ಮೋದಿಗೆ ವಿಶೇಷ ಸ್ವಾಗತ

ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ

ಲೈಸೆನ್ಸ್ ಹಂಚಿಕೆಯಲ್ಲಿ ಅವ್ಯಾಹತ ಭ್ರಷ್ಟಾಚಾರ: ಗುರುಸ್ವಾಮಿ, ಸಂಘದ ಅಧ್ಯಕ್ಷ

ಕೊವಿಡ್ ಹಗರಣದ ತನಿಖೆಗೆ SIT ರಚನೆ: ಡಾ ಸಿಎನ್ ಮಂಜುನಾಥ್​ಗೂ ಸಂಕಷ್ಟ?

ಫಲಿತಾಂಶಕ್ಕೆ ಮೊದಲೇ ಗೂಬೆ ಕೂರಿಸುವ ಕೆಲಸ ಶುರುಮಾಡಿದ ಯೋಗೇಶ್ವರ್