ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಹತ್ಯೆ ಮಾಡಿ ಬಾವಿಗೆ ಎಸೆದಿದ್ದ ಆರೋಪಿಗಳ ಬಂಧನ

ರಾಜಸ್ಥಾನದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ, ಕೊಲೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಸಮೀರ್ ಮತ್ತು ಗುಲಾಂ ಎಂದು ಗುರುತಿಸಲಾಗಿದೆ. ಪ್ರಕರಣದಲ್ಲಿ ಓರ್ವ ಅಪ್ರಾಪ್ತನನ್ನು ಕೂಡ ಬಂಧಿಸಲಾಗಿದ್ದು, ಮೂವರನ್ನೂ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಹತ್ಯೆ ಮಾಡಿ ಬಾವಿಗೆ ಎಸೆದಿದ್ದ ಆರೋಪಿಗಳ ಬಂಧನ
ಪೊಲೀಸ್
Image Credit source: NDTV

Updated on: Sep 26, 2023 | 10:04 AM

ರಾಜಸ್ಥಾನದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ, ಕೊಲೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಸಮೀರ್ ಮತ್ತು ಗುಲಾಂ ಎಂದು ಗುರುತಿಸಲಾಗಿದೆ. ಪ್ರಕರಣದಲ್ಲಿ ಓರ್ವ ಅಪ್ರಾಪ್ತನನ್ನು ಕೂಡ ಬಂಧಿಸಲಾಗಿದ್ದು, ಮೂವರನ್ನೂ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಚುರುವಿನ 10ನೇ ತರಗತಿ ವಿದ್ಯಾರ್ಥಿ ಭಾನುವಾರ ನಾಪತ್ತೆಯಾಗಿದ್ದಳು, . ಆಕೆಯ ಕುಟುಂಬದವರು ನಾಪತ್ತೆಯಾಗಿರುವ ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ಆರಂಭಿಸಿದ್ದು, ಸೋಮವಾರ ಮಧ್ಯಾಹ್ನ ಆಕೆಯ ಶವ ಬಾವಿಯಲ್ಲಿ ಪತ್ತೆಯಾಗಿತ್ತು.
ಫತೇಪುರ್ ಮಾಜಿ ಶಾಸಕ ನಂದ್ ಕಿಶೋರ್ ಮಹಾರಿಯಾ ಮತ್ತು ಇತರ ಬಿಜೆಪಿ ನಾಯಕರು ಕುಟುಂಬಕ್ಕೆ ನ್ಯಾಯಕ್ಕಾಗಿ ಒತ್ತಾಯಿಸಿ ಧರಣಿ ಪ್ರತಿಭಟನೆ ನಡೆಸಿದರು.

ಬಾಲಕಿಯ ಕುಟುಂಬವು ಮೂವರ ವಿರುದ್ಧ ಅಪಹರಣ, ಸಾಮೂಹಿಕ ಅತ್ಯಾಚಾರ, ಬ್ಲ್ಯಾಕ್‌ಮೇಲಿಂಗ್ ಮತ್ತು ಕೊಲೆಯ ಆರೋಪ ಹೊರಿಸಿದ್ದರು.
ನ್ಯಾಯಯುತ ತನಿಖೆ ನಡೆಸುವುದಾಗಿ ಮತ್ತು ಆರೋಪಿಗಳನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ಭರವಸೆ ನೀಡಿದರು. ನಂತರ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದಾಖಲಿಸಿ ಮೂವರನ್ನು ಬಂಧಿಸಲಾಯಿತು.

ಮತ್ತಷ್ಟು ಓದಿ: ಹರಿಯಾಣ: ಅರಣ್ಯದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ 16 ವರ್ಷದ ಬಾಲಕರು!

ಕುಟುಂಬಕ್ಕೆ ಆರ್ಥಿಕ ನೆರವು ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಅಶೋಕ್ ಗೆಹ್ಲೋಟ್ ಸರ್ಕಾರವನ್ನು ಗುರಿಯಾಗಿಸಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us