ಆರೋಗ್ಯ ಸರಿಪಡಿಸುವುದಾಗಿ ನಂಬಿಸಿ ಅತ್ಯಾಚಾರ ಮಾಡಿದ್ದ ತಾಂತ್ರಿಕ, ಹೆಣ್ಣು ಮಗುವಿಗೆ ಜನ್ಮ ನೀಡಿದ ಬಾಲಕಿ

ಆರೋಗ್ಯ ಸರಿಪಡಿಸುತ್ತೇನೆ ಎಂದು ನಂಬಿಸಿ ತಾಂತ್ರಿಕನೊಬ್ಬ ಬಾಲಕಿಯ ಮೇಲೆ ಅತ್ಯಾಚಾರವೆಸಿಗಿದ್ದು, ಇದೀಗ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.

ಆರೋಗ್ಯ ಸರಿಪಡಿಸುವುದಾಗಿ  ನಂಬಿಸಿ ಅತ್ಯಾಚಾರ ಮಾಡಿದ್ದ ತಾಂತ್ರಿಕ, ಹೆಣ್ಣು ಮಗುವಿಗೆ ಜನ್ಮ ನೀಡಿದ ಬಾಲಕಿ
ಮಗು
Follow us
ನಯನಾ ರಾಜೀವ್
|

Updated on:Aug 08, 2023 | 12:40 PM

ಆರೋಗ್ಯ ಸರಿಪಡಿಸುತ್ತೇನೆ ಎಂದು ನಂಬಿಸಿ ತಾಂತ್ರಿಕನೊಬ್ಬ ಬಾಲಕಿಯ ಮೇಲೆ ಅತ್ಯಾಚಾರವೆಸಿಗಿದ್ದು, ಇದೀಗ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ರಾಜಸ್ಥಾನದ ಸಾಲುಂಬರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಅನಾರೋಗ್ಯಕ್ಕೆ ತುತ್ತಾಗಿದ್ದ ಬಾಲಕಿಗೆ ಚಿಕಿತ್ಸೆ ಕೊಡಿಸುವ ನೆಪದಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದ. ಜೂನ್ 6 ರಂದು ಸಂತ್ರಸ್ತೆ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ನಂತರ ಈ ವಿಷಯ ಬೆಳಕಿಗೆ ಬಂದಿದೆ. ಬಾಲಕಿ ಅಪ್ರಾಪ್ತೆ ಎನ್ನುವ ವಿಷಯ ತಿಳಿದ ವೈದ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ನಂತರ ಪೊಲೀಸರು ಸಂತ್ರಸ್ತೆಯ ಹೇಳಿಕೆಯನ್ನು ದಾಖಲಿಸಿಕೊಂಡರು. ಆದರೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ದೂರು ದಾಖಲಾಗಿಲ್ಲ.

ಒಂದು ತಿಂಗಳ ನಂತರ, ಜುಲೈ 6 ರಂದು, ಅಪ್ರಾಪ್ತ ವಯಸ್ಕಳನ್ನು ಆಸ್ಪತ್ರೆಯ ಆವರಣದಲ್ಲಿ ಅತ್ಯಾಚಾರವೆಸಗಲಾಗಿದೆ ಎಂದು ಆರೋಪಿಸಿ ಕುಟುಂಬದ ಸದಸ್ಯರು ಪೊಲೀಸರನ್ನು ಸಂಪರ್ಕಿಸಿ ಪ್ರಕರಣ ದಾಖಲಿಸಿದರು. ಆಸ್ಪತ್ರೆಯ ಪಾರ್ಕಿಂಗ್ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದ ತಾಂತ್ರಿಕ ಮತ್ತು ಇತರ ಇಬ್ಬರನ್ನು ಪೊಲೀಸರು ಬಂಧಿಸಿದರು. ಅಪ್ರಾಪ್ತ ವಯಸ್ಕನನ್ನು ಸಹ ವಶಕ್ಕೆ ತೆಗೆದುಕೊಳ್ಳಲಾಗಿದೆ.

ಮತ್ತಷ್ಟು ಓದಿ: ಹಾಸನ: 14 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ನಾಲ್ವರು ಅರೆಸ್ಟ್

ಪ್ರಕರಣದ ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ. ಸಂತ್ರಸ್ತೆಯ ಮಗುವಿನ ಡಿಎನ್‌ಎ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಪ್ರದೀಪ್ ಹೇಳಿದರು, ಒಂದು ತಿಂಗಳ ನಂತರ ವರದಿ ಲಭ್ಯವಾಗುತ್ತದೆ, ಆಗ ನಿಜವಾದ ತಂದೆ ಯಾರು ಎಂದು ಸ್ಪಷ್ಟವಾಗುತ್ತದೆ.

ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ, ತಂದೆ ಸಾಲುಂಬರ್ ಆಸ್ಪತ್ರೆಯಲ್ಲಿ ಕೆಲಸ ಮಾಡಲು ಪ್ರಾರಂಭಿಸಿದರು. ಅವರ ಅಪ್ರಾಪ್ತ ಮಗಳು ಅನಾರೋಗ್ಯಕ್ಕೆ ಒಳಗಾದಾಗ, ತಂತ್ರಿ ಅವಳನ್ನು ತನ್ನ ಬಳಿಗೆ ಕರೆತರುವಂತೆ ಕೇಳಿಕೊಂಡಿದ್ದ, ತಾನು ತಾಂತ್ರಿಕ ತನ್ನ ನಿಗೂಢ ಶಕ್ತಿಯಿಂದ ಆಕೆಯ ಆರೋಗ್ಯವನ್ನು ಸರಿಪಡಿಸುವುದಾಗಿ ನಂಬಿಸಿ, ಆಕೆಯನ್ನು ಕರೆದೊಯ್ದು ಅತ್ಯಾಚಾರವೆಸಗಿದ್ದ. ಚಿಕಿತ್ಸೆಯ ನೆಪದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ತಂತ್ರಿ ಹಲವು ಬಾರಿ ಅತ್ಯಾಚಾರವೆಸಗಿದ್ದಾನೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:37 pm, Tue, 8 August 23

ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ