ರಾಜಸ್ಥಾನ: ಅಂಗನವಾಡಿಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಕರೆದೊಯ್ದು 20 ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ

ರಾಜಸ್ಥಾನದ ಸಿರೋಹಿ ಮುನ್ಸಿಪಲ್ ಕೌನ್ಸಿಲ್‌ನ ಅಧ್ಯಕ್ಷ ಮಹೇಂದ್ರ ಮೇವಾಡ ಮತ್ತು ಮಾಜಿ ಪುರಸಭೆಯ ಆಯುಕ್ತ ಮಹೇಂದ್ರ ಚೌಧರಿ ವಿರುದ್ಧ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಅಂಗನವಾಡಿಯಲ್ಲಿ ಉದ್ಯೋಗ ನೀಡುವ ನೆಪದಲ್ಲಿ ಸುಮಾರು 20 ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಇವರಿಬ್ಬರು ಆರೋಪಿಗಳಾಗಿದ್ದಾರೆ.

ರಾಜಸ್ಥಾನ: ಅಂಗನವಾಡಿಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಕರೆದೊಯ್ದು 20 ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ
ಅಪರಾಧ
Follow us
ನಯನಾ ರಾಜೀವ್
|

Updated on: Feb 11, 2024 | 3:37 PM

ಅಂಗನವಾಡಿಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಕರೆದೊಯ್ದು 20 ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ರಾಜಸ್ಥಾನದ ಸಿರೋಹಿಯಲ್ಲಿ ನಡೆದಿದೆ. ರಾಜಸ್ಥಾನದ ಸಿರೋಹಿ ಮುನ್ಸಿಪಲ್ ಕೌನ್ಸಿಲ್‌ನ ಅಧ್ಯಕ್ಷ ಮಹೇಂದ್ರ ಮೇವಾಡ ಮತ್ತು ಮಾಜಿ ಪುರಸಭೆಯ ಆಯುಕ್ತ ಮಹೇಂದ್ರ ಚೌಧರಿ ವಿರುದ್ಧ ಪ್ರಕರಣ ದಾಖಲಾಗಿದೆ. ಅಂಗನವಾಡಿಯಲ್ಲಿ ಉದ್ಯೋಗ ನೀಡುವ ನೆಪದಲ್ಲಿ ಸುಮಾರು 20 ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ.

ಆರೋಪಿಯು ತನ್ನ ಮತ್ತು ಸುಮಾರು 20 ಇತರ ಮಹಿಳೆಯರಿಗೆ ಉದ್ಯೋಗಾವಕಾಶದ ಆಮಿಷ ಒಡ್ಡಿದ್ದಾನೆ ಎಂದು ಆರೋಪಿಸಿ ಪಾಲಿ ಜಿಲ್ಲೆಯ ಮಹಿಳೆಯೊಬ್ಬರು ಪೊಲೀಸರನ್ನು ಸಂಪರ್ಕಿಸಿದ ನಂತರ ಘಟನೆ ಬೆಳಕಿಗೆ ಬಂದಿದೆ. ಆರೋಪಿಗಳು ಲೈಂಗಿಕ ದೌರ್ಜನ್ಯಗಳನ್ನು ಚಿತ್ರೀಕರಿಸಿದ್ದಾರೆ, ನಂತರ ದೃಶ್ಯಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುವುದಾಗಿ ಬೆದರಿಕೆ ಹಾಕಿದರು ಮತ್ತು ಹಣಕ್ಕಾಗಿ ಸಂತ್ರಸ್ತರ ಬಳಿ 5 ಲಕ್ಷ ರೂ. ನೀಡುವಂತೆ ಬೆದರಿಕೆ ಹಾಕುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ದೂರುದಾರರ ಪ್ರಕಾರ, ಅವರು ಇತರ ಮಹಿಳೆಯರೊಂದಿಗೆ ಅಂಗನವಾಡಿಯಲ್ಲಿ ಕೆಲಸ ಮಾಡಲು ಹಲವು ತಿಂಗಳ ಹಿಂದೆ ಸಿರೋಹಿಗೆ ಪ್ರಯಾಣ ಬೆಳೆಸಿದ್ದಳು. ಆರೋಪಿಗಳು ಆಕೆಗೆ ವಸತಿ, ಊಟ ನೀಡಿ ಬಳಿಕ ಅತ್ಯಾಚಾರವೆಸಗಿದ್ದಾರೆ. ಅವರು ನೀಡಿದ ಆಹಾರದಲ್ಲಿ ಮತ್ತು ಬರುವ ಮಾತ್ರೆಯನ್ನು ಬೆಸರೆಸಿದ್ದರು. ಅದನ್ನು ಸೇವಿಸಿದ ಬಳಿಕ ಅತ್ಯಾಚಾರವೆಸಗಿದ್ದಾರೆ.

ಮತ್ತಷ್ಟು ಓದಿ: ರಾಜಸ್ಥಾನ: ಮನೆಯಲ್ಲಿ ಮಲಗಿದ್ದ 9 ವರ್ಷದ ಬಾಲಕಿಯನ್ನು ಎಳೆದೊಯ್ದು ಅತ್ಯಾಚಾರ

ಆಕೆಗೆ ಪ್ರಜ್ಞೆ ಬಂದ ಬಳಿಕ ನಡೆದಿರುವ ವಿಚಾರಗಳನ್ನು ಆಕೆಗೆ ಹೇಳಿ, ಒಂದೊಮ್ಮೆ ತಾನು ಹೇಳದಂತೆ ಕೇಳದಿದ್ದರೆ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚುವುದಾಗಿ ಬೆದರಿಕೆ ಹಾಕಿದ್ದರು. ಎಂಟು ಮಹಿಳೆಯರ ಅರ್ಜಿಯ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳುವಂತೆ ರಾಜಸ್ಥಾನ ಹೈಕೋರ್ಟ್ ಆದೇಶಿಸಿದೆ. ಪ್ರಕರಣದ ತನಿಖೆ ಆರಂಭವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ