AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajasthan: ತನ್ನ 4 ಮಕ್ಕಳನ್ನು ಕೊಂದು, ನೇಣಿಗೆ ಶರಣಾದ ಮಹಿಳೆ

ನಾಲ್ವರು ಮಕ್ಕಳನ್ನು ಕೊಂದು ಮಹಿಳೆ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜಸ್ಥಾನದ ಬಾರ್ಮರ್​ ಜಿಲ್ಲೆಯ ಮಂಡಲಿ ಪ್ರದೇಶದಲ್ಲಿ ನಡೆದಿದೆ.

Rajasthan: ತನ್ನ 4 ಮಕ್ಕಳನ್ನು ಕೊಂದು, ನೇಣಿಗೆ ಶರಣಾದ ಮಹಿಳೆ
Crime Scene
ನಯನಾ ರಾಜೀವ್
|

Updated on: Jun 04, 2023 | 3:54 PM

Share

ನಾಲ್ವರು ಮಕ್ಕಳನ್ನು ಕೊಂದು ಮಹಿಳೆ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜಸ್ಥಾನದ ಬಾರ್ಮರ್​ ಜಿಲ್ಲೆಯ ಮಂಡಲಿ ಪ್ರದೇಶದಲ್ಲಿ ನಡೆದಿದೆ. ಶನಿವಾರ ಸಂಜೆ ತನ್ನ ಜೀವನವನ್ನು ಅಂತ್ಯಗೊಳಿಸುವ ಮೊದಲು ಮಹಿಳೆ ತನ್ನ ನಾಲ್ಕು ಮಕ್ಕಳನ್ನು ಧಾನ್ಯದ ಡ್ರಮ್‌ನಲ್ಲಿ ಹಾಕಿ ಅದರ ಮುಚ್ಚಳವನ್ನು ಮುಚ್ಚಿದ್ದಳು. ಮೃತರನ್ನು ಬನಿಯಾವಾಸ್ ಗ್ರಾಮದ ಊರ್ಮಿಳಾ (27) ಮತ್ತು ನಾಲ್ವರು ಮಕ್ಕಳಾದ ಭಾವನಾ (8), ವಿಕ್ರಮ್ (5), ವಿಮಲಾ (3) ಮತ್ತು ಮನೀಶಾ (2) ಎಂದು ಗುರುತಿಸಲಾಗಿದೆ.

ಪೋಲೀಸರ ಪ್ರಕಾರ, ಘಟನೆ ಸಂಭವಿಸಿದಾಗ ಆಕೆಯ ಪತಿ ಜೆಥರಾಮ್ ಕೆಲಸದ ನಿಮಿತ್ತ ಜೋಧ್‌ಪುರಕ್ಕೆ ಹೋಗಿದ್ದಾಗ ಈ ಘಟನೆ ನಡೆದಿದೆ. ಎಲ್ಲಾ ಐದು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಶವಾಗಾರದಲ್ಲಿ ಇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: Chikkamagaluru News: ಆರ್ಕೆಸ್ಟ್ರಾ ಹಾಡಿಗಾಗಿ ಮರ್ಡರ್​​: 7 ಆರೋಪಿಗಳ ಬಂಧನ

ಪತಿ-ಪತ್ನಿಯರ ನಡುವಿನ ಸಂಬಂಧದಲ್ಲಿ ಬಿರುಕು ಮೂಡಿತ್ತು. ಮಹಿಳೆ ತನ್ನ ಮಕ್ಕಳನ್ನು ಕೊಂದು ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಡಿಎಸ್ಪಿ ಕಮಲೇಶ್ ಕುಮಾರ್ ಅವರು ಪಿಟಿಐಗೆ ತಿಳಿಸಿದ್ದಾರೆ.

ಘಟನೆ ಕುರಿತು ಮಹಿಳೆಯ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗಿದೆ. ಕುಟುಂಬ ಸದಸ್ಯರು ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್