AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajasthan Crime: 6 ತಿಂಗಳ ಮಗು ಸೇರಿ ನಾಲ್ವರನ್ನು ಬರ್ಬರವಾಗಿ ಕೊಲೆ ಮಾಡಿ ಬೆಂಕಿ ಹಚ್ಚಿದ ದುಷ್ಕರ್ಮಿಗಳು

6 ತಿಂಗಳ ಹೆಣ್ಣು ಮಗು ಸೇರಿದಂತೆ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆಗೈದು, ಬೆಂಕಿ ಹಚ್ಚಿರುವ ಘಟನೆ ರಾಜಸ್ಥಾನದ ಜೋಧಪುರದ ಚೆರೈ ಗ್ರಾಮದಲ್ಲಿ ನಡೆದಿದೆ.

Rajasthan Crime: 6 ತಿಂಗಳ ಮಗು ಸೇರಿ ನಾಲ್ವರನ್ನು ಬರ್ಬರವಾಗಿ ಕೊಲೆ ಮಾಡಿ ಬೆಂಕಿ ಹಚ್ಚಿದ ದುಷ್ಕರ್ಮಿಗಳು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 19, 2023 | 1:23 PM

Share

ಜೋಧ್‌ಪುರ, ಜು.19: 6 ತಿಂಗಳ ಹೆಣ್ಣು ಮಗು ಸೇರಿದಂತೆ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆಗೈದು, ಬೆಂಕಿ ಹಚ್ಚಿರುವ ಘಟನೆ ರಾಜಸ್ಥಾನದ ಜೋಧಪುರದ ಚೆರೈ ಗ್ರಾಮದಲ್ಲಿ ನಡೆದಿದೆ. ಈ ಘಟನೆಯು ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿದ್ದು, ಪೊಲೀಸರು ಸುಟ್ಟು ಕರಕಲಾದ ಮೃತದೇಹಗಳನ್ನು ಪತ್ತೆ ಮಾಡಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ, ಮೃತರ ಕುತ್ತಿಗೆಯನ್ನು ಹರಿತವಾದ ಆಯುಧದಿಂದ ಸೀಳಿ ನಂತರ ಅವರನ್ನು ಮನೆಯ ಅಂಗಳಕ್ಕೆ ಎಳೆದೊಯ್ದು ಬೆಂಕಿ ಹಚ್ಚಲಾಯಿತು ಎಂದು ಹೇಳಲಾಗಿದೆ, ಇದು ದ್ವೇಷದ ಕೊಲೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಸಿಂಗ್ ಹೇಳಿದ್ದಾರೆ.

ಇದೀಗ ಈ ಕೊಲೆಗೆ ಸಂಬಂಧಿಸಿದಂತೆ ಸಾಕ್ಷ್ಯ ಸಂಗ್ರಹಕ್ಕಾಗಿ ವಿಧಿವಿಜ್ಞಾನ ತಂಡ ಸ್ಥಳಕ್ಕೆ ಆಗಮಿಸಿದೆ. ಘಟನಾ ಸ್ಥಳದಲ್ಲಿ ಜೋಧ್‌ಪುರ ಜಿಲ್ಲಾಧಿಕಾರಿ ಹಿಮಾಂಶು ಗುಪ್ತಾ, ಎಸ್‌ಪಿ ಸಿಂಗ್ ಮತ್ತು ಇತರ ಅಧಿಕಾರಿಗಳು ಸ್ಥಳದಲ್ಲಿ ಹಾಜರಿದ್ದಾರೆ. ಈ ಹತ್ಯೆ ಹಿಂದೆ ಯಾರೆಲ್ಲ ಇದ್ದರೆ, ಇದಕ್ಕೆ ಕಾರಣ ಏನು? ಎಂಬದನ್ನು ಪತ್ತೆ ಮಾಡಲಾಗುತ್ತಿದೆ ಎಂದು ಪೋಲಿಸರ ತಂಡ ತಿಳಿಸಿದೆ. ಇದು ಮೇಲ್ನೋಟಕ್ಕೆ ಕೌಟುಂಬಿಕ ಕಲಹ ಎಂದು ಪೊಲೀಸರು ಶಂಕಿಸಿದ್ದಾರೆ, ಇನ್ನೂ ಹತ್ಯೆಯಾದರನ್ನು ಪೂನರಾಮ್ (55), ಅವರ ಪತ್ನಿ ಬನ್ವಾರಿ (50), ಸೊಸೆ ಥಾಬು (24) ಮತ್ತು ಅವರ 6 ತಿಂಗಳ ಮಗಳ ಎಂದು ಗುರುತಿಸಲಾಗಿದೆ.

ಈ ಕೊಲೆ ರಾಜಕೀಯ ತಿರುವುಗಳನ್ನು ಪಡೆಯುತ್ತಿದೆ, ರಾಜಸ್ಥಾನದಲ್ಲಿ ಇತ್ತೀಚೆಗೆ ಕೊಲೆ ಪ್ರಕರಣಗಳು ಹೆಚ್ಚಾಗುತ್ತಿದೆ, ಕಾಂಗ್ರೆಸ್​ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಸರಿಯಾದ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲ ಎಂದು ಸಿಎಂ ಅಶೋಕ್ ಗೆಹ್ಲೋಟ್ ಅವರ ವಿರುದ್ಧ ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಯುವತಿಯನ್ನು ಅಪಹರಿಸಿ, ಆ್ಯಸಿಡ್ ಎರಚಿ ಹತ್ಯೆ, ಬಾವಿಯಲ್ಲಿ ಶವ ಪತ್ತೆ

ಇನ್ನೂ ಈ ಬಗ್ಗೆ ಟ್ವಿಟರ್​​ನಲ್ಲಿ ಟ್ವಿಟ್​​ ಮಾಡಿದ ಬಿಜೆಪಿಯ ರಾಷ್ಟ್ರೀಯ ವಕ್ತಾರ ಶಹಜದ್ ಜೈಹಿಂದ್, ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ತವರು ಜಿಲ್ಲೆ ಜೋಧ್‌ಪುರದಲ್ಲಿ ಒಂದೇ ಕುಟುಂಬದ 4 ಸದಸ್ಯರನ್ನು ಹತ್ಯೆಗೈದ ಆಘಾತಕಾರಿ ಘಟನೆ ನಡೆದಿದೆ. ಇತ್ತೀಚೆಗಷ್ಟೇ ಕರೌಲಿಯಲ್ಲಿ 19 ವರ್ಷದ ದಲಿತ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಆಸಿಡ್ ದಾಳಿ ನಡೆಸಲಾಗಿತ್ತು. ಜೋಧ್‌ಪುರದಲ್ಲಿ ಶಾಲಾ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ಸಿಗಾರ್​ನಲ್ಲಿ ಅಲ್ಲಲ್ಲಿ ಹಿಂಸಾಚಾರದ ಘಟನೆಗಳು ನಡೆಯುತ್ತಿವೆ. ಇದು ರಾಜಸ್ಥಾನದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ತೋರಿಸಿದೆ. ಈ ಬಗ್ಗೆ ಪ್ರಿಯಾಂಕಾ ಮತ್ತು ರಾಹುಲ್ ಒಂದು ಮಾತನ್ನೂ ಹೇಳುವುದಿಲ್ಲ. ನಾನು ಮಹಿಳೆ..ಮಹಿಳೆ ಎಂದು ಪ್ರಿಯಾಂಕಾ ಪೊಳ್ಳು ಘೋಷಣೆ ಮಾಡುತ್ತಾರೆ. ಮಹಿಳೆಯರು ಮತ್ತು ಮಕ್ಕಳು ಅವರಿಗೆ ರಾಜಕೀಯದ ಸಾಧನಗಳು ಅಷ್ಟೇ ಎಂದು ಹೇಳಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ