AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನ: ಮಸೀದಿಯೊಳಗೆ 5 ವರ್ಷದ ಬಾಲಕಿ ಮೇಲೆ ಮೌಲ್ವಿಯಿಂದ ಅತ್ಯಾಚಾರ

ಮಸೀದಿಯೊಳಗೆ 5 ವರ್ಷಗಳ ಬಾಲಕಿ ಮೇಲೆ ಮೌಲ್ವಿ ಅತ್ಯಾಚಾರವೆಸಗಿರುವ ಘಟನೆ ರಾಜಸ್ಥಾನದ ಅಲ್ವಾರ್​ನಲ್ಲಿ ನಡೆದಿದೆ. ಮೌಲ್ವಿಯನ್ನು ಪೊಲೀಸರು ಬಂಧಿಸಿದ್ದಾರೆ, ಬಾಲಕಿ ತನ್ನ ನಿವಾಸದ ಹೊರಗೆ ಆಟವಾಡುತ್ತಿದ್ದಾಗ ಮೌಲ್ವಿ ಅಸ್ಜದ್ ಮಸೀದಿಯೊಳಗೆ ಅತ್ಯಾಚಾರವೆಸಗಿದ್ದಾನೆ.

ರಾಜಸ್ಥಾನ: ಮಸೀದಿಯೊಳಗೆ 5 ವರ್ಷದ ಬಾಲಕಿ ಮೇಲೆ ಮೌಲ್ವಿಯಿಂದ ಅತ್ಯಾಚಾರ
Image Credit source: Hindustan Times
ನಯನಾ ರಾಜೀವ್
|

Updated on: Sep 23, 2024 | 10:33 AM

Share

ಮಸೀದಿಯೊಳಗೆ 5 ವರ್ಷಗಳ ಬಾಲಕಿ ಮೇಲೆ ಮೌಲ್ವಿ ಅತ್ಯಾಚಾರವೆಸಗಿರುವ ಘಟನೆ ರಾಜಸ್ಥಾನದ ಅಲ್ವಾರ್​ನಲ್ಲಿ ನಡೆದಿದೆ. ಮೌಲ್ವಿಯನ್ನು ಪೊಲೀಸರು ಬಂಧಿಸಿದ್ದಾರೆ, ಬಾಲಕಿ ತನ್ನ ನಿವಾಸದ ಹೊರಗೆ ಆಟವಾಡುತ್ತಿದ್ದಾಗ ಮೌಲ್ವಿ ಅಸ್ಜದ್ ಮಸೀದಿಯೊಳಗೆ ಅತ್ಯಾಚಾರವೆಸಗಿದ್ದಾನೆ.

ಪೊಲೀಸರ ಪ್ರಕಾರ, ಆಕೆಯ ತಾಯಿ ಬಾಲಕಿಯನ್ನು ಹುಡುಕಿಕೊಂಡು ಅವರ ಮನೆಯ ಎದುರು ಇರುವ ಮಸೀದಿಯೊಳಗೆ ಹೋದಾಗ ವಿಷಯ ಬೆಳಕಿಗೆ ಬಂದಿದೆ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಎಸ್‌ಎಚ್‌ಒ ರಾಜ್‌ಗಢ ರಾಮಜಿಲಾಲ್ ಮೀನಾ ತಿಳಿಸಿದ್ದಾರೆ.

ಕುಡಿದ ಮತ್ತಿನಲ್ಲಿ 52 ವರ್ಷದ ತಾಯಿಯ ಮೇಲೆ ಅತ್ಯಾಚಾರ ಬುಂದಿ ಜಿಲ್ಲೆಯಲ್ಲಿ  28 ವರ್ಷದ ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ತಾಯಿಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಆರೋಪಿಯು ತನ್ನ 52 ವರ್ಷದ ತಾಯಿಯೊಂದಿಗೆ ಹಳ್ಳಿಯಿಂದ ಮನೆಗೆ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಅವರು ಹೇಳಿದರು.

ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಪ್ರಾಥಮಿಕ ವಿಚಾರಣೆ ವೇಳೆ ಆರೋಪಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಆತನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ ಜೈಲಿಗೆ ಕಳುಹಿಸಲಾಯಿತು. ಆಕೆ ಮಗನೊಂದಿಗೆ ಸಹೋದರನ ಮನೆಗೆ ಹೋಗಿದ್ದಳು, ಇಬ್ಬರೂ ಹಿಂದಿರುಗುತ್ತಿರುವಾಗ ತಾಯಿಯ ಮೇಲೆ ಅತ್ಯಾಚಾರವೆಸಗಿದ್ದಾನೆ.

ಮತ್ತಷ್ಟು ಓದಿ: ಚಿಕ್ಕಮಗಳೂರಲ್ಲೊಂದು ಅಮಾನುಷ ಘಟನೆ: 5 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಹತ್ಯೆ

ಆರೋಪಿಯನ್ನು ಬಂಧಿಸಿದ್ದೇವೆ ಮತ್ತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ. ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಡಿಎಸ್​ಪಿ ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ