ರಾಜಸ್ಥಾನ: ಮನೆಯಲ್ಲಿ ಮಲಗಿದ್ದ 9 ವರ್ಷದ ಬಾಲಕಿಯನ್ನು ಎಳೆದೊಯ್ದು ಅತ್ಯಾಚಾರ

ಮನೆಯಲ್ಲಿ ಮಲಗಿದ್ದ ಬಾಲಕಿಯನ್ನು ಎಳೆದೊಯ್ದು ಅತ್ಯಾಚಾರವೆಸಗಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಅವರ ಮನೆಗೆ ಬಂದಿದ್ದ ಸಂಬಂಧಿಕನಿಂದಲೇ ಕೃತ್ಯ ನಡೆದಿದೆ. ರಾತ್ರಿ 9 ಗಂಟೆ ಸುಮಾರಿಗೆ ರಘುವೀರ್ ಜಾಟ್ ಅವರ ಮನೆಗೆ ಬಂದಿದ್ದ. ಆತ ಬಾಲಕಿಯನ್ನು ಎತ್ತಿಕೊಂಡು ಹೊಲಕ್ಕೆ ಎಳದೊಯ್ದಿದ್ದ. ಅಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ.

ರಾಜಸ್ಥಾನ: ಮನೆಯಲ್ಲಿ ಮಲಗಿದ್ದ 9 ವರ್ಷದ ಬಾಲಕಿಯನ್ನು ಎಳೆದೊಯ್ದು ಅತ್ಯಾಚಾರ
ಅಪರಾಧ
Follow us
ನಯನಾ ರಾಜೀವ್
|

Updated on: Feb 11, 2024 | 11:02 AM

9 ವರ್ಷದ ಬಾಲಕಿಯನ್ನು ಗದ್ದೆಗೆ ಎಳೆದುಕೊಂಡು ಹೋಗಿ ಅತ್ಯಾಚಾರವೆಸಗಿರುವ ಘಟನೆ ರಾಜಸ್ಥಾನದ ಕರೌಲಿ ಜಿಲ್ಲೆಯಲ್ಲಿ ನಡೆದಿದೆ. ಸಂತ್ರಸ್ತೆಗೆ ಹಿಂಡೌನ್ ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ನೀಡಲಾಗಿದೆ. ಬಾಲಕಿಯ ಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ವೈದ್ಯರು ಆಕೆಯನ್ನು ಜೈಪುರಕ್ಕೆ ಕಳುಹಿಸಿದ್ದಾರೆ.

ಆ ಪ್ರದೇಶದ ಹಳ್ಳಿಯೊಂದರಲ್ಲಿ ಶನಿವಾರ ರಾತ್ರಿ 9 ವರ್ಷದ ಬಾಲಕಿ ತನ್ನ ಮನೆಯಲ್ಲಿ ಮಲಗಿದ್ದಳು. ರಾತ್ರಿ 9 ಗಂಟೆ ಸುಮಾರಿಗೆ ರಘುವೀರ್ ಜಾಟ್ ಅವರ ಮನೆಗೆ ಬಂದಿದ್ದ. ಆತ ಬಾಲಕಿಯನ್ನು ಎತ್ತಿಕೊಂಡು ಹೊಲಕ್ಕೆ ಎಳದೊಯ್ದಿದ್ದ. ಅಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಅಷ್ಟರಲ್ಲಿ ಬಾಲಕಿ ಕಾಣೆಯಾಗಿದ್ದನ್ನು ಕಂಡು ಮನೆಯವರು ಅಕ್ಕಪಕ್ಕದಲ್ಲಿ ಹುಡುಕಾಟ ನಡೆಸಿದ್ದಾರೆ. ನಂತರ ಕುಟುಂಬಸ್ಥರು ಹೊಲದಲ್ಲಿ ಬಾಲಕಿ ರಕ್ತಸಿಕ್ತ ಸ್ಥಿತಿಯಲ್ಲಿ ಬಿದ್ದಿರುವುದು ಕಂಡು ಬಂದಿದೆ. ಬಾಲಕಿಯ ಸ್ಥಿತಿ ಕಂಡು ಪೋಷಕರು ಕುಸಿದು ಬಿದ್ದಿದ್ದಾರೆ. ತಕ್ಷಣ ಶ್ರೀ ಮಹಾವೀರಜಿ ಪೊಲೀಸ್ ಠಾಣೆಗೆ ಘಟನೆಯ ಬಗ್ಗೆ ಮಾಹಿತಿ ನೀಡಿದರು.

ಸಂತ್ರಸ್ತೆಯನ್ನು ಹಿಂದೌನ್‌ನ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ಮತ್ತು ವೈದ್ಯಕೀಯ ಮಂಡಳಿಯಿಂದ ಪ್ರಥಮ ಚಿಕಿತ್ಸೆ ನೀಡಲಾಯಿತು. ಚಿಕಿತ್ಸೆ ಬಳಿಕ ಬಾಲಕಿಯ ಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಆಕೆಯನ್ನು ಕೂಡಲೇ ಜೈಪುರದ ಜೆಕೆ ಲೋನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೂಲಗಳಿಂದ ದೊರೆತ ಮಾಹಿತಿಯಂತೆ ಪೊಲೀಸರು ಆರೋಪಿ ರಘುವೀರ್ ಜಾಟ್ ನನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರು ಆತನ ವಿಚಾರಣೆಯಲ್ಲಿ ನಿರತರಾಗಿದ್ದಾರೆ. ಘಟನೆ ಬಗ್ಗೆ ಗ್ರಾಮಸ್ಥರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕುಟುಂಬ ಸದಸ್ಯರು ಆಘಾತಕ್ಕೊಳಗಾಗಿದ್ದಾರೆ.

ಮತ್ತಷ್ಟು ಓದಿ: ಸಹ ಶಿಕ್ಷಕನಿಂದ ಶಿಕ್ಷಕಿಯರಿಗೆ ಲೈಂಗಿಕ ಕಿರುಕುಳ ಆರೋಪ; ಶಿಕ್ಷಕನನ್ನು ಟರ್ಮಿನೇಟ್ ಮಾಡಿದ ಶಾಲಾ ಆಡಳಿತ ಮಂಡಳಿ

ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಉನ್ನತ ಪೊಲೀಸ್ ಅಧಿಕಾರಿಗಳು ಇದರ ಮೇಲೆ ನಿಗಾ ಇಟ್ಟಿದ್ದಾರೆ. ಇತ್ತೀಚೆಗೆ ರಾಜಸ್ಥಾನದ ಜೈಪುರ ಗ್ರಾಮಾಂತರದಲ್ಲಿ ತಂದೆಯೊಬ್ಬ ತನ್ನ ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರವೆಸಗಿದ ಹೃದಯ ವಿದ್ರಾವಕ ಘಟನೆಯೂ ಬೆಳಕಿಗೆ ಬಂದಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ