ರಾಜಸ್ಥಾನ: ಪ್ರೇಯಸಿಯ ಗಂಡನನ್ನು ಹತ್ಯೆ ಮಾಡಿ ಮೃತದೇಹವನ್ನು 6 ತುಂಡುಗಳಾಗಿ ಕತ್ತರಿಸಿ ಹೂತಿಟ್ಟ ವ್ಯಕ್ತಿ ಬಂಧನ

ಜುಲೈ 13 ರಂದು ಜೋಗೇಂದ್ರನ ತಂದೆ ಸ್ಥಳೀಯ ಪೊಲೀಸರಿಗೆ ದೂರು ನೀಡಿದ ನಂತರ ಬಂಧನ ನಡೆದಿದೆ. ದೂರಿನ ಪ್ರಕಾರ, ಜುಲೈ 11 ರಂದು ಜೋಗೇಂದ್ರ ಮನೆಯಿಂದ ಹೋಗಿದ್ದು, ಅನಂತರ ಹಿಂದಿರುಗಿಲ್ಲ ಎಂದು ಅವರು ದೂರಿನಲ್ಲಿ ಹೇಳಿದ್ದು ಮದನ್ ಲಾಲ್ ಮೇಲೆ ಶಂಕೆ ಇರುವುದಾಗಿ ತಿಳಿಸಿದ್ದರು.

ರಾಜಸ್ಥಾನ: ಪ್ರೇಯಸಿಯ ಗಂಡನನ್ನು ಹತ್ಯೆ ಮಾಡಿ ಮೃತದೇಹವನ್ನು 6 ತುಂಡುಗಳಾಗಿ ಕತ್ತರಿಸಿ ಹೂತಿಟ್ಟ ವ್ಯಕ್ತಿ ಬಂಧನ
ಪ್ರಾತಿನಿಧಿಕ ಚಿತ್ರ
Follow us
|

Updated on: Jul 19, 2023 | 3:53 PM

ರಾಜಸ್ಥಾನದ (Rajasthan) ಪಾಲಿಯಲ್ಲಿ 33 ವರ್ಷದ ವ್ಯಕ್ತಿಯನ್ನು ಪತ್ನಿಯ ಪ್ರಿಯಕರನೇ ಕೊಲೆ (Murder Case) ಮಾಡಿ, ಶವವನ್ನು ಆರು ತುಂಡುಗಳಾಗಿ ಕತ್ತರಿಸಿ ವಿವಿಧ ಸ್ಥಳಗಳಲ್ಲಿ ಹೂತಿಟ್ಟಿ ಪ್ರಕರಣ ವರದಿ ಆಗಿದೆ. ಮದನಲಾಲ್ ಎಂದು ಗುರುತಿಸಲಾದ ಆರೋಪಿ ಜೋಗೇಂದ್ರನನ್ನು ಕೊಂದು ಮೃತದೇಹವನ್ನು ಕತ್ತರಿಸಿ ಸಮೀಪದ ಕಾಡಿನಲ್ಲಿ ಹೂತಿಟ್ಟಿದ್ದ. ಮನೆಯಿಂದ 100 ಮೀಟರ್ ದೂರದಲ್ಲಿರುವ ತೋಟದಿಂದ ತಲೆ, ಕೈ ಮತ್ತು ಕಾಲುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಮಾಧಿ ಸ್ಥಳದ ಮೇಲೆ ಮಾವಿನ ಸಸಿ ನೆಟ್ಟಿದ್ದ ಆರೋಪಿಯನ್ನು ಮಂಗಳವಾರ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಜುಲೈ 13 ರಂದು ಜೋಗೇಂದ್ರನ ತಂದೆ ಸ್ಥಳೀಯ ಪೊಲೀಸರಿಗೆ ದೂರು ನೀಡಿದ ನಂತರ ಬಂಧನ ನಡೆದಿದೆ. ದೂರಿನ ಪ್ರಕಾರ, ಜುಲೈ 11 ರಂದು ಜೋಗೇಂದ್ರ ಮನೆಯಿಂದ ಹೋಗಿದ್ದು, ಅನಂತರ ಹಿಂದಿರುಗಿಲ್ಲ ಎಂದು ಅವರು ದೂರಿನಲ್ಲಿ ಹೇಳಿದ್ದು ಮದನ್ ಲಾಲ್ ಮೇಲೆ ಶಂಕೆ ಇರುವುದಾಗಿ ತಿಳಿಸಿದ್ದರು.

ನನ್ನ ಮಗನ ಹತ್ಯೆಯಲ್ಲಿ ಹೆಚ್ಚಿನ ಜನರು ಭಾಗಿಯಾಗಿದ್ದಾರೆಂದು ನಾನು ನಂಬುತ್ತೇನೆ ಎಂದು ಮೃತನ ತಂದೆ ಮಿಶ್ರಾಲಾಲ್ ಮೇಘವಾಲ್ ಹೇಳಿದ್ದಾರೆ.

ಇದನ್ನೂ ಓದಿ: Rajasthan Crime: 6 ತಿಂಗಳ ಮಗು ಸೇರಿ ನಾಲ್ವರನ್ನು ಬರ್ಬರವಾಗಿ ಕೊಲೆ ಮಾಡಿ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ತಕ್ಷಣ ಪೊಲೀಸರು ತನಿಖೆ ನಡೆಸಿ ಮದನ್‌ಲಾಲ್‌ನನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಮದನ್‌ಲಾಲ್ ತಾನು ಜೋಗೇಂದ್ರನ ಪತ್ನಿಯೊಂದಿಗೆ ಸಂಬಂಧ ಹೊಂದಿದ್ದು, ಆತನನ್ನು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ