ರಾಮನಗರ ಮಾರಕಾಸ್ತ್ರಗಳಿಂದ ಹಲ್ಲೆ ಪ್ರಕರಣ: ಆರೋಪಿಗಳಿಗೆ ಪೊಲೀಸ್ ಗುಂಡೇಟು
ಕಳೆದ ಸೋಮವಾರ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಮಾಳಗಾಳು ಗ್ರಾಮಕ್ಕೆ ನುಗ್ಗಿ ಮಾರಕಾಸ್ತ್ರಗಳಿಂದ ಮಹಿಳೆ ಸೇರಿದಂತೆ ಏಳು ಜನರ ಮೇಲೆ ಹಲ್ಲೆ ಮಾಡಿದ್ದ ಆರೋಪಿಗಳ ಮೇಲೆ ಗುಂಡು ಹಾರಿಸಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕನಕಪುರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
ರಾಮನಗರ, ಜುಲೈ 28: ಮಹಿಳೆ ಸೇರಿ ಏಳು ಜನರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದ ಆರೋಪಿಗಳಿಗೆ ಪೊಲೀಸರು (Police) ಗುಂಡೇಟಿನ ರುಚಿ ತೋರಿಸಿ ವಶಕ್ಕೆ ಪಡೆದುಕೊಂಡಿದ್ದಾರೆ. ಹರ್ಷ ಅಲಿಯಾಸ್ ಕೈಮಾ (36), ಕರುಣೇಶ್ ಅಲಿಯಾಸ್ ಖಣಿ (26) ಕಾಲಿಗೆ ಗುಂಡೇಟು. ಆರೋಪಿಗಳು ಬೆಂಗಳೂರು (Bengaluru) ಹೊರವಲಯದ ಕಗ್ಗಲೀಪುರದಲ್ಲಿ ಅಡಗಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ದೊರೆತಿತ್ತು. ಖಚಿತ ಮಾಹಿತಿ ಮೇರೆಗೆ ಕನಕಪುರ ಟೌನ್ ಪೊಲೀಸ್ ಠಾಣೆ ಪೊಲೀಸರು ಇಂದು (ಜು.28) ಬೆಳ್ಳಂ ಬೆಳಿಗ್ಗೆ ಆರೋಪಿಗಳನ್ನು ವಶಕ್ಕೆ ಪಡೆಯಲು ಹೋಗಿದ್ದರು. ಈ ವೇಳೆ ಆರೋಪಿಗಳು ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದರು.
ಆತ್ಮರಕ್ಷಣೆಗಾಗಿ ಪಿಎಸ್ಐಗಳಾದ ಕೃಷ್ಣಪ್ಪ, ಮನೋಹರ್ ಅವರು ಆರೋಪಿಗಳ ಕಾಲಿಗೆ ಗುಂಡು ಹೊಡೆದು, ವಶಕ್ಕೆ ಪಡೆದುಕೊಂಡರು. ಘಟನೆಯಲ್ಲಿ ಪೊಲೀಸ್ ಸಿಬ್ಬಂದಿ ರಾಜಶೇಖರ್, ಶಿವಶಂಕರ್ ಎಂಬುವರಿಗೆ ಗಾಯಗಳಾಗಿವೆ. ಆರೋಪಿಗಳು ಮತ್ತು ಪೊಲೀಸ್ ಸಿಬ್ಬಂದಿಯನ್ನು ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ: ಎರಡನೇ ಪತ್ನಿಗೆ ಮತಾಂತರವಾಗುವಂತೆ ಕಿರುಕುಳ ನೀಡಿದ ಮುಜಾಹಿದ್ ಖಾನ್ ವಿರುದ್ಧ ದೂರು ದಾಖಲು
ಏನಿದು ಪ್ರಕರಣ
ಕಳೆದ ಸೋಮವಾರ ಕನಕಪುರ ತಾಲೂಕಿನ ಮಾಳಗಾಳು ಗ್ರಾಮಕ್ಕೆ ರೌಡಿಶೀಟರ್ ಹರ್ಷ ಆ್ಯಂಡ್ ಗ್ಯಾಂಗ್ ನುಗ್ಗಿ ಮಾರಕಾಸ್ತ್ರಗಳಿಂದ ಮಹಿಳೆಯರು ಸೇರಿದಂತೆ 7 ಜನರ ಮೇಲೆ ಹಲ್ಲೆ ಮಾಡಿತ್ತು. ಘಟನೆಯಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷನ ಕೈ ಕಟ್ ಆಗಿತ್ತು. ಕನಕಪುರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Published On - 11:44 am, Sun, 28 July 24