ಅಕ್ರಮ ಮಣ್ಣು ಸಾಗಿಟ ಬಗ್ಗೆ ಪ್ರಶ್ನಿಸಿದ್ದಕ್ಕೆ ತಹಶೀಲ್ದಾರ್​ ಮೇಲೆ ಲಾರಿ ಹತ್ತಿಸಿ ಕೊಲೆಗೆ ಯತ್ನ: ದೂರು ದಾಖಲು

| Updated By: ಗಂಗಾಧರ​ ಬ. ಸಾಬೋಜಿ

Updated on: Mar 03, 2024 | 6:40 PM

ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ಭೀಮಸಂದ್ರ ಬಳಿ ಅಕ್ರಮವಾಗಿ ಮಣ್ಣು ಸಾಗಿಸುತ್ತಿದ್ದ ಬಗ್ಗೆ ಪ್ರಶ್ನಿಸಿದ್ದಕ್ಕೆ ತಹಶೀಲ್ದಾರ್​ ಮೇಲೆ ಲಾರಿ ಹತ್ತಿಸಿ ಕೊಲೆಗೆ ಯತ್ನಿಸಿರುವಂತಹ ಘಟನೆ ನಡೆದಿದೆ. ತಹಶಿಲ್ದಾರ್ ವಿಜಯಣ್ಣ ಮೇಲೆ ಕೊಲೆಗೆ ಯತ್ನಿಸಲಾಗಿದೆ. ಗೋಮಾಳ ಜಮೀನಿನಲ್ಲಿ ಅಕ್ರಮವಾಗಿ ಮಣ್ಣು ಸಾಗಾಟ ಆರೋಪ ಕೇಳಿಬಂದಿದೆ. ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಅಕ್ರಮ ಮಣ್ಣು ಸಾಗಿಟ ಬಗ್ಗೆ ಪ್ರಶ್ನಿಸಿದ್ದಕ್ಕೆ ತಹಶೀಲ್ದಾರ್​ ಮೇಲೆ ಲಾರಿ ಹತ್ತಿಸಿ ಕೊಲೆಗೆ ಯತ್ನ: ದೂರು ದಾಖಲು
ತಹಶೀಲ್ದಾರ್​ ವಿಜಯಣ್ಣ
Follow us on

ರಾಮನಗರ, ಮಾರ್ಚ್​​​ 3: ಅಕ್ರಮವಾಗಿ ಮಣ್ಣು ಸಾಗಿಸುತ್ತಿದ್ದ ಬಗ್ಗೆ ಪ್ರಶ್ನಿಸಿದ್ದಕ್ಕೆ ತಹಶೀಲ್ದಾರ್ (Tehsildar)​ ಮೇಲೆ ಲಾರಿ ಹತ್ತಿಸಿ ಕೊಲೆಗೆ ಯತ್ನಿಸಿರುವಂತಹ ಘಟನೆ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ಭೀಮಸಂದ್ರ ಬಳಿ ನಡೆದಿದೆ. ತಹಶಿಲ್ದಾರ್ ವಿಜಯಣ್ಣ ಮೇಲೆ ಕೊಲೆಗೆ ಯತ್ನಿಸಲಾಗಿದೆ. ಗೋಮಾಳ ಜಮೀನಿನಲ್ಲಿ ಅಕ್ರಮವಾಗಿ ಮಣ್ಣು ಸಾಗಾಟ ಆರೋಪ ಕೇಳಿಬಂದಿದೆ. ನಿಲ್ಲಿಸು ಎಂದಿದ್ದಕ್ಕೆ ಲಾರಿ ಹತ್ತಿಸಿ ಕೊಲೆಗೆ ಯತ್ನಿಸಿದ್ದಾರೆಂದು ಹಾರೋಹಳ್ಳಿ ಠಾಣೆಯಲ್ಲಿ ವಿಜಯಣ್ಣ ದೂರು ದಾಖಲಿಸಿದ್ದಾರೆ. ಚೇಸ್ ಮಾಡಿ ಆರೋಪಿಯನ್ನು ಹಿಡಿದಿದ್ದಾರೆ. ಫೆ.29‌ರಂದು ಭೀಮಸಂದ್ರ ಬಳಿ ಘಟನೆ‌ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚೆಕ್‌ಪೋಸ್ಟ್‌ನಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿ ಅಕ್ಕಿ ಕಳ್ಳರು ಎಸ್ಕೇಪ್‌

ಗದಗ: ಪೊಲೀಸರ ಮೇಲೆ ಹಲ್ಲೆ ಮಾಡಿ ಅಕ್ಕಿ ಕಳ್ಳರು ಎಸ್ಕೇಪ್ ಆಗಿರುವಂತಹ ಘಟನೆ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ರಾಮಗೇರಿ ಚೆಕ್ ಪೋಸ್ಟ್ ಬಳಿ ನಡೆದಿದೆ. ಲಕ್ಷ್ಮೇಶ್ವರ ಠಾಣೆಯ ಪೊಲೀಸ್ ಪೇದೆ ಎಚ್.ಎನ್.ಗೊರವರ್ ಮೇಲೆ ಹಲ್ಲೆ ಮಾಡಲಾಗಿದೆ. ಅನ್ನಭಾಗ್ಯ ಅಕ್ಕಿ ವಾಹನ ತಪಾಸಣೆ ಮಾಡುವ ವೇಳೆ ಘಟನೆ ಸಂಭವಿಸಿದೆ.

ಇದನ್ನೂ ಓದಿ: ರಾಯಚೂರು: ಗ್ರಾಮ ದೇವಿ ಜಾತ್ರೆಗೆ ಬಂದಿದ್ದವನ ಹತ್ಯೆ! ಪಾರ್ಟಿಗೆಂದು ಹೋದವ ಮೂರು ದಿನದ ಬಳಿಕ ಶವವಾಗಿ ಪತ್ತೆ

ರಾಮಗೇರಿ ಚೆಕ್ ಪೋಸ್ಟ್​​ನಲ್ಲಿ ಪೊಲೀಸ್ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದರು. ಪೊಲೀಸ್ ಸಮವಸ್ತ್ರ ಧರಿಸಿ ಕರ್ತವ್ಯ ನಿರತ ಪೇದೆಯ ಮೇಲೆಯೇ ಪುಂಡರು ಹಲ್ಲೆ ಮಾಡಿದ್ದಾರೆ. ಸಮವಸ್ತ್ರ ಹರಿದು, ಮೈ ಕೈ ಮೇಲೆ ಬಾಸುಂಡೆ ಬೀಳುವಂತೆ ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪ ಮಾಡಲಾಗಿದೆ. ಘಟನೆ ನಡೆದ ಕೂಡಲೇ ವಾಹನ ಸಮೇತವಾಗಿ ಸ್ಥಳದಿಂದ ಆರೋಪಿಗಳು ಪರಾರಿಯಾಗಿದ್ದಾರೆ. ಜಿಲ್ಲೆಯಲ್ಲಿ ಎಗ್ಗಿಲ್ಲದೇ ಅಕ್ರಮ ಅನ್ನ ಭಾಗ್ಯ ಅಕ್ಕಿ ಸಾಗಾಟ ನಡೆದಿದೆ. ಲಕ್ಷ್ಮೇಶ್ವರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಬೈಕ್​ಗೆ ಟೆಂಪೋ ಡಿಕ್ಕಿ: ಸವಾರ ಸ್ಥಳದಲ್ಲಿಯೇ ಸಾವು

ಉಡುಪಿ: ಬೈಕ್​ಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವಂತಹ ಘಟನೆ  ಜಿಲ್ಲೆಯ ಕಾಪು ತಾಲೂಕಿನ ಉದ್ಯಾವರ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಡಿಕ್ಕಿಯ ರಭಸಕ್ಕೆ ಸವಾರ ಮೃತಪಟ್ಟಿದ್ದು, ಸಹ ಸವಾರ ಮಹಿಳೆಗೆ ತೀವ್ರಗಾಯಗೊಂಡಿದ್ದಾರೆ.

ಇದನ್ನೂ ಓದಿ: ನಿಶಾನಿ ಬೆಟ್ಟದಲ್ಲಿ ಕಾಡಾನೆ ದಾಳಿಗೆ ವೃದ್ಧ ಸಾವು: ಶವ ಕಂಡು ಸ್ಥಳೀಯರಿಗೆ ಮಾಹಿತಿ ನೀಡಿದ ಚಾರಣಿಗರು

ಉಚ್ಚಿಲ ಪೊಲ್ಯ ಮೂಲದ ಪಡುಬಿದ್ರೆ ಕನ್ನಂಗಾರು ನಿವಾಸಿ ಮುಫ್ರೀನ್(18) ಮೃತ ವ್ಯಕ್ತಿ. ಹಿಂಬದಿ ಕುಳಿತ ಮೃತರ ತಾಯಿ ಹಾಜಿರಾ ಅವರಿಗೆ ಗಾಯಗಳಾಗಿವೆ. ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಟಪಾಡಿ ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.