ರಾಮನಗರ, ಫೆಬ್ರವರಿ 17: ರೇಷ್ಮೆ ನೂಲು ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಓರ್ವ ಕಾರ್ಮಿಕ ಸಾವನ್ನಪ್ಪಿರುವಂತಹ (death) ಘಟನೆ ರಾಮನಗರದ ಟಿಪ್ಪುಬಡಾವಣೆಯ ಕಾರ್ಖಾನೆಯಲ್ಲಿ ಸಂಭವಿಸಿದೆ. ಸನಾವುಲ್ಲಾ ಖಾನ್(63) ಮೃತ ವ್ಯಕ್ತಿ. ಬಾಯ್ಲರ್‌ಗೆ ಸೌದೆ ಹಾಕುವಾಗ ಏಕಾಏಕಿ ಸ್ಫೋಟಗೊಂಡು ಅನಾಹುತ ಸಂಭವಿಸಿದೆ. ಕಾರ್ಖಾನೆಯಲ್ಲಿ 10ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಅದೃಷ್ಟವಶಾತ್ ಉಳಿದ ಕಾರ್ಮಿಕರು ದೂರವಿದ್ದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಅಕ್ರಂ ಪಾಷಾ ಎಂಬುವವರಿಗೆ ನೂಲಿನ ಯಂತ್ರದ ಕಾರ್ಖಾನೆ ಸೇರಿದ್ದು, ಅವರ ವಿರುದ್ಧ ರಾಮನಗರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ: ವೇಗವಾಗಿ ಬಂದ ಟ್ಯಾಕ್ಟರ್ ಬೈಕ್ ಸವಾರನಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ನಗರದ ಹಳೆ ಮಂಡ್ಲಿ ಬಳಿ ರಸ್ತೆ ಅಪಘಾತ ಸಂಭವಿಸಿದೆ. ವಾಸೀಂ (22) ಮೃತ ಬೈಕ್ ಸವಾರ. ಅಪಘಾತ ಬಳಿಕ ಟ್ರ್ಯಾಕ್ಟರ್ ಚಾಲಕ ಎಸ್ಕೇಪ್ ಆಗಿದ್ದಾನೆ.
ಇದನ್ನೂ ಓದಿ: ಹೆಂಡ್ತಿ ಜತೆ ಮಲಗಿದ್ದಾಗಲೇ ರೌಡಿಶೀಟರ್ ಹತ್ಯೆ: ಪರಪ್ಪನ ಅಗ್ರಹಾರ ಜೈಲಲೇ ರೂಪಿಸಲಾಗಿತ್ತು ಕೊಲೆ ಸಂಚು
ಯುವಕ ಬೈಕ್ನಲ್ಲಿ ಮನೆಯಿಂದ ಶಿವಮೊಗ್ಗಕ್ಕೆ ಹೋಗುವ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದೆ. ಟ್ರ್ಯಾಕ್ಟರ್ ಚಾಲಕನ ವಿರುದ್ಧ ಮೃತನ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಶ್ಚಿಮ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಆನೇಕಲ್: ವೈದ್ಯರ ನಿರ್ಲಕ್ಷ್ಯಕ್ಕೆ ಯುವತಿ ಸಾವು ಆರೋಪ ಕೇಳಿಬಂದಿದೆ. ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಸರ್ಜಾಪುರದ ಟೌನ್ ಆಸ್ಪತ್ರೆ ವೈದ್ಯರ ವಿರುದ್ಧ ಯುವತಿ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಲತಾ(23) ಸರ್ಜಾಪುರ ಸಮೀಪದ ಟಿ.ಹೊಸಹಳ್ಳಿ ಮೃತ ನಿವಾಸಿ. ನಿನ್ನೇ ಸಂಜೆ ಹೊಟ್ಟೆ ನೋವು, ಲೂಸ್ ಮೋಷನ್ ಎಂದು ಆಸ್ಪತ್ರೆಗೆ ದಾಖಲಾಗಿದ್ದರು.
ಇದನ್ನೂ ಓದಿ: ಕಲಬುರಗಿ: ಸಾಲ ಕೊಟ್ಟ ಹಣ ವಾಪಸ್ ಕೇಳಿದಕ್ಕೆ ಸ್ನೇಹಿತನ ಕೊಲೆ; ಮೂವರ ಬಂಧನ
ಇಂದು ಮಧ್ಯಾಹ್ನ ಉಸಿರಾಟದ ಸಮಸ್ಯೆ ಇದೇ ಎಂದು ಆಂಬ್ಯುಲೇನ್ಸ್ ಮೂಲಕವೇ ಬೇರೊಂದು ಆಸ್ಪತ್ರೆಗೆ ಶಿಫ್ಟ್ ಮಾಡುವಾಗ ದಾರಿ ಮಧ್ಯೆಯೇ ಯುವತಿ ಸಾವನ್ನಪ್ಪಿದ್ದಾಳೆ. ಆಸ್ಪತ್ರೆ ಮುಂಭಾಗ ಯುವತಿ ಶವದೊಂದಿಗೆ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಉಡುಪಿ: ಪರೀಕ್ಷಾ ಭೀತಿಯಿಂದ ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲ ಮಾಹೆ ವಿವಿಯಲ್ಲಿ ಸಂಭವಿಸಿದೆ. ಮಾಹೆ ವಿವಿಯ ಎಂಸಿಎಚ್‌ಪಿ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿ, ಬಿಹಾರ ಮೂಲದ ಸತ್ಯಂ ಸುಮನ್ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಪರೀಕ್ಷೆ ನಡೆಯುತ್ತಿದ್ದ ವೇಳೆಯಲ್ಲಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಟ್ಟಡದಿಂದ ಜಿಗಿಯುತ್ತಿದ್ದಂತೆ ಇತರ ವಿದ್ಯಾರ್ಥಿಗಳು ಆತಂಕಗೊಂಡು ಓಡಾಡಿರುವ ದೃಶ್ಯ ಕೆಮರಾದಲ್ಲಿ ಸೆರೆಯಾಗಿದೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.