ರಾಮನಗರ: ಕಸಾಯಿಖಾನೆಗೆ ಜಾನುವಾರು ಸಾಗಾಟ ವಾಹನದ ಮೇಲೆ ದಾಳಿ, ವಾಹನದಲ್ಲಿದ್ದ ವ್ಯಕ್ತಿ ನಿಗೂಢ ಸಾವು

ರಾಮನಗರದಲ್ಲಿ ಜಾನುವಾರು ಸಾಗಾಟ ಮಾಡುತ್ತಿದ್ದ ವಾಹನದ ಮೇಲೆ ಹಿಂದೂ ಕಾರ್ಯಕರ್ತರು ದಾಳಿ ನಡೆಸಿದ ಘಟನೆ ನಿನ್ನೆ ನಡೆದಿತ್ತು. ಇದೀಗ ಘಟನೆ ನಡೆದ ಸ್ವಲ್ಪ ದೂರದಲ್ಲೇ ವಾಹನದಲ್ಲಿದ್ದ ವ್ಯಕ್ತಿಯ ಶವ ಪತ್ತೆಯಾಗಿದೆ.

ರಾಮನಗರ: ಕಸಾಯಿಖಾನೆಗೆ ಜಾನುವಾರು ಸಾಗಾಟ ವಾಹನದ ಮೇಲೆ ದಾಳಿ, ವಾಹನದಲ್ಲಿದ್ದ ವ್ಯಕ್ತಿ ನಿಗೂಢ ಸಾವು
ರಾಮನಗರದಲ್ಲಿ ಕಸಾಯಿಖಾನೆಗೆ ಜಾನುವಾರು ಸಾಗಾಟ ಮಾಡುತ್ತಿದ್ದ ವಾಹನದಲ್ಲಿದ್ದ ವ್ಯಕ್ತಿ ಅನುಮಾನಸ್ಪದವಾಗಿ ಸಾವು (ಸಾಂದರ್ಭಿಕ ಚಿತ್ರ)Image Credit source: istock
Follow us
|

Updated on:Apr 01, 2023 | 2:43 PM

ರಾಮನಗರ: ಕಸಾಯಿಖಾನೆಗೆ ಜಾನುವಾರು ಸಾಗಣೆ (Transportation of cattle to slaughterhouses) ಮಾಡುತ್ತಿದ್ದಾಗ ಹಿಂದೂ ಕಾರ್ಯಕರ್ತರ (Hindu activists) ದಾಳಿಗೆ ಹೆದರಿ ಪರಾರಿಯಾಗಿದ್ದ ವಾಹನದಲ್ಲಿದ್ದ ವ್ಯಕ್ತಿ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾನೆ (Suspicious death). ಮಂಡ್ಯ ಜಿಲ್ಲೆ ಮಳವಳ್ಳಿಯ ಇರ್ಗೀಷ್ ಪಾಷಾ (35) ಸಾವನ್ನಪ್ಪಿದ ವ್ಯಕ್ತಿ. ಜಿಲ್ಲೆಯ ಕನಕಪುರ ತಾಲೂಕಿನ ಸಾತನೂರು ಬಳಿ ಇರ್ಗೀಷ್ ಪಾಷಾ ಶವ ಪತ್ತೆಯಾಗಿದ್ದು, ಆಕ್ರೋಶಗೊಂಡ ಕುಟುಂಬಸ್ಥರು ಸಾತನೂರು ಠಾಣೆ ಬಳಿ ಪ್ರತಿಭಟನೆ ನಡೆಸಿ ಇರ್ಗೀಷ್ ಪಾಷಾ ಸಾವಿಗೆ ಪುನೀತ್ ಕೆರೆಹಳ್ಳಿ ಕಾರಣ ಎಂದು ಆರೋಪಿಸಿದ್ದಾರೆ. ಅಲ್ಲದೆ, ಕೂಡಲೇ ಪುನೀತ್ ಕೆರೆಹಳ್ಳಿಯನ್ನು ಬಂಧಿಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಕ್ಯಾಂಟರ್ ವಾಹನದಲ್ಲಿ ಇರ್ಗೀಷ್ ಪಾಷಾ ಎಂಬಾತ 16 ಜಾನುವಾರುಗಳನ್ನು ಕಸಾಯಿಖಾನೆಗೆ ಕೊಂಡೊಯ್ಯುತ್ತಿದ್ದನು. ಈ ವಿಚಾರ ತಿಳಿದ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಮತ್ತು ತಂಡ ವಾಹನದ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಭಯಬೀತನಾದ ಇರ್ಗೀಷ್ ಪಾಷಾ ವಾಹನ ಬಿಟ್ಟು ಪರಾರಿಯಾಗಿದ್ದು, ವಾಹನದಲ್ಲಿದ್ದ 16 ಜಾನುವಾರುಗಳನ್ನು ರಕ್ಷಿಸಲಾಗಿತ್ತು. ಜಾನುವಾರು ರಕ್ಷಣೆ ಸಂಬಂಧ ಸಾತನೂರು ಠಾಣೆಯಲ್ಲಿ ಕೇಸ್​ ದಾಖಲಾಗಿತ್ತು.

ಇದನ್ನೂ ಓದಿ: ಕಾಸರಗೋಡು: ರೊಚ್ಚಿಗೆದ್ದು ತಿವಿಯಿತು ಕಸಾಯಿಖಾನೆಗೆ ತಂದ ಎಮ್ಮೆ: ಯುವಕ ಸಾವು, 25 ಮಂದಿಗೆ ಗಾಯ

ಆದರೆ, ದಾಳಿ ನಡೆದ ಸ್ವಲ್ಪ ದೂರದಲ್ಲೇ ಇರುವ ಸಾತನೂರು ಗ್ರಾಮದಲ್ಲಿ ಇರ್ಗೀಷ್ ಪಾಷಾ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದು, ಶವ ಕೂಡ ಪತ್ತೆಯಾಗಿದೆ. ಸದ್ಯ ಪಾಷಾ ಸಾವಿಗೆ ಪುನೀತ್ ಕೆರೆಹಳ್ಳಿ ಕಾರಣ ಎಂದು ಮೃತನ ಕುಟುಂಬಸ್ಥರು ಆರೋಪಿಸಲಾಗುತ್ತಿದ್ದು, ಬಂಧನಕ್ಕೆ ಆಗ್ರಹಿಸುತ್ತಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:43 pm, Sat, 1 April 23

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್