AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳಾ ಕಾನ್ಸ್‌ಟೇಬಲ್ ಶವ ಪತ್ತೆ

ರಾಮನಗರದ ದ್ಯಾವಸಂದ್ರದಿಂದ ಬೆಂಗಳೂರಿಗೆ ಬಂದು ಪೊಲೀಸ್ ಪೇದೆಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಮಂಜುಶ್ರೀ ಅವರು ಕಳೆದ ಕೆಲ ದಿನಗಳಿಂದ ಕೆಲಸಕ್ಕೆ ಹಾಕರಾಗಿರಲಿಲ್ಲ. ರಜೆ ಹಾಕಿದ್ದರು. ಆದರೆ ಈಗ ಅವರ ಶವ ಮನೆಯಲ್ಲಿ ಪತ್ತೆಯಾಗಿದೆ. ದ್ಯಾವಸಂದ್ರದ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ರಾಮನಗರ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳಾ ಕಾನ್ಸ್‌ಟೇಬಲ್ ಶವ ಪತ್ತೆ
ಮಂಜುಶ್ರೀ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on: Feb 17, 2024 | 10:46 AM

Share

ರಾಮನಗರ, ಫೆ.17: ಜಿಲ್ಲೆಯ ಹಾರೋಹಳ್ಳಿ ತಾಲೂಕಿನ‌ ದ್ಯಾವಸಂದ್ರದ ಮನೆಯಲ್ಲಿ ನೇಣು (Hanging) ಬಿಗಿದ ಸ್ಥಿತಿಯಲ್ಲಿ ಮಹಿಳಾ ಕಾನ್ಸ್‌ಟೇಬಲ್ ಶವ (Dead Body) ಪತ್ತೆಯಾಗಿದೆ. ಮಂಜುಶ್ರೀ (27) ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2020-21‌ರಿಂದ ಪೊಲೀಸ್ ಸಿಬ್ಬಂದಿಯಾಗಿ ಕೆಲಸ‌ ಮಾಡುತ್ತಿದ್ದ ಮಂಜುಶ್ರೀ ಬೆಂಗಳೂರಿನ ಮೈಕೋ ಲೇಔಟ್​ನಲ್ಲಿ ಪೊಲೀಸ್ ಪೇದೆಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇತ್ತೀಚೆಗೆ ಶಿವಾಜಿನಗರಕ್ಕೆ ನಿಯೋಜನೆ ಆಗಿದ್ದರು. ಕೆಲ ದಿನಗಳಿಂದ ಕೆಲಸಕ್ಕೆ ರಜೆ ಹಾಕಿದ್ದ ಮಂಜುಶ್ರೀ ನಿನ್ನೆ ರಾತ್ರಿ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮರಣೋತ್ತರ ಪರೀಕ್ಷೆಗೆ ಶವ ರವಾನಿಸಲಾಗಿದೆ. ಹಾರೋಹಳ್ಳಿಯ ದಯಾನಂದ್ ಆಸ್ಪತ್ರೆಯಲ್ಲಿ‌ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ.

ಬಾವಿಗೆ ಹಾಕಿ ಮಹಿಳೆ ಆತ್ಮಹತ್ಯೆ

ಇನ್ನು ಮತ್ತೊಂದೆಡೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಹೊನ್ನಟಗಿ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಲಿಂಗಸೂಗೂರು ಮೂಲದ ಮಹಿಳೆ ದೇವಮ್ಮ(35) ಮೃತ ದುರ್ದೈವಿ. ಗ್ರಾಮದ ಬಸನಗೌಡ ಮಾಲಿ ಪಾಟೀಲ್ ಅನ್ನೋರ ಜಮೀನು ಕೆಲಸಕ್ಕೆ ಬಂದಿದ್ದ ಮಹಿಳೆ, ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಮತ್ತೊಬ್ಬ ಮಹಿಳೆ ದುರ್ಗಮ್ಮ ಅನ್ನೋರ ಜೊತೆ ಜಗಳವಾಡಿದ್ದರು. ಈ ವೇಳೆ ಮಾತಿಗೆ ಮಾತು ಬೆಳೆದು ಜಮೀನಿನಲ್ಲಿ ಇದ್ದ ಬಾವಿಗೆ ಹಾರಿ ದೇವಮ್ಮ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಮೀನಿನ ಶೆಡ್ ನಲ್ಲಿ ಮೂವರು ಮಕ್ಕಳನ್ನ ಬಿಟ್ಟು ಬಳಿಕ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಬ್ಬೂರು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಬೆಂಗಳೂರು: ಮಹಿಳಾ ಪೊಲೀಸ್ ಮೊಬೈಲ್ ಕಳ್ಳನ ಹಿಡಿದ ಪ್ರಕರಣಕ್ಕೆ ಟ್ವಿಸ್ಟ್, ಘಟನೆ ಹಿಂದಿದೆ ಪ್ರೇಮ್ ಕಹಾನಿ!

ಪರೀಕ್ಷೆ ಭೀತಿಯಿಂದ ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

ಪರೀಕ್ಷೆ ಭೀತಿಯಿಂದ ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಮಣಿಪಾಲ ಮಾಹೆ ವಿವಿಯಲ್ಲಿ ನಡೆದಿದೆ. ಪ್ಯಾರಾ ಮೆಡಿಕಲ್ ವಿದ್ಯಾರ್ಥಿ ಸತ್ಯಂ ಸುಮನ್(19) ಪರೀಕ್ಷೆ ನಡೆಯುತ್ತಿದ್ದ ವೇಳೆಯಲ್ಲೇ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗಾಬರಿಯಿಂದ ವಿದ್ಯಾರ್ಥಿಗಳು ಓಡಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅನೈತಿಕ ಸಂಬಂಧದ ಶಂಕೆ ಕೊಲೆ

ಹಾವೇರಿ ತಾಲೂಕಿನ ನೆಲ್ಲೋಗಲ್ಲ ತಾಂಡಾದಲ್ಲಿ ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ತಮ್ಮನಿಗೆ ಚೂರಿ ಇರಿದು ಅಣ್ಣ ಕೊಲೆಗೈದ ಘಟನೆ ನಡೆದಿದೆ. ತನ್ನ ಹೆಂಡತಿ ಜೊತೆಯೇ ತಮ್ಮ ಅಕ್ರಮ ಸಂಬಂಧ ಹೊಂದಿದ್ದಾನೆ ಎಂಬ ಸಂಶಯದಿಂದ ತಮ್ಮನ ಎದೆಗೆ ಚೂರಿ ಹಾಕಿ ಕೊಲೆ ಮಾಡಿಲಾಗಿದೆ. ತಮ್ಮ ಹನುಮಂತಪ್ಪ ಲಮಾಣಿ (42) ಕೊಲೆಯಾದ ಮೃತ ದುರ್ದೈವಿ. ಶಂಕ್ರಪ್ಪ ಲಮಾಣಿ(55) ತಮ್ಮನಿಗೆ ಚೂರಿ ಇರಿದು ಕೊಲೆಗೈದ ಅಣ್ಣ.

ಆರೋಪಿ ಶಂಕ್ರಪ್ಪ ಕುಡಿದು ಬಂದು ಮನೆಯಲ್ಲಿ ಜಗಳಮಾಡುತ್ತಿದ್ದ ಈ ವೇಳೆ ಜಗಳ ವಿಕೋಪಕ್ಕೆ ತಿರುಗಿ ತಮ್ಮ ಹನುಮಂತಪ್ಪನಿಗೆ ಚೂರಿ ಇರಿದಿದ್ದಾನೆ. ಚಿಕಿತ್ಸೆ ಫಲಿಸದೆ ಸರ್ಕಾರಿ ಆಸ್ಪತ್ರೆಯಲ್ಲಿ ಹನುಮಂತಪ್ಪ ಲಮಾಣಿ ಮೃತಪಟ್ಟಿದ್ದಾರೆ. ತಮ್ಮನನ್ನು ಕೊಲೆಗೈದ ಅಣ್ಣ ಶಂಕ್ರಪ್ಪನನ್ನು ಪೊಲೀಸರು ಬಂಧಿಸಿದ್ದಾರೆ. ಹಾವೇರಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್