ಕಾರು ಹರಿದು ಶಾಲಾ ಮಕ್ಕಳಿಬ್ಬರು ಸಾವು: 5ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

Ramanagara News: ಟ್ಯೂಷನ್ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಬೊಲೆರೊ ಕಾರು ಹರಿದು ಶಾಲಾ ಮಕ್ಕಳಿಬ್ಬರು ಸಾವನ್ನಪ್ಪಿದ್ದು, 5ಕ್ಕೂ ಹೆಚ್ಚು ಮಕ್ಕಳಿಗೆ ಗಾಯಗಳಾಗಿರುವಂತಹ ಘಟನೆ ರಾಮನಗರದ ಗೌಡರದೊಡ್ಡಿ ಬಳಿ ನಡೆದಿದೆ. ರಾಮನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕಾರು ಹರಿದು ಶಾಲಾ ಮಕ್ಕಳಿಬ್ಬರು ಸಾವು: 5ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ
ಪ್ರಾತಿನಿಧಿಕ ಚಿತ್ರ
Follow us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: ಗಂಗಾಧರ​ ಬ. ಸಾಬೋಜಿ

Updated on:Aug 09, 2023 | 9:43 PM

ರಾಮನಗರ, ಆಗಸ್ಟ್​ 09: ಕಾರು ಹರಿದು ಇಬ್ಬರು ಶಾಲಾ ಮಕ್ಕಳ ಸಾವನ್ನಪ್ಪಿದ್ದು (death) , ಐದಕ್ಕೂ ಹೆಚ್ಚು ಮಕ್ಕಳಿಗೆ ಗಾಯಗಳಾಗಿರುವಂತಹ ಘಟನೆ ರಾಮನಗರದ ಲಕ್ಷ್ಮೀಪುರ ಬಳಿ ನಡೆದಿದೆ. ಶಾಲಿನಿ(8), ದರ್ಶನ್ (5) ಮೃತ ದುರ್ದೈವಿಗಳು. ಉಳಿದ ಮಕ್ಕಳಿಗೆ ರಾಮಚಂದ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಟ್ಯೂಷನ್ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ರಾಮನಗರ ಗ್ರಾಮಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಗೋವುಗಳನ್ನು ಕದ್ದು ಜಾನುವಾರು ‌ಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಕಳ್ಳ ಅಂದರ್

ಬೀದರ್‌: ಜೈಭೀಮ್‌ ನಗರದಲ್ಲಿ ಮನೆ ಮುಂದೆ ಕಟ್ಟಿಹಾಕಿದ್ದ ಜಾನುವಾರು ಕಳ್ಳತನ ಮಾಡಿ ಸಂತೆಯಲ್ಲಿ ಮಾರಾಟ ಮಾಡಿದ್ದ ಓರ್ವ ಕಳ್ಳನನ್ನು ಬಂಧಿಸಲಾಗಿದೆ. ಆರೋಪಿಯಿಂದ 70 ಸಾವಿರ ರೂ. ನಗದು, 2 ಗೂಡ್ಸ್ ಆಟೋ ಜಪ್ತಿ ಮಾಡಲಾಗಿದೆ. ಬೀದರ್ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಸಿನಿಮೀಯ ರೀತಿಯಲ್ಲಿ ಜ್ಯೋತಿಷಿ ಪುತ್ರನ ಕಿಡ್ನಾಪ್ ಮಾಡಿದ ಯುವಕ: 5 ಲಕ್ಷ ರೂ ಡಿಮ್ಯಾಂಡ್, ಬಂಧನ

ಬೈಕ್ ಸ್ಕಿಡ್ ಆಗಿ ಬಿದ್ದು ವ್ಯಕ್ತಿ ಸಾವು

ಧಾರವಾಡ: ಮುಮ್ಮಿಗಟ್ಟಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬೈಕ್ ಸ್ಕೀಡ್ ಆಗಿ ಬಿದ್ದು ಸವಾರ ಮೃತಪಟ್ಟಿರುವಂತಹ ಘಟನೆ ನಡೆದಿದೆ. ದುಬ್ಬನಮರಡಿ ಗ್ರಾಮದ ನಿವಾಸಿ ಮೌಲಾಸಾಬ್(58) ಮೃತ ಬೈಕ್​ ಸವಾರ. ಧಾರವಾಡ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಮಂಗಳೂರು: ಮೊಬೈಲ್ ಅಂಗಡಿಗೆ ನುಗ್ಗಿ ಯುವಕರ ಗುಂಪಿನಿಂದ ಮಾಲೀಕನಿಗೆ ಥಳಿತ; ಇಬ್ಬರು ಆರೋಪಿಗಳು ಅಂದರ್​

ಹಾಸನದಲ್ಲಿ ಹಾಡಹಗಲೇ ಗ್ರಾನೈಟ್ ಉದ್ಯಮಿ ಬರ್ಬರ ಹತ್ಯೆ

ಹಾಸನ: ಹಾಡಹಗಲೇ ಗ್ರಾನೈಟ್ ಉದ್ಯಮಿ ಬರ್ಬರ ಹತ್ಯೆ ಮಾಡಿರುವಂತಹ ಘಟನೆ ಹಾಸನ ನಗರದ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಮಾಜಿ ಸಚಿವ ಹೆಚ್.ಡಿ.ರೇವಣ್ಣನ ಅತ್ಯಾಪ್ತ ಕೃಷ್ಣೇಗೌಡ(53) ಮೃತ ವ್ಯಕ್ತಿ. ಕಾರಿನಲ್ಲಿ ತೆರಳುತ್ತಿದ್ದ ಕೃಷ್ಣೇಗೌಡನನ್ನು ಅಡ್ಡಗಟ್ಟಿದ್ದ ದುಷ್ಕರ್ಮಿಗಳು ಗ್ರಾನೈಟ್ ಫ್ಯಾಕ್ಟರಿ ಎದುರೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

ಘಟನಾ ಸ್ಥಳಕ್ಕೆ ಎಸ್​ಪಿ ಹರಿರಾಮ್ ಶಂಕರ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಸ್ಥಳಕ್ಕೆ ಹಾಸನ ಕ್ಷೇತ್ರದ JDS ಶಾಸಕ ಸ್ವರೂಪ್ ಪ್ರಕಾಶ್ ಕೂಡ ಭೇಟಿ ನೀಡಿದ್ದರು. ಹಾಸನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:32 pm, Wed, 9 August 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ