AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rape Case: ಆಟವಾಡುತ್ತಿದ್ದ 6 ವರ್ಷದ ಮಗುವಿನ ಮೇಲೆ ಕಾಮುಕನಿಂದ ಅತ್ಯಾಚಾರ; ಬಾಲಕಿ ಸ್ಥಿತಿ ಗಂಭೀರ

Crime News: 6 ವರ್ಷದ ಮಗುವಿನ ಮೇಲೆ 20 ವರ್ಷದ ಯುವಕನೊಬ್ಬ ಅಮಾನುಷವಾಗಿ ಅತ್ಯಾಚಾರ ನಡೆಸಿದ್ದಾನೆ. ಆತನ ಮುಖ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆರೋಪಿ ಪರಾರಿಯಾಗಿದ್ದಾನೆ.

Rape Case: ಆಟವಾಡುತ್ತಿದ್ದ 6 ವರ್ಷದ ಮಗುವಿನ ಮೇಲೆ ಕಾಮುಕನಿಂದ ಅತ್ಯಾಚಾರ; ಬಾಲಕಿ ಸ್ಥಿತಿ ಗಂಭೀರ
ಅತ್ಯಾಚಾರಿಯ ಮುಖ ಸಿಸಿಟಿವಿಯಲ್ಲಿ ಸೆರೆ
TV9 Web
| Updated By: ಸುಷ್ಮಾ ಚಕ್ರೆ|

Updated on: Oct 23, 2021 | 8:56 PM

Share

ನವದೆಹಲಿ: ದಿನದಿಂದ ದಿನಕ್ಕೆ ಕಾಮುಕರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಚಿಕ್ಕ ಮಕ್ಕಳನ್ನು ಕೂಡ ಮನೆಯಿಂದ ಹೊರಗೆ ಕಳುಹಿಸಲು ಹೆದರಬೇಕಾದ ಪರಿಸ್ಥಿತಿ ಎದುರಾಗಿದೆ. ಮಹಿಳೆಯರು, ಯುವತಿಯರನ್ನು ಮಾತ್ರವಲ್ಲದೆ ಸಣ್ಣ ಮಕ್ಕಳ ಮೇಲೆ ಕೂಡ ಅತ್ಯಾಚಾರ ನಡೆಯುತ್ತಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇದೇ ರೀತಿಯ ಆಘಾತಕಾರಿ ಘಟನೆಯೊಂದು ನಡೆದಿದ್ದು, 6 ವರ್ಷದ ಮಗುವಿನ ಮೇಲೆ 20 ವರ್ಷದ ಯುವಕನೊಬ್ಬ ಅಮಾನುಷವಾಗಿ ಅತ್ಯಾಚಾರ ನಡೆಸಿದ್ದಾನೆ. ಆತನ ಮುಖ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆರೋಪಿ ಪರಾರಿಯಾಗಿದ್ದಾನೆ.

ದೆಹಲಿಯ ರಂಜಿತ್ ನಗರ ಪ್ರದೇಶದಲ್ಲಿ 20 ವರ್ಷದ ವ್ಯಕ್ತಿಯೊಬ್ಬ 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಚಿಂತಾಜನಕ ಸ್ಥಿತಿಯಲ್ಲಿರುವ ಬಾಲಕಿಗೆ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಆಕೆಯ ಸ್ಥಿತಿ ಗಂಭೀರವಾಗಿದೆ. ನಿನ್ನೆ ಬಾಲಕಿ ತನ್ನ ಮನೆಯ ಹೊರಗೆ ಆಟವಾಡುತ್ತಿದ್ದಾಗ ಈ ಘಟನೆ ನಡೆದಿದ್ದು, ಆರೋಪಿ ಆಕೆಗೆ ಆಮಿಷ ಒಡ್ಡಿ ಏಕಾಂತ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗಿದೆ.

ಬಾಲಕಿ ಮನೆಗೆ ಹಿಂದಿರುಗಿದಾಗ ಆಕೆಯ ಗುಪ್ತಾಂಗದಲ್ಲಿ ರಕ್ತಸ್ರಾವವಾಗಿತ್ತು ಎಂದು ಮನೆಯವರು ಪೊಲೀಸರಿಗೆ ತಿಳಿಸಿದ್ದಾರೆ. ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ದಾಗ ಆಕೆಯ ಮೇಲೆ ಅತ್ಯಾಚಾರ ನಡೆದಿರುವುದು ಗೊತ್ತಾಗಿದೆ ಎಂದು ಕುಟುಂಬದವರು ಹೇಳಿದ್ದಾರೆ. ಆರೋಪಿಯು ಬಾಲಕಿಯೊಂದಿಗೆ ಇರುವ ಸಿಸಿಟಿವಿ ದೃಶ್ಯಾವಳಿಗಳು ಪತ್ತೆಯಾಗಿದ್ದು, ಆ ಯುವಕನನ್ನು ಹುಡುಗಿಯೇ ಹಿಂಬಾಲಿಸುತ್ತಿರುವುದು ಕಂಡುಬಂದಿದೆ. ಬಡ ಕಾರ್ಮಿಕನ ಮಗಳಾಗಿರುವ ಆ ಬಾಲಕಿಗೆ ಚಾಕೋಲೇಟ್ ಅಥವಾ ಬೇರೇನನ್ನೋ ಕೊಡಿಸುವ ಆಮಿಷವೊಡ್ಡಿ ಕರೆದೊಯ್ದಿರುವ ಸಾಧ್ಯತೆ ಹೆಚ್ಚಾಗಿದೆ.

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ವಿರುದ್ಧ ಕಾನೂನು ಸೆಕ್ಷನ್‌ಗಳು ಸೇರಿದಂತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ದೆಹಲಿ ಮಹಿಳಾ ಆಯೋಗವು ಈ ವಿಷಯದಲ್ಲಿ ಕಠಿಣ ಕ್ರಮ ಕೈಗೊಳ್ಳುವಂತೆ ಪೋಲೀಸರಿಗೆ ಸೂಚನೆ ನೀಡಿದೆ. ಆರೋಪಿ ಇನ್ನೂ ಪತ್ತೆಯಾಗಿಲ್ಲ.

ಕಳೆದ ಬುಧವಾರ ದೆಹಲಿಯ ಅಮರ್ ಕಾಲೋನಿ ಪ್ರದೇಶದಲ್ಲಿ ನೇಪಾಳಿ ವ್ಯಕ್ತಿಯೊಬ್ಬ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ. ಅದಾದ ಬಳಿಕ ದಕ್ಷಿಣ ದೆಹಲಿಯ ಕೋಟ್ಲಾ ಮುಬಾರಕ್‌ಪುರದಲ್ಲಿ 15 ವರ್ಷದ ಬಾಲಕಿಯನ್ನು ಆಕೆಯ ಸೋದರಸಂಬಂಧಿ ಅತ್ಯಾಚಾರ ಮಾಡಿದ ಬೆನ್ನಲ್ಲೇ ಇದೀಗ ಈ ಹೀನ ಕೃತ್ಯ ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಒಂಬತ್ತು ವರ್ಷದ ಬಾಲಕಿ‌ ಮೇಲೆ 60 ವರ್ಷದ ವೃದ್ಧನಿಂದ ಅತ್ಯಾಚಾರ, ಆರೋಪಿ ವೃದ್ಧ ಅರೆಸ್ಟ್

Crime News: ಚಲಿಸುವ ರೈಲಿನಲ್ಲೇ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ; 4 ಕಾಮುಕರ ಬಂಧನ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ