AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rape Case: ಕೇರಳದ 15 ವರ್ಷದ ಬಾಲಕನಿಂದ 21 ವರ್ಷದ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ

Crime News: ತನ್ನ ಮೇಲೆ ಅತ್ಯಾಚಾರ ನಡೆಸಲು ಪ್ರಯತ್ನಿಸಿದ ಬಾಲಕನಿಂದ ಆ ಯುವತಿ ತಪ್ಪಿಸಿಕೊಂಡಿದ್ದು, ಅಲ್ಲಿಂದ ಓಡಿ ಹೋಗಿದ್ದಾಳೆ. ಇದಾದ ಕೂಡಲೆ ಘಟನೆ ನಡೆದ ಸ್ಥಳದಿಂದ ಆ ಹುಡುಗ ಕೂಡ ಪರಾರಿಯಾಗಿದ್ದಾನೆ.

Rape Case: ಕೇರಳದ 15 ವರ್ಷದ ಬಾಲಕನಿಂದ 21 ವರ್ಷದ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Nov 01, 2021 | 6:56 PM

Share

ಮಲಪ್ಪುರಂ: 10ನೇ ತರಗತಿ ಓದುತ್ತಿದ್ದ 15 ವರ್ಷದ ವಿದ್ಯಾರ್ಥಿಯೊಬ್ಬ 21 ವರ್ಷದ ಯುವತಿ ಮೇಲೆ ಅತ್ಯಾಚಾರ ನಡೆಸಲು ಯತ್ನಿಸಿರುವ ಘಟನೆ ಕೇರಳದ ಕೊಂಡೊಟ್ಟಿಯಲ್ಲಿ ನಡೆದಿದೆ. ನಿನ್ನೆ 21 ವರ್ಷದ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿದ್ದ 15 ವರ್ಷದ ಬಾಲಕನನ್ನು ಪೊಲೀಸರು ಇಂದು ಬಂಧಿಸಿದ್ದಾರೆ.

10ನೇ ತರಗತಿಯ ವಿದ್ಯಾರ್ಥಿಯನ್ನು ಬಂಧಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಮಲಪ್ಪುರಂ ಎಸ್ಪಿ ಸುಜಿತ್ ದಾಸ್, ಹುಡುಗನಿಗೆ ಯಾವುದೇ ಅಪರಾಧದ ಹಿನ್ನೆಲೆಯಿಲ್ಲ. ಸಂತ್ರಸ್ತೆಯ ಪ್ರಕಾರ ಈ ಹಿಂದೆ ಎಂದಿಗೂ ತೊಂದರೆ ನೀಡಿಲ್ಲ. ಆದರೆ, ಇದೀಗ 21 ವರ್ಷದ ಯುವತಿಯ ಮೇಲೆ ಅತ್ಯಾಚಾರ ಎಸಗಲು ಪ್ರಯತ್ನಿಸಿರುವುದು ಖಚಿತವಾಗಿದೆ ಎಂದು ಅವರು ತಿಳಿಸಿದ್ದಾರೆ.

ತನ್ನ ಮೇಲೆ ಅತ್ಯಾಚಾರ ನಡೆಸಲು ಪ್ರಯತ್ನಿಸಿದ ಬಾಲಕನಿಂದ ಆ ಯುವತಿ ತಪ್ಪಿಸಿಕೊಂಡಿದ್ದು, ಅಲ್ಲಿಂದ ಓಡಿ ಹೋಗಿದ್ದಾಳೆ. ಇದಾದ ಕೂಡಲೆ ಘಟನೆ ನಡೆದ ಸ್ಥಳದಿಂದ ಆ ಹುಡುಗ ಕೂಡ ಪರಾರಿಯಾಗಿದ್ದಾನೆ. ಆಕೆ ಈ ವಿಚಾರವನ್ನು ಬೇರೆ ಯಾರದಾದರೂ ಬಳಿ ಹೇಳಬಹುದು ಎಂಬ ಭೀತಿಯಿಂದ ಆತ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಆತ ಮನೆಗೆ ಹೋದಾಗ ಆತನ ಕೊಳಕಾದ ಬಟ್ಟೆ, ಮೈಮೇಲಿನ ಪರಚಿದ ಗಾಯ, ರಕ್ತ ಒಸರುತ್ತಿದ್ದ ತುಟಿಯನ್ನು ನೋಡಿ ಮನೆಯವರು ಏನಾಯಿತೆಂದು ಗಾಬರಿಯಾಗಿದ್ದಾನೆ. ಆಗ ನಾಯಿ ಅಟ್ಟಿಸಿಕೊಂಡು ಬಂದ ಕಾರಣ ಕೆಳಗೆ ಬಿದ್ದು ಗಾಯ ಮಾಡಿಕೊಂಡೆ ಎಂದು ಆತ ಸುಳ್ಳು ಹೇಳಿದ್ದಾನೆ.

ಆದರೆ, ಯುವತಿ ನೀಡಿದ ಮಾಹಿತಿ ಮೇರೆಗೆ ಆತನ ಮನೆಗೆ ಹೋದ ಪೊಲೀಸರು ವಿಚಾರಣೆ ನಡೆಸಿದಾಗ, 21 ವರ್ಷದ ಮಹಿಳೆಯ ಮೇಲೆ ಲೈಂಗಿಕ ದಾಳಿ ನಡೆಸಿದಾಗ ತನಗೆ ಗಾಯಗಳಾಗಿವೆ ಎಂದು ಒಪ್ಪಿಕೊಂಡಿದ್ದಾನೆ. ಅಲ್ಲದೆ, ತನ್ನಿಂದ ತಪ್ಪಿಸಿಕೊಂಡು ಓಡಿಹೋಗುತ್ತಿದ್ದ ಯುವತಿಯ ಮುಖಕ್ಕೆ ಕಲ್ಲಿನಿಂದ ಹೊಡೆದು ಆತ ಗಾಯಗೊಳಿಸಿದ್ದಾನೆ.

ಇದನ್ನೂ ಓದಿ: Rape Case: ಆಟವಾಡುತ್ತಿದ್ದ 6 ವರ್ಷದ ಮಗುವಿನ ಮೇಲೆ ಕಾಮುಕನಿಂದ ಅತ್ಯಾಚಾರ; ಬಾಲಕಿ ಸ್ಥಿತಿ ಗಂಭೀರ

Crime News: ಚಲಿಸುವ ರೈಲಿನಲ್ಲೇ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ; 4 ಕಾಮುಕರ ಬಂಧನ

Published On - 8:11 pm, Tue, 26 October 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ