AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಹತ್ತು ವರ್ಷಗಳ ಕಾಲ ಜೈಲಿನಲ್ಲಿದ್ದು ಹೊರಬಂದ ಮೇಲೆ ಮಾಡಿದ್ದು ಮತ್ತದೇ ಹೇಯ ಕೃತ್ಯ

ಮಧ್ಯಪ್ರದೇಶದ ವ್ಯಕ್ತಿಯೊಬ್ಬ ಅತ್ಯಾಚಾರ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸಿ ಜೈಲಿನಿಂದ ಹೊರಬಂದ ನಂತರ ಮತ್ತದೇ ಹೇಯ ಕೃತ್ಯವೆಸಗಿದ್ದಾನೆ. ಆರೋಪಿ ಸತ್ನಾದಲ್ಲಿ 5 ವರ್ಷದ ದಲಿತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಪೊಲೀಸರು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಸೇರಿದಂತೆ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಹತ್ತು ವರ್ಷಗಳ ಕಾಲ ಜೈಲಿನಲ್ಲಿದ್ದು ಹೊರಬಂದ ಮೇಲೆ ಮಾಡಿದ್ದು ಮತ್ತದೇ ಹೇಯ ಕೃತ್ಯ
ಬಾಲಕಿImage Credit source: India Today
ನಯನಾ ರಾಜೀವ್
|

Updated on: Aug 17, 2023 | 8:40 AM

Share

ಮಧ್ಯಪ್ರದೇಶದ ವ್ಯಕ್ತಿಯೊಬ್ಬ ಅತ್ಯಾಚಾರ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸಿ ಜೈಲಿನಿಂದ ಹೊರಬಂದ ನಂತರ ಮತ್ತದೇ ಹೇಯ ಕೃತ್ಯವೆಸಗಿದ್ದಾನೆ. ಆರೋಪಿ ಸತ್ನಾದಲ್ಲಿ 5 ವರ್ಷದ ದಲಿತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಪೊಲೀಸರು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಸೇರಿದಂತೆ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. 10 ವರ್ಷಗಳ ಕಾಲ ಜೈಲಿನಲ್ಲಿದ್ದರೂ ಆತನ ಮನಸ್ಥಿತಿ ಸ್ವಲ್ಪವೂ ಸುಧಾರಿಸಿರಲಿಲ್ಲ. ಒಂದೂವರೆ ವರ್ಷದ ಹಿಂದೆ ಜೈಲಿನಿಂದ ಹೊರಬಂದ ಆತ ಮತ್ತೊಬ್ಬ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ.

ಬುಧವಾರ ಸಂಜೆ 5 ಗಂಟೆ ಸುಮಾರಿಗೆ ಸಂತ್ರಸ್ತೆ ನಾಪತ್ತೆಯಾದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಇದರ ಬೆನ್ನಲ್ಲೇ ಅಜ್ಜಿ ಆಕೆಗಾಗಿ ಹುಡುಕಾಟ ಆರಂಭಿಸಿದ್ದರು. ಸ್ವಲ್ಪ ದೂರದಲ್ಲಿ ಬಾಲಕಿ ರಕ್ತಸಿಕ್ತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಆರೋಪಿ ರಾಕೇಶ್ ವರ್ಮಾ ಅಲಿಯಾಸ್ ರಕ್ಕು ಆಕೆಗೆ ಮಿಠಾಯಿ ತಿನ್ನಿಸುವ ನೆಪದಲ್ಲಿ ಆಮಿಷವೊಡ್ಡಿರುವುದು ತಿಳಿದುಬಂದಿದೆ. ಈ ಕೃತ್ಯವನ್ನು ಅಜ್ಜಿ ತಡೆಯಲು ಯತ್ನಿಸಿದ್ದು, ಆರೋಪಿಗಳು ತಕ್ಷಣ ಓಡಿ ಹೋಗಿ ಆಟೋದಲ್ಲಿ ಕುಳಿತು ಕೃಷ್ಣನಗರದ ಕಡೆಗೆ ಹೋಗಿದ್ದರು.

ಮತ್ತಷ್ಟು ಓದಿ: ಫೇಸ್​ಬುಕ್ ಸ್ನೇಹಿತನಿಂದ ಅತ್ಯಾಚಾರ ಯತ್ನ, ತಡೆಯಲು ಯತ್ನಿಸಿದಾಗ ಯುವತಿಯ ತಲೆ ಬುರುಡೆಯನ್ನೇ ಒಡೆದ ವ್ಯಕ್ತಿ

ಮಹಿಳೆ ಸಹಾಯಕ್ಕಾಗಿ ಕೂಗಿ ಸಾರ್ವಜನಿಕರ ಗಮನ ಸೆಳೆದ ನಂತರ ಸಿಟಿ ಕೊತ್ವಾಲ್ ಶಂಖಧರ್ ದ್ವಿವೇದಿ ಅವರ ತಂಡದೊಂದಿಗೆ ಸ್ಥಳಕ್ಕೆ ಆಗಮಿಸಿ ಬಾಲಕಿಗಾಗಿ ಹುಡುಕಾಟ ಆರಂಭಿಸಿದರು.

ಸುಮಾರು ಎರಡು ಗಂಟೆಗಳ ಕಾಲ ಹುಡುಕಾಟ ನಡೆಸಿದ ಬಳಿಕ ಬಾಲಕಿ ಪತ್ತೆಯಾಗಿದ್ದಾಳೆ. ಬಾಲಕಿಯ ಸ್ಥಿತಿ ಗಂಭೀರವಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಥಮ ಚಿಕಿತ್ಸೆ ನೀಡಿದ ಬಳಿಕ ರೇವಾದಲ್ಲಿರುವ ಸಂಜಯ್ ಗಾಂಧಿ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯಕೀಯ ವರದಿಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆದಿರುವುದನ್ನು ಪೊಲೀಸರು ಖಚಿತಪಡಿಸಿದ್ದಾರೆ.

ಆರೋಪಿಯು 2012ರಲ್ಲಿ ಕೊಲ್ಗ್ವಾನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಲ್ಕೂವರೆ ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಎಂದು ಪೊಲೀಸ್ ವರಿಷ್ಠಾಧಿಕಾರಿ ಮಹೇಂದ್ರ ಸಿಂಗ್ ಚೌಹಾಣ್ ತಿಳಿಸಿದ್ದಾರೆ.

ಆದರೆ ಜೈಲಿನಲ್ಲಿ ಉತ್ತಮ ನಡತೆಯ ಆಧಾರದ ಮೇಲೆ ಮೂರು ವರ್ಷಗಳ ಶಿಕ್ಷೆಯನ್ನು ಮನ್ನಾ ಮಾಡಿ 18 ತಿಂಗಳ ಹಿಂದೆ ಜೈಲಿನಿಂದ ಹೊರಬಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಬಿಡುಗಡೆಯಾದ ಒಂದೂವರೆ ವರ್ಷದ ಬಳಿಕ ಆರೋಪಿ ಮತ್ತೊಬ್ಬ ಅಪ್ರಾಪ್ತ ಬಾಲಕಿಯ ಮೇಲೂ ಅತ್ಯಾಚಾರವೆಸಗಿದ್ದಾನೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ