ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಹತ್ತು ವರ್ಷಗಳ ಕಾಲ ಜೈಲಿನಲ್ಲಿದ್ದು ಹೊರಬಂದ ಮೇಲೆ ಮಾಡಿದ್ದು ಮತ್ತದೇ ಹೇಯ ಕೃತ್ಯ

ಮಧ್ಯಪ್ರದೇಶದ ವ್ಯಕ್ತಿಯೊಬ್ಬ ಅತ್ಯಾಚಾರ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸಿ ಜೈಲಿನಿಂದ ಹೊರಬಂದ ನಂತರ ಮತ್ತದೇ ಹೇಯ ಕೃತ್ಯವೆಸಗಿದ್ದಾನೆ. ಆರೋಪಿ ಸತ್ನಾದಲ್ಲಿ 5 ವರ್ಷದ ದಲಿತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಪೊಲೀಸರು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಸೇರಿದಂತೆ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಹತ್ತು ವರ್ಷಗಳ ಕಾಲ ಜೈಲಿನಲ್ಲಿದ್ದು ಹೊರಬಂದ ಮೇಲೆ ಮಾಡಿದ್ದು ಮತ್ತದೇ ಹೇಯ ಕೃತ್ಯ
ಬಾಲಕಿ
Image Credit source: India Today

Updated on: Aug 17, 2023 | 8:40 AM

ಮಧ್ಯಪ್ರದೇಶದ ವ್ಯಕ್ತಿಯೊಬ್ಬ ಅತ್ಯಾಚಾರ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸಿ ಜೈಲಿನಿಂದ ಹೊರಬಂದ ನಂತರ ಮತ್ತದೇ ಹೇಯ ಕೃತ್ಯವೆಸಗಿದ್ದಾನೆ. ಆರೋಪಿ ಸತ್ನಾದಲ್ಲಿ 5 ವರ್ಷದ ದಲಿತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಪೊಲೀಸರು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಸೇರಿದಂತೆ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
10 ವರ್ಷಗಳ ಕಾಲ ಜೈಲಿನಲ್ಲಿದ್ದರೂ ಆತನ ಮನಸ್ಥಿತಿ ಸ್ವಲ್ಪವೂ ಸುಧಾರಿಸಿರಲಿಲ್ಲ. ಒಂದೂವರೆ ವರ್ಷದ ಹಿಂದೆ ಜೈಲಿನಿಂದ ಹೊರಬಂದ ಆತ ಮತ್ತೊಬ್ಬ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ.

ಬುಧವಾರ ಸಂಜೆ 5 ಗಂಟೆ ಸುಮಾರಿಗೆ ಸಂತ್ರಸ್ತೆ ನಾಪತ್ತೆಯಾದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಇದರ ಬೆನ್ನಲ್ಲೇ ಅಜ್ಜಿ ಆಕೆಗಾಗಿ ಹುಡುಕಾಟ ಆರಂಭಿಸಿದ್ದರು. ಸ್ವಲ್ಪ ದೂರದಲ್ಲಿ ಬಾಲಕಿ ರಕ್ತಸಿಕ್ತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಆರೋಪಿ ರಾಕೇಶ್ ವರ್ಮಾ ಅಲಿಯಾಸ್ ರಕ್ಕು ಆಕೆಗೆ ಮಿಠಾಯಿ ತಿನ್ನಿಸುವ ನೆಪದಲ್ಲಿ ಆಮಿಷವೊಡ್ಡಿರುವುದು ತಿಳಿದುಬಂದಿದೆ. ಈ ಕೃತ್ಯವನ್ನು ಅಜ್ಜಿ ತಡೆಯಲು ಯತ್ನಿಸಿದ್ದು, ಆರೋಪಿಗಳು ತಕ್ಷಣ ಓಡಿ ಹೋಗಿ ಆಟೋದಲ್ಲಿ ಕುಳಿತು ಕೃಷ್ಣನಗರದ ಕಡೆಗೆ ಹೋಗಿದ್ದರು.

ಮತ್ತಷ್ಟು ಓದಿ: ಫೇಸ್​ಬುಕ್ ಸ್ನೇಹಿತನಿಂದ ಅತ್ಯಾಚಾರ ಯತ್ನ, ತಡೆಯಲು ಯತ್ನಿಸಿದಾಗ ಯುವತಿಯ ತಲೆ ಬುರುಡೆಯನ್ನೇ ಒಡೆದ ವ್ಯಕ್ತಿ

ಮಹಿಳೆ ಸಹಾಯಕ್ಕಾಗಿ ಕೂಗಿ ಸಾರ್ವಜನಿಕರ ಗಮನ ಸೆಳೆದ ನಂತರ ಸಿಟಿ ಕೊತ್ವಾಲ್ ಶಂಖಧರ್ ದ್ವಿವೇದಿ ಅವರ ತಂಡದೊಂದಿಗೆ ಸ್ಥಳಕ್ಕೆ ಆಗಮಿಸಿ ಬಾಲಕಿಗಾಗಿ ಹುಡುಕಾಟ ಆರಂಭಿಸಿದರು.

ಸುಮಾರು ಎರಡು ಗಂಟೆಗಳ ಕಾಲ ಹುಡುಕಾಟ ನಡೆಸಿದ ಬಳಿಕ ಬಾಲಕಿ ಪತ್ತೆಯಾಗಿದ್ದಾಳೆ. ಬಾಲಕಿಯ ಸ್ಥಿತಿ ಗಂಭೀರವಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಥಮ ಚಿಕಿತ್ಸೆ ನೀಡಿದ ಬಳಿಕ ರೇವಾದಲ್ಲಿರುವ ಸಂಜಯ್ ಗಾಂಧಿ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ವೈದ್ಯಕೀಯ ವರದಿಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆದಿರುವುದನ್ನು ಪೊಲೀಸರು ಖಚಿತಪಡಿಸಿದ್ದಾರೆ.

ಆರೋಪಿಯು 2012ರಲ್ಲಿ ಕೊಲ್ಗ್ವಾನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಲ್ಕೂವರೆ ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಎಂದು ಪೊಲೀಸ್ ವರಿಷ್ಠಾಧಿಕಾರಿ ಮಹೇಂದ್ರ ಸಿಂಗ್ ಚೌಹಾಣ್ ತಿಳಿಸಿದ್ದಾರೆ.

ಆದರೆ ಜೈಲಿನಲ್ಲಿ ಉತ್ತಮ ನಡತೆಯ ಆಧಾರದ ಮೇಲೆ ಮೂರು ವರ್ಷಗಳ ಶಿಕ್ಷೆಯನ್ನು ಮನ್ನಾ ಮಾಡಿ 18 ತಿಂಗಳ ಹಿಂದೆ ಜೈಲಿನಿಂದ ಹೊರಬಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಬಿಡುಗಡೆಯಾದ ಒಂದೂವರೆ ವರ್ಷದ ಬಳಿಕ ಆರೋಪಿ ಮತ್ತೊಬ್ಬ ಅಪ್ರಾಪ್ತ ಬಾಲಕಿಯ ಮೇಲೂ ಅತ್ಯಾಚಾರವೆಸಗಿದ್ದಾನೆ.

 

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us