Crime News: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿ, ಆತ್ಮಹತ್ಯೆ ಮಾಡಿಕೊಂಡ 88 ವರ್ಷದ ವೃದ್ಧ

Shocking News: ಆ ವೃದ್ಧ ಬಾಲಕಿಗೆ ಟೋಪಿ ಕೊಡಿಸುವುದಾಗಿ ನಂಬಿಸಿ, ಆಕೆಯನ್ನು ಕರೆದುಕೊಂಡು ಹೋಗಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದಾನೆ.

Crime News: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿ, ಆತ್ಮಹತ್ಯೆ ಮಾಡಿಕೊಂಡ 88 ವರ್ಷದ ವೃದ್ಧ
ಸಾಂಕೇತಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Mar 18, 2022 | 7:05 PM

ಗುರುಗ್ರಾಮ: ‘ಕಾಮಕ್ಕೆ ಕಣ್ಣಿಲ್ಲ’ ಎಂಬ ಮಾತೊಂದಿದೆ. ಚಿಕ್ಕ ಮಕ್ಕಳನ್ನೂ ಬಿಡದೆ ಅದೆಷ್ಟೋ ಅತ್ಯಾಚಾರ ಪ್ರಕರಣಗಳು (Rape Case) ನಡೆಯುತ್ತಲೇ ಇದೆ. ಗುರುಗ್ರಾಮದ (Gurugram) ಹಳ್ಳಿಯೊಂದರಲ್ಲಿ ತನ್ನ ಪಕ್ಕದ ಮನೆಯ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ 88 ವರ್ಷದ ವ್ಯಕ್ತಿಯೊಬ್ಬರು ತಾವೂ ಆತ್ಮಹತ್ಯೆ (Suicide) ಮಾಡಿಕೊಂಡು ಸಾವನ್ನಪ್ಪಿದ್ದಾರೆ. ಚಿಕ್ಕ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದ ಆರೋಪಕ್ಕೆ ಗುರಿಯಾಗಿದ್ದ 88 ವರ್ಷದ ವೃದ್ಧ ತಾನು ಸಿಕ್ಕಿ ಬೀಳುವ ಭೀತಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆ ವೃದ್ಧನ ಶವದ ಬಳಿ ಯಾವುದೇ ಸೂಸೈಡ್ ನೋಟ್ ಪತ್ತೆಯಾಗಿಲ್ಲ. ಅವರ ಕುಟುಂಬಸ್ಥರು ಕೂಡ ಈ ಸಾವಿಗೆ ಯಾರನ್ನೂ ದೂಷಿಸಲಿಲ್ಲ. ಪೊಲೀಸರ ಪ್ರಕಾರ, ಮೃತ ವೃದ್ಧ ಲಾಲ್ ಸಿಂಗ್ ವಿರುದ್ಧ ಬುಧವಾರ ಪೋಕ್ಸೊ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಲಾಗಿತ್ತು. ತಾನು ಜೈಲಿಗೆ ಹೋದರೆ ಮರ್ಯಾದೆ ಹೋಗುತ್ತದೆ ಎಂಬ ಭೀತಿಯಲ್ಲಿ ಲಾಲ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಯಿದೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಲಾಲ್​ ಸಿಂಗ್ ಶವ ಅವರ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಅತ್ಯಾಚಾರಕ್ಕೊಳಗಾದ ಬಾಲಕಿಯ ತಾಯಿ ನೀಡಿದ ದೂರಿನ ಪ್ರಕಾರ, ಆ ವೃದ್ಧ ಬಾಲಕಿಗೆ ಟೋಪಿ ಕೊಡಿಸುವುದಾಗಿ ನಂಬಿಸಿ, ಆಕೆಯನ್ನು ಕರೆದುಕೊಂಡು ಹೋಗಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಕಳೆದ ಹಲವು ದಿನಗಳಿಂದ ಆ ವೃದ್ಧ ತನಗೆ ಕಿರುಕುಳ ನೀಡುತ್ತಿದ್ದ ಎಂದು ನನ್ನ ಮಗಳು ಹೇಳಿದಾಗ ನನಗೆ ಆಘಾತವಾಯಿತು. ಈ ಬಗ್ಗೆ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಎಂದು ಬಾಲಕಿಯ ತಾಯಿ ಹೇಳಿದ್ದಾಳೆ. ಆತ ಅತ್ಯಾಚಾರ ನಡೆಸಿರುವ ಬಗ್ಗೆ ನನ್ನ ಮಗಳು ಹೇಳಿದಾಗ ನಾನು ಪೊಲೀಸರ ಬಳಿ ಹೋಗಿ ದೂರು ನೀಡಿದೆ ಎಂದು ಬಾಲಕಿಯ ತಾಯಿ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಅಲ್ಲಿ ಯಾವುದೇ ಸೂಸೈಡ್ ನೋಟ್ ಪತ್ತೆಯಾಗದ ಕಾರಣ ಆತ್ಮಹತ್ಯೆಯ ಹಿಂದಿನ ನಿಜವಾದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ ಎಂದು ಎಸ್‌ಎಚ್‌ಒ ವಿನೀತ್ ಕುಮಾರ್ ಹೇಳಿದ್ದಾರೆ. ಅವರ ಮೇಲೆ ಅತ್ಯಾಚಾರದ ಪ್ರಕರಣ ದಾಖಲಾಗಿದ್ದರಿಂದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಊಹಿಸಲಾಗಿದೆ.

ಇದನ್ನೂ ಓದಿ: Crime News: ಅತ್ಯಾಚಾರಿಯನ್ನು ಮರಕ್ಕೆ ಕಟ್ಟಿ, ಹೊಡೆದು ಕೊಂದ ಮಹಿಳೆಯರು!

Gang Rape: ಸಾಮೂಹಿಕ ಅತ್ಯಾಚಾರವೆಸಗಿ, ಕೊಲೆ; 14 ವರ್ಷದ ಬಾಲಕಿಯ ಶವ ಗೋಣಿಚೀಲದಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್