Rape: ಮಕ್ಕಳ ಜೊತೆ ಮಲಗಿದ್ದ ಮಹಿಳೆಯ ಮುಖವನ್ನು ಇಟ್ಟಿಗೆಯಿಂದ ಜಜ್ಜಿ, ಅತ್ಯಾಚಾರ!

ಮಹಿಳೆಯ ಪತಿ ರಾತ್ರಿ ವೇಳೆ ಹೊಲಕ್ಕೆ ಪಂಪ್​ಸೆಟ್​ನಿಂದ ನೀರು ಬಿಡಲು ಮನೆಯಿಂದ ಹೊರಗೆ ಹೋಗಿದ್ದರು. ಈ ವೇಳೆ ಮನೆಯೊಳಗೆ ನುಗ್ಗಿದ ದುಷ್ಕರ್ಮಿಗಳು ಮಹಿಳೆಯನ್ನು ಕೊಂದು, ಆಕೆಯ ಶವದ ಮೇಲೆ ಅತ್ಯಾಚಾರ ನಡೆಸಿದ್ದಾರೆ.

Rape: ಮಕ್ಕಳ ಜೊತೆ ಮಲಗಿದ್ದ ಮಹಿಳೆಯ ಮುಖವನ್ನು ಇಟ್ಟಿಗೆಯಿಂದ ಜಜ್ಜಿ, ಅತ್ಯಾಚಾರ!
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Mar 14, 2022 | 6:14 PM

ಅಮ್ರೋಹಾ: ಉತ್ತರ ಪ್ರದೇಶದಲ್ಲಿ ಆಗಾಗ ಅತ್ಯಾಚಾರದ (Rape Cases) ಪ್ರಕರಣಗಳು ನಡೆಯುತ್ತಲೇ ಇರುತ್ತವೆ. ಹೆಣ್ಣುಮಕ್ಕಳ ಪಾಲಿಗೆ ಉತ್ತರ ಪ್ರದೇಶ (Uttar Pradesh) ಸುರಕ್ಷಿತ ಸ್ಥಳವಲ್ಲ ಎಂಬ ಮಾತೂ ಇದೆ. ಇದೀಗ ಉತ್ತರ ಪ್ರದೇಶದ ಅಮ್ರೋಹಾದಲ್ಲಿ ಮತ್ತೊಂದು ಭೀಕರ ಘಟನೆ ನಡೆದಿದ್ದು, ತನ್ನ ಮಕ್ಕಳ ಒತೆ ಮಲಗಿದ್ದ 25 ವರ್ಷದ ಮಹಿಳೆಯ ಮುಖವನ್ನು ಇಟ್ಟಿಗೆಯಿಂದ ಜಜ್ಜಿ ಹತ್ಯೆ ಮಾಡಿ ಅಪರಿಚಿತರು ಆಕೆಯ ಶವದ ಮೇಲೆ ಅತ್ಯಾಚಾರವೆಸಗಿದ್ದಾರೆ. ಆ ಮಹಿಳೆಯ ಜೊತೆ ಮಲಗಿದ್ದ ಅಪ್ರಾಪ್ತ ಮಕ್ಕಳಿಗೂ ಈ ಘಟನೆಯ ಬಳಿಕ ಸಣ್ಣಪುಟ್ಟ ಗಾಯಗಳಾಗಿವೆ.

ಭಾನುವಾರ ರಾತ್ರಿ ಅಮ್ರೋಹಾದ ಹಳ್ಳಿಯಲ್ಲಿ ಈ ಘಟನೆ ಸಂಭವಿಸಿದ್ದು, ಆ ಮಹಿಳೆಯ ಪತಿ ರಾತ್ರಿ ವೇಳೆ ಹೊಲಕ್ಕೆ ಪಂಪ್​ಸೆಟ್​ನಿಂದ ನೀರು ಬಿಡಲು ಮನೆಯಿಂದ ಹೊರಗೆ ಹೋಗಿದ್ದರು. ಈ ವೇಳೆ ಮನೆಯೊಳಗೆ ನುಗ್ಗಿದ ದುಷ್ಕರ್ಮಿಗಳು ಮಹಿಳೆಯನ್ನು ಕೊಂದು, ಆಕೆಯ ಶವದ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಆ ಮಹಿಳೆಯ ಗಂಡ ಹೊಲದಿಂದ ವಾಪಾಸ್ ಮನೆಗೆ ಬಂದಾಗ ತನ್ನ ಹೆಂಡತಿಯ ಶವ ಬೆತ್ತಲೆಯಾಗಿ ಹಾಸಿಗೆಯ ಮೇಲೆ ಬಿದ್ದಿರುವುದನ್ನು ನೋಡಿ ಆಘಾತಕ್ಕೊಳಗಾಗಿದ್ದಾರೆ. ಬಳಿಕ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

ಮೃತ ಮಹಿಳೆಯ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಈ ರೀತಿ ಅಮಾನವೀಯವಾಗಿ ಹತ್ಯೆ ಮಾಡಿದವರು ಯಾರೆಂಬ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ. ಆ ಮಹಿಳೆಗೆ ಪರಿಚಯದವರೇ ಆಕೆಯ ಗಂಡ ಮನೆಯಲ್ಲಿಲ್ಲದ ಸಮಯ ನೋಡಿಕೊಂಡು ಈ ಕೃತ್ಯ ಎಸಗಿರುವ ಸಾಧ್ಯತೆಯಿದೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಆ ಮಹಿಳೆಯ ಶವದ ಮೇಲೆ ಅತ್ಯಾಚಾರ ನಡೆದಿದೆ ಎಂದು ಆಕೆಯ ಗಂಡ ಹೇಳಿಕೆ ನೀಡಿದ್ದಾರೆ. ಆದರೆ, ನಿಜಕ್ಕೂ ಅತ್ಯಾಚಾರ ನಡೆದಿದೆಯೇ ಎಂಬುದು ಮರಣೋತ್ತರ ಪರೀಕ್ಷೆಯ ವರದಿ ಸಿಕ್ಕ ನಂತರವೇ ಖಚಿತವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಈ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸುತ್ತಿದ್ದೇವೆ ಎಂದು ಎಸ್‌ಎಚ್‌ಒ ಕೃಪಾಲ್ ಸಿಂಗ್ ಹೇಳಿದ್ದಾರೆ. ಭಾನುವಾರ ರಾತ್ರಿ ಮೃತ ಮಹಿಳೆಯ ಪತಿ ಧೀರ್ ಸಿಂಗ್ ಹೊಲಕ್ಕೆ ನೀರು ಹಾಯಿಸಲು ಮನೆಯಿಂದ ಹೊರಗೆ ಹೋಗಿದ್ದರು. ಅವರು ಹಿಂತಿರುಗಿದಾಗ ಎಷ್ಟು ಬಾಗಿಲು ಬಡಿದರೂ ಅವರ ಹೆಂಡತಿ ಬಾಗಿಲು ತೆರೆಯಲಿಲ್ಲ. ಹೀಗಾಗಿ, ಮನೆಯ ಟೆರೇಸ್ ಮೂಲಕ ಒಳಗೆ ಹೋಗಿ ನೋಡಿದಾಗ ಆಕೆ ನಗ್ನವಾಗಿ ಬಿದ್ದಿದ್ದಳು. ಬೆಡ್ ಮೇಲೆ ತನ್ನ ಹೆಂಡತಿಯ ಬೆತ್ತಲೆ ದೇಹವು ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಕಂಡ ಅವರು ಗಾಬರಿಯಿಂದ ಅಲ್ಲೇ ಕುಸಿದು ಬಿದ್ದಿದ್ದಾರೆ. ನಂತರ ಅಕ್ಕಪಕ್ಕದವರಿಗೆ ವಿಷಯ ತಿಳಿಸಿ, ಪೊಲೀಸರನ್ನು ಕರೆಸಿದ್ದಾರೆ.

ಇದನ್ನೂ ಓದಿ: Rape Case: ಆಟವಾಡುತ್ತಿದ್ದ 6 ವರ್ಷದ ಮಗುವಿನ ಮೇಲೆ ಕಾಮುಕನಿಂದ ಅತ್ಯಾಚಾರ; ಬಾಲಕಿ ಸ್ಥಿತಿ ಗಂಭೀರ

Gang Rape: ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ರೈಲ್ವೆ ಹಳಿ ಮೇಲೆ ಬಿಸಾಡಿದ ಕಾಮುಕರು

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ