AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಅತ್ಯಾಚಾರ: ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಹಂಚಿಕೊಂಡ ಆರೋಪಿಗಳು

ಮಾನಸಿಕ ಅಸ್ವಸ್ಥ ಬಾಲಕಿಯ ಮೇಲೆ ಮೂವರು ಅಪ್ರಾಪ್ತ ಯುವಕರು ಅತ್ಯಾಚಾರ ಮಾಡಿ, ಚಿತ್ರೀಕರಿಸಿರುವ ಘಟನೆ ಮುಂಬೈನ ಘಾಟ್‌ಕೋಪರ್ ಪ್ರದೇಶದಲ್ಲಿ ನಡೆದಿದೆ ಎಂದು ಹೇಳಲಾಗಿದೆ.

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಅತ್ಯಾಚಾರ: ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಹಂಚಿಕೊಂಡ ಆರೋಪಿಗಳು
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Jan 21, 2023 | 5:22 PM

Share

ಮುಂಬೈ: ಮಾನಸಿಕ ಅಸ್ವಸ್ಥ ಬಾಲಕಿಯ ಮೇಲೆ ಮೂವರು ಅಪ್ರಾಪ್ತ ಯುವಕರು ಅತ್ಯಾಚಾರ ಮಾಡಿ, ಚಿತ್ರೀಕರಿಸಿರುವ ಘಟನೆ ಮುಂಬೈನ ಘಾಟ್‌ಕೋಪರ್ ಪ್ರದೇಶದಲ್ಲಿ ನಡೆದಿದೆ ಎಂದು ಹೇಳಲಾಗಿದೆ. ಸಂತ್ರಸ್ತೆ ಶೌಚಾಲಯಕ್ಕೆ ಹೋದಾಗ ಆರೋಪಿಗಳು ಬಲವಂತವಾಗಿ ಒಳಗೆ ಕರೆದೊಯ್ದ ಘಟನೆ ನಡೆದಿದೆ. ಆರೋಪಿಗಳಲ್ಲಿ ಒಬ್ಬರು ಆಕೆಯ ಮೇಲೆ ಅತ್ಯಾಚಾರವೆಸಗಿದರೆ ಮತ್ತೊಬ್ಬರು ತಮ್ಮ ಮೊಬೈಲ್‌ನಲ್ಲಿ ವಿಡಿಯೋ ಮಾಡಿ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡಿದ್ದಾರೆ.

ಆನ್‌ಲೈನ್‌ನಲ್ಲಿ ವೈರಲ್ ವಿಡಿಯೋ ನೋಡಿದ ಸಂತ್ರಸ್ತೆಯ ಸಹೋದರ ಘಟನೆಯ ಬಗ್ಗೆ ತನ್ನ ಕುಟುಂಬ ಸದಸ್ಯರಿಗೆ ತಿಳಿಸಿದ್ದಾರೆ. ಘಾಟ್‌ಕೋಪರ್ ಪೊಲೀಸರು ಐಪಿಸಿಯ ಸೆಕ್ಷನ್ 376,376 (ಜೆ), 323,500, 34 ಮತ್ತು ಪೋಕ್ಸೋ ಸೆಕ್ಷನ್ 4 ಮತ್ತು ಐಟಿಯ ಸೆಕ್ಷನ್ 66 (ಇ) 67 (ಬಿ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ  ಓದಿ:Crime News ಅಪರಾಧ ಸುದ್ದಿ ರೌಂಡಪ್: ರೈಲಿಗೆ ತಲೆ ಕೊಟ್ಟ ಪ್ರೇಮಿಗಳು, ಡ್ರಗ್ಸ್ ಪೆಡ್ಲರ್ ಅರೆಸ್ಟ್

ಅಪ್ರಾಪ್ತರಾಗಿರುವ ಮೂವರು ಆರೋಪಿಗಳನ್ನು ಡೋಂಗ್ರಿಯಲ್ಲಿರುವ ಮಕ್ಕಳ ತಿದ್ದುಪಡಿ ಸೆಲ್​ಗೆ ಕಳುಹಿಸಲಾಗಿದೆ. ಹೆಚ್ಚಿನ ತನಿಖೆಗಳು ನಡೆಯುತ್ತಿವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:22 pm, Sat, 21 January 23

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More