ಸಾಮೂಹಿಕ ಅತ್ಯಾಚಾರಕ್ಕೊಳಗಾದ ಮಹಿಳೆಯ ಕೂದಲು ಕತ್ತರಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ; ನಾಲ್ವರ ಬಂಧನ

| Updated By: ಸುಷ್ಮಾ ಚಕ್ರೆ

Updated on: Jan 27, 2022 | 1:18 PM

ಕಸ್ತೂರಬಾ ನಗರದಲ್ಲಿ ಅಕ್ರಮ ಮದ್ಯ ಮಾರಾಟಗಾರರು 20 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಬಳಿಕ ಆಕೆಯ ತಲೆಗೆ ಹೊಡೆದು, ಆಕೆಯ ಮುಖಕ್ಕೆ ಕಪ್ಪು ಬಣ್ಣ ಬಳಿದು ಚಪ್ಪಲಿ ಹಾರ ಹಾಕಿ ರಸ್ತೆಯಲ್ಲಿ ಮೆರವಣಿಗೆ ಮಾಡಲಾಯಿತು.

ಸಾಮೂಹಿಕ ಅತ್ಯಾಚಾರಕ್ಕೊಳಗಾದ ಮಹಿಳೆಯ ಕೂದಲು ಕತ್ತರಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ; ನಾಲ್ವರ ಬಂಧನ
ಮುಖಕ್ಕೆ ಮಸಿ ಬಳಿದು ಮಹಿಳೆಯ ಮೆರವಣಿಗೆ
Follow us on

ನವದೆಹಲಿ: ಅತ್ಯಾಚಾರ ಸಂತ್ರಸ್ತೆಯನ್ನು ಅಪಹರಿಸಿ, ಆಕೆಯ ಕೂದಲನ್ನು ಕತ್ತರಿಸಿ, ಮುಖಕ್ಕೆ ಕಪ್ಪು ಬಣ್ಣ ಬಳಿದು, ಆಕೆಗೆ ಚಪ್ಪಲಿಯ ಹಾರ ಹಾಕಿ ಹರ್ಷೋದ್ಘಾರದಿಂದ ಮೆರವಣಿಗೆ ನಡೆಸಿದ ಆಘಾತಕಾರಿ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ಮಹಿಳಾ ಸಮಿತಿಯು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಆ ಅತ್ಯಾಚಾರ (Rape) ಸಂತ್ರಸ್ತೆಯ ಮೇಲೆ ಹಲ್ಲೆ ನಡೆಸಿದ ನಾಲ್ಕು ಆರೋಪಿಗಳನ್ನು ಬಂಧಿಸಲಾಗಿದೆ.

ಪೂರ್ವ ದೆಹಲಿಯ ಶಹದಾರಾದಲ್ಲಿ ನಡೆದ ಈ ಘಟನೆಯನ್ನು “ವೈಯಕ್ತಿಕ ದ್ವೇಷ”ದಿಂದ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ತನಿಖೆಯನ್ನು ಪ್ರಾರಂಭಿಸಲಾಗಿದೆ. “ವೈಯಕ್ತಿಕ ದ್ವೇಷದಿಂದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ದುರದೃಷ್ಟಕರ ಘಟನೆ ಇಂದು ಶಹದಾರ ಜಿಲ್ಲೆಯಲ್ಲಿ ನಡೆದಿದೆ. ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ ಮತ್ತು ತನಿಖೆ ನಡೆಸುತ್ತಿದ್ದಾರೆ. ಸಂತ್ರಸ್ತೆಗೆ ಸಾಧ್ಯವಿರುವ ಎಲ್ಲ ಸಹಾಯ ಮತ್ತು ಸಮಾಲೋಚನೆಯನ್ನು ಒದಗಿಸಲಾಗುತ್ತಿದೆ” ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಆದರೆ, ಸಂತ್ರಸ್ತ ಮಹಿಳೆಯನ್ನು ಭೇಟಿಯಾದ ಡಿಸಿಡಬ್ಲ್ಯು ಅಧ್ಯಕ್ಷೆ ಸ್ವಾತಿ ಮಲಿವಾಲ್ 20 ವರ್ಷದ ಮಹಿಳೆಯ ಮೇಲೆ ಅಕ್ರಮ ಮದ್ಯ ಮಾರಾಟಗಾರರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

ಕಸ್ತೂರಬಾ ನಗರದಲ್ಲಿ ಅಕ್ರಮ ಮದ್ಯ ಮಾರಾಟಗಾರರು 20 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಬಳಿಕ ಆಕೆಯ ತಲೆಗೆ ಹೊಡೆದು, ಆಕೆಯ ಮುಖಕ್ಕೆ ಕಪ್ಪು ಬಣ್ಣ ಬಳಿದು ಚಪ್ಪಲಿ ಹಾರ ಹಾಕಿ ರಸ್ತೆಯಲ್ಲಿ ಮೆರವಣಿಗೆ ಮಾಡಲಾಯಿತು. ಈ ಬಗ್ಗೆ ನಾನು ದೆಹಲಿ ಪೊಲೀಸರಿಗೆ ನೋಟಿಸ್ ಜಾರಿ ಮಾಡುತ್ತಿದ್ದೇನೆ. ಆರೋಪಿಗಳಾದ ಪುರುಷರು ಮತ್ತು ಮಹಿಳೆಯರನ್ನು ಬಂಧಿಸಬೇಕು, ಹುಡುಗಿ ಮತ್ತು ಅವರ ಕುಟುಂಬಕ್ಕೆ ಭದ್ರತೆ ನೀಡಬೇಕು ”ಎಂಎಸ್ ಮಲಿವಾಲ್ ಒತ್ತಾಯಿಸಿದ್ದಾರೆ.

ಈ ಹಿಂದೆ ಆತ್ಮಹತ್ಯೆ ಮಾಡಿಕೊಂಡ ಬಾಲಕನ ಕುಟುಂಬದವರು ಈ ಹಲ್ಲೆ ನಡೆಸಿದ್ದಾರೆ. ಮಹಿಳೆಯನ್ನು ಹಿಂಬಾಲಿಸುತ್ತಿದ್ದ ಬಾಲಕನ ಸಾವಿಗೆ ಮಹಿಳೆಯೇ ಕಾರಣ ಎಂದು ಬಾಲಕನ ಮನೆಯವರು ಆರೋಪಿಸಿದ್ದರು. ಸಂತ್ರಸ್ತೆಯ ಸಹೋದರಿಯ ಪ್ರಕಾರ, ವಿವಾಹಿತೆಯಾಗಿರುವ ಮತ್ತು ಮಗುವನ್ನು ಹೊಂದಿರುವ ಮಹಿಳೆ – ನವೆಂಬರ್ 12ರಂದು ಹುಡುಗನ ಸಾವಿನ ನಂತರ ಬಾಡಿಗೆ ಮನೆಗೆ ಶಿಫ್ಟ್​ ಆಗಿದ್ದರು.

ಇದನ್ನೂ ಓದಿ: Gang Rape: ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಗುಪ್ತಾಂಗಕ್ಕೆ ಚೂಪಾದ ವಸ್ತು ಹಾಕಿದ ಕಾಮುಕರು!

Rape: ದತ್ತು ಪಡೆದಿದ್ದ ಬಾಲಕಿಯ ಮೇಲೆ ಅತ್ಯಾಚಾರ; ಪದ್ಮ ಪ್ರಶಸ್ತಿ ಪುರಸ್ಕೃತ ವ್ಯಕ್ತಿ ವಿರುದ್ಧ ಕೇಸ್ ದಾಖಲು