Rape: ಗಂಡನನ್ನು ಮರಕ್ಕೆ ಕಟ್ಟಿಹಾಕಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ಅಪ್ರಾಪ್ತರು ಸೇರಿ 10 ಮಂದಿ ಬಂಧನ

Crime News: ಆರೋಪಿಗಳು ಗಂಡ-ಹೆಂಡತಿಯನ್ನು ತೋಟಕ್ಕೆ ಎಳೆದೊಯ್ದು, ಅಲ್ಲಿ ಮಹಿಳೆಯ ಪತಿಯನ್ನು ಮರಕ್ಕೆ ಕಟ್ಟಿ ಆತನ ಎದುರಲ್ಲೇ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.

Rape: ಗಂಡನನ್ನು ಮರಕ್ಕೆ ಕಟ್ಟಿಹಾಕಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ಅಪ್ರಾಪ್ತರು ಸೇರಿ 10 ಮಂದಿ ಬಂಧನ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Mar 26, 2022 | 5:34 PM

ಮುಜಾಫರ್‌ನಗರ: ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲಿನ ಅಪರಾಧಗಳಿಗೆ ಕೊನೆಯೇ ಇಲ್ಲದಂತಾಗಿದೆ. ಇತ್ತೀಚಿನ ಘಟನೆಯೊಂದರಲ್ಲಿ ಮುಜಗ್ಗರ್‌ನಗರ ಜಿಲ್ಲೆಯಲ್ಲಿ ಮಹಿಳೆಯ ಗಂಡನನ್ನು ಹಿಡಿದು, ಆತನನ್ನು ಮರಕ್ಕೆ ಕಟ್ಟಿಹಾಕಿದ ಕಾಮುಕರು ಆತನ ಎದುರೇ 21 ವರ್ಷದ ಆತನ ಹೆಂಡತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ (Gang Rape). ಮಂಗಳವಾರ ರಾತ್ರಿ ನೈ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಭೀಕರ ಅಪರಾಧ ನಡೆದಿದೆ. ವ್ಯಕ್ತಿ ತನ್ನ ಪತ್ನಿ ಜರೀನಾ (ಹೆಸರು ಬದಲಾಯಿಸಲಾಗಿದೆ)ಳನ್ನು ಆಕೆಯ ತಾಯಿಯ ಮನೆಯಿಂದ ಕರೆದುಕೊಂಡು ಮನೆಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.

ಆರೋಪಿಗಳು ಮಹಿಳೆಯನ್ನು ಮಾವಿನ ತೋಟಕ್ಕೆ ಎಳೆದೊಯ್ದು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಹಿಂದೂಸ್ತಾನ್ ಟೈಮ್ಸ್​ ವರದಿಯ ಪ್ರಕಾರ, ಇಬ್ಬರು ಅಪ್ರಾಪ್ತರು ಸೇರಿದಂತೆ 10 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. 10 ಮಂದಿ ಆರೋಪಿಗಳು ಕುಡಿದು ಬಂದು ಮದುವೆ ಮುಗಿಸಿಕೊಂಡು ಬರುತ್ತಿದ್ದರು ಎನ್ನಲಾಗಿದೆ.

ಪೊಲೀಸರ ಪ್ರಕಾರ, ನಾಲ್ವರು ಪುರುಷರು ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಉಳಿದ ಆರೋಪಿಗಳು ಆಕೆಯ ಗಂಡನ ಬಳಿ ನಿಂತಿದ್ದರು. ಮಹಿಳೆಯ ತಾಯಿಯ ಮನೆ ನೈ ಮಂಡಿ ಕೊಟ್ವಾಲಿ ಪ್ರದೇಶದ ಭೋಪಾ ರಸ್ತೆಯ ಬಳಿ ಇದೆ. ಮಂಗಳವಾರ ರಾತ್ರಿ ಆಕೆ ತನ್ನ ಗಂಡನ ಮನೆಗೆ ಹಿಂದಿರುಗುತ್ತಿದ್ದಾಗ ಬೈಕ್‌ನಲ್ಲಿ ಬಂದ ಕೆಲವರು ಆ ದಂಪತಿಯನ್ನು ಹಿಂಬಾಲಿಸಲು ಪ್ರಾರಂಭಿಸಿದರು.

ಆಗ ಆ ಆರೋಪಿಗಳು ಆ ಗಂಡ-ಹೆಂಡತಿಯನ್ನು ತೋಟಕ್ಕೆ ಎಳೆದೊಯ್ದು, ಅಲ್ಲಿ ಮಹಿಳೆಯ ಪತಿಯನ್ನು ಮರಕ್ಕೆ ಕಟ್ಟಿ ಆತನ ಎದುರಲ್ಲೇ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಇನ್ನು ಆರು ಮಂದಿ ಆರೋಪಿಗಳೂ ಅದೇ ಸ್ಥಳದಲ್ಲಿ ಹಾಜರಿದ್ದರು.

ಇದಾದ ಬಳಿಕ ಯಾರಿಗೂ ಈ ವಿಷಯವನ್ನು ಹೇಳಬಾರದೆಂದು ಆ ದಂಪತಿಗೆ ಬೆದರಿಕೆ ಹಾಕಿ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ನಂತರ ಆ ಮಹಿಳೆ ತನ್ನ ಪತಿಯನ್ನು ಬಿಡಿಸಿಕೊಂಡು ತಮ್ಮ ಗ್ರಾಮಕ್ಕೆ ಮರಳಿದ್ದಾಳೆ. ಮಹಿಳೆಯ ಗಂಡ ಆರೋಪಿಗಳ ಬಳಿ ಬೇಡಿಕೊಂಡರೂ ಅವರು ಕೇಳದೆ ಆತನ ಕಣ್ಣೆದುರಲ್ಲೇ ಆತನ ಹೆಂಡತಿ ಮೇಲೆ ಅತ್ಯಾಚಾರ ನಡೆಸಿದ್ದಾರೆ.

ಈ ಭೀಕರ ಕೃತ್ಯದ ಬಗ್ಗೆ ಬುಧವಾರ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಿದ್ದಾರೆ. ಆರೋಪಿಗಳಿಗೆ ಸಂಬಂಧಿಸಿದಂತೆ ಆರೋಪಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Rape: ರೈಲಿಗಾಗಿ ಕಾಯುತ್ತಿರುವಾಗ ರೈಲ್ವೆ ಸ್ಟೇಷನ್​ನ ಶೌಚಾಲಯದಲ್ಲಿ ಯುವತಿ ಮೇಲೆ ಅತ್ಯಾಚಾರ!

Rape: ಮಕ್ಕಳ ಜೊತೆ ಮಲಗಿದ್ದ ಮಹಿಳೆಯ ಮುಖವನ್ನು ಇಟ್ಟಿಗೆಯಿಂದ ಜಜ್ಜಿ, ಅತ್ಯಾಚಾರ!

Published On - 5:33 pm, Sat, 26 March 22

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್