AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rape: ರೈಲಿಗಾಗಿ ಕಾಯುತ್ತಿರುವಾಗ ರೈಲ್ವೆ ಸ್ಟೇಷನ್​ನ ಶೌಚಾಲಯದಲ್ಲಿ ಯುವತಿ ಮೇಲೆ ಅತ್ಯಾಚಾರ!

Crime News: ರೈಲ್ವೆ ಸ್ಟೇಷನ್​ನ ಸಾರ್ವಜನಿಕ ಶೌಚಾಲಯದೊಳಗೆ ಯುವತಿಯನ್ನು ಎಳೆದುಕೊಂಡು ಹೋಗಿ, ಆಕೆಯ ಮೇಲೆ ಅತ್ಯಾಚಾರ ನಡೆಸಲಾಗಿದೆ.

Rape: ರೈಲಿಗಾಗಿ ಕಾಯುತ್ತಿರುವಾಗ ರೈಲ್ವೆ ಸ್ಟೇಷನ್​ನ ಶೌಚಾಲಯದಲ್ಲಿ ಯುವತಿ ಮೇಲೆ ಅತ್ಯಾಚಾರ!
ಅತ್ಯಾಚಾರ
TV9 Web
| Edited By: |

Updated on:Mar 21, 2022 | 7:52 PM

Share

ಪ್ರತಾಪ್​ಗಢ: ಉತ್ತರ ಪ್ರದೇಶದಲ್ಲಿ ಹೆಚ್ಚೂ ಕಡಿಮೆ ದಿನವೂ ಒಂದೊಂದು ಅತ್ಯಾಚಾರ ಪ್ರಕರಣಗಳು (Rape Cases) ಬೆಳಕಿಗೆ ಬರುತ್ತಲೇ ಇರುತ್ತವೆ. ಅಪರಾಧ ಪ್ರಕರಣಗಳು ಗಣನೀಯವಾಗಿ ಏರಿಕೆಯಾಗುತ್ತಿರುವ ಉತ್ತರ ಪ್ರದೇಶದಲ್ಲಿ ಮತ್ತೊಂದು ಆಘಾತಕಾರಿ ಘಟನೆ ನಡೆದಿದ್ದು, ಪ್ರತಾಪ್‌ಗಢ್ ರೈಲು ನಿಲ್ದಾಣದ ಪಾರ್ಕಿಂಗ್ ಸ್ಟ್ಯಾಂಡ್ ಬಳಿ ಇರುವ ಸಾರ್ವಜನಿಕ ಶೌಚಾಲಯದೊಳಗೆ 20 ವರ್ಷದ ಯುವತಿ ಮೇಲೆ ಅತ್ಯಾಚಾರವೆಸಗಲಾಗಿದೆ. ಮಾರ್ಚ್ 19ರಂದು ಈ ಘಟನೆ ನಡೆದಿದ್ದು, ಈ ಬಗ್ಗೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ರೈಲ್ವೆ ಸ್ಟೇಷನ್​ನ ಸಾರ್ವಜನಿಕ ಶೌಚಾಲಯದೊಳಗೆ ಯುವತಿಯನ್ನು ಎಳೆದುಕೊಂಡು ಹೋಗಿ, ಆಕೆಯ ಮೇಲೆ ಅತ್ಯಾಚಾರ ನಡೆಸಲಾಗಿದೆ. ಈ ಘಟನೆ ಸಂಭವಿಸಿದಾಗ ಆ ಯುವತಿ ತನ್ನ ಪತಿಯೊಂದಿಗೆ ರೈಲು ಹತ್ತಲು ಕಾಯುತ್ತಿದ್ದರು ಎಂದು ಕೊತ್ವಾಲಿ ಪೊಲೀಸ್ ಠಾಣೆಯ ಅಧಿಕಾರಿ ಆರ್.ಎನ್. ರೈ ಹೇಳಿದ್ದಾರೆ.

ರೈಲ್ವೆ ಸ್ಟೇಷನ್​​ನಲ್ಲಿ ಯುವತಿಯ ಗಂಡ ಬೆಳಿಗ್ಗೆ ರೈಲಿಗಾಗಿ ಕಾಯುತ್ತಿರುವಾಗ ಆಕೆಯನ್ನು ಒಂಟಿಯಾಗಿ ಬಿಟ್ಟು ಚಹಾ ಖರೀದಿಸಲು ಹೋಗಿದ್ದ. ಆಗ ಅಲ್ಲಿಗೆ ಬಂದ ವ್ಯಕ್ತಿಯೊಬ್ಬ ಆ ಯುವತಿಯ ಬಳಿ ಬಂದು ಒಂದು ಬೀಗ ಕೀ ನೀಡಿ, ಪಾರ್ಕಿಂಗ್ ಬಳಿ ಇರುವ ಶೌಚಾಲಯವನ್ನು ಬಳಸಬಹುದು ಎಂದು ಹೇಳಿದ್ದಾನೆ. ರೈಲು ಬರುವುದು ತಡವಾಗಬಹುದು ಎಂದು ಆ ಯುವತಿ ಸಾರ್ವಜನಿಕ ಶೌಚಾಲಯದ ಬೀಗದ ಕೀ ತೆಗೆದು, ಒಳಗೆ ಪ್ರವೇಶಿಸಿದಾಗ ಆತ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾನೆ.

ಈ ಘಟನೆ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಟೀ ಕುಡಿಯಲು ಹೋಗಿದ್ದ ಆಕೆಯ ಗಂಡ ತನ್ನ ಹೆಂಡತಿಯನ್ನು ಹುಡುಕಿಕೊಂಡು ಬಂದವನು ಶೌಚಾಲಯದ ಬಳಿ ಬಂದು, ತನ್ನ ಪತ್ನಿಯನ್ನು ರಕ್ಷಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.

“ಯುವತಿ ನೀಡಿದ ದೂರಿನ ಆಧಾರದ ಮೇಲೆ ನಾವು ಆರೋಪಿಗಳ ವಿರುದ್ಧ ಅತ್ಯಾಚಾರದ ಎಫ್‌ಐಆರ್ (ಐಪಿಸಿ ಸೆಕ್ಷನ್ 376) ದಾಖಲಿಸಿದ್ದೇವೆ. ಆರೋಪಿಗಳನ್ನು ಪತ್ತೆಹಚ್ಚಲು ಮತ್ತು ಬಂಧಿಸಲು ಎರಡು ತಂಡಗಳನ್ನು ರಚಿಸಲಾಗಿದೆ” ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಇದನ್ನೂ ಓದಿ: Shocking News: 5 ವರ್ಷಗಳಿಂದ ಅಪ್ಪ, ಅಣ್ಣ, ಅಜ್ಜನಿಂದಲೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ!

Crime News: ಅತ್ಯಾಚಾರಿಯನ್ನು ಮರಕ್ಕೆ ಕಟ್ಟಿ, ಹೊಡೆದು ಕೊಂದ ಮಹಿಳೆಯರು!

Published On - 7:51 pm, Mon, 21 March 22

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು