ರೇಖಾ ಕದಿರೇಶ್ ಅಂತ್ಯಸಂಸ್ಕಾರ: ರೇಖಾ ಕೊಲೆ ಆರೋಪಿಗಳಿಗಿದೆ ಅಪರಾಧದ ಇತಿಹಾಸ

| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jun 25, 2021 | 4:54 PM

ಆರೋಪಿ ಪೀಟರ್ 6 ಪ್ರಕರಣಗಳಲ್ಲಿ ಭಾಗಿಯಾಗಿದ್ದ, ಮತ್ತೊಬ್ಬ ಆರೋಪಿ ಸೂರ್ಯ 4 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ರೇಖಾ ಕದಿರೇಶ್ ಅಂತ್ಯಸಂಸ್ಕಾರ: ರೇಖಾ ಕೊಲೆ ಆರೋಪಿಗಳಿಗಿದೆ ಅಪರಾಧದ ಇತಿಹಾಸ
ರೇಖಾ ಕದಿರೇಶ್
Follow us on

ಬೆಂಗಳೂರು: ಬಿಬಿಎಂಪಿ ಮಾಜಿ ಸದಸ್ಯೆ ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಾದ ಪೀಟರ್ ಮತ್ತು ಸೂರ್ಯ ಈ ಹಿಂದೆಯೂ ಹಲವು ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಮಾಹಿತಿ ಪತ್ತೆಯಾಗಿದೆ. ಆರೋಪಿ ಪೀಟರ್ 6 ಪ್ರಕರಣಗಳಲ್ಲಿ ಭಾಗಿಯಾಗಿದ್ದ, ಮತ್ತೊಬ್ಬ ಆರೋಪಿ ಸೂರ್ಯ 4 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆರೋಪಿ ಪೀಟರ್ ವಿರುದ್ಧ ವಿರುದ್ಧ 3 ಕೊಲೆ ಪ್ರಕರಣ, 1 ಹಲ್ಲೆ ಪ್ರಕರಣ, 2 ಡಕಾಯಿತಿ ಪ್ರಕರಣಗಳು ದಾಖಲಾಗಿವೆ. 4 ಕೇಸ್‌ಗಳಲ್ಲಿ ಭಾಗಿಯಾಗಿದ್ದ ಮತ್ತೊಬ್ಬ ಆರೋಪಿ ಸೂರ್ಯನ ವಿರುದ್ಧ 2 ಕೊಲೆ ಕೇಸ್, 2 ಕೊಲೆ ಯತ್ನ ಪ್ರಕರಣಗಳಿವೆ.

ರೇಖಾ ಕದಿರೇಶ್ ಶವಸಂಸ್ಕಾರ
ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಟಿ.ಆರ್.ಮಿಲ್ ಚಿತಾಗಾರದಲ್ಲಿ ಮೃತ ರೇಖಾ ಕದಿರೇಶ್​ ಶವಸಂಸ್ಕಾರ ಶುಕ್ರವಾರ ನಡೆಯಿತು. ರೇಖಾ ಕದಿರೇಶ್​​ ಚಿತೆಗೆ ಮಗ ಅಗ್ನಿಸ್ಪರ್ಶ ಮಾಡಿದ. ಬಿಬಿಎಂಪಿ ಛಲವಾದಿಪಾಳ್ಯ ವಾರ್ಡ್​ ಸದಸ್ಯೆಯಾಗಿದ್ದ ರೇಖಾ ಕದಿರೇಶ್​ ನಿನ್ನೆ ಬೆಳಿಗ್ಗೆ ಕೊಲೆಯಾಗಿದ್ದರು.

ಮಾಜಿ ಕಾರ್ಪೊರೇಟರ್‌ ರೇಖಾ ಕದಿರೇಶ್​ ಹತ್ಯೆ ಪ್ರಕರಣದ ತನಿಖೆಗೆಂದು ಪೊಲೀಸರು 6 ವಿಶೇಷ ತಂಡಗಳನ್ನು ರಚಿಸಿದ್ದರು. ಕಾಟನ್​ಪೇಟೆ ಇನ್​ಸ್ಪೆಕ್ಟರ್ ಚಿದಾನಂದ ಮೂರ್ತಿ, ಸಿಟಿಮಾರ್ಕೆಟ್ ಇನ್​ಸ್ಪೆಕ್ಟರ್ ಕುಮಾರಸ್ವಾಮಿ, ಕಾಮಾಕ್ಷಿಪಾಳ್ಯ ಇನ್​ಸ್ಪೆಕ್ಟರ್ ಪ್ರಶಾಂತ್, ಉಪ್ಪಾರಪೇಟೆ ಇನ್​ಸ್ಪೆಕ್ಟರ್ ಶಿವಸ್ವಾಮಿ, ಕಲಾಸಿಪಾಳ್ಯ ಇನ್​ಸ್ಪೆಕ್ಟರ್ ಚಂದ್ರಕಾಂತ್, ಚಾಮರಾಜಪೇಟೆ ಇನ್​ಸ್ಪೆಕ್ಟರ್ ಲೋಕಾಪುರ ನೇತೃತ್ವದ ತಂಡಗಳು ಆರೋಪಿಗಳ ಪತ್ತೆಗಾಗಿ ಕಾರ್ಯಾಚರಣೆ ಆರಂಭಿಸಿದ್ದವು.

ಮಾಗಡಿ ರಸ್ತೆ ಸುಂಕದಕಟ್ಟೆ ಬಳಿ ಮದ್ಯಪಾನ ಮಾಡುತ್ತಿದ್ದ ಆರೋಪಿಗಳು ಸಬ್​ಇನ್​ಸ್ಪೆಕ್ಟರ್ ಕರಿಯಣ್ಣ ಮತ್ತು ಹೆಡ್ ಕಾನ್​ಸ್ಟೆಬಲ್ ಚಂದ್ರಶೇಖರ್ ಮೇಲೆ ಹಲ್ಲೆ ಮಾಡಲು ಮುಂದಾದರು. ಈ ವೇಳೆ ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿದ ಪೊಲೀಸರು, ಅರೋಪಿಗಳ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದುಕೊಂಡು ಲಕ್ಷ್ಮೀ ಅಸ್ಪತ್ರೆಗೆ ದಾಖಲು ಮಾಡಿದರು. ಮಾಗಡಿ ರಸ್ತೆ ಠಾಣೆಯ ಇನ್​ಸ್ಪೆಕ್ಟರ್ ಶ್ರೀನಿವಾಸ್ ನೇತೃತ್ವದ ತಂಡವು ತಾಂತ್ರಿಕ ಕೆಲಸಗಳನ್ನು ನಿರ್ವಹಿಸಿತು.

(Rekha Kadiresh Cremated Murder Accused has Criminal history)

ಇದನ್ನೂ ಓದಿ: ರೇಖಾ ಕದಿರೇಶ್ ಕೊಲೆಗಡುಕರ ಪತ್ತೆಗೆ 6 ತಂಡ ರಚಿಸಿದ್ದ ಪೊಲೀಸರು: ರಾತ್ರಿಯಿಡೀ ಆರೋಪಿಗಳ ಬೆನ್ನುಬಿದ್ದು ಹುಡುಕಿದ್ದರು

ಇದನ್ನೂ ಓದಿ: Rekha Kadiresh: ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್​ರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ