ಶೀಘ್ರದಲ್ಲೇ ಸಿಎಂ ಸಿದ್ದರಾಮಯ್ಯ ಕೈ ಸೇರಲಿದೆ 545 PSI ನೇಮಕಾತಿ ಅಕ್ರಮದ ವರದಿ

| Updated By: Rakesh Nayak Manchi

Updated on: Jan 18, 2024 | 8:48 AM

545 ಪಿಎಸ್​ಐ ನೇಮಕಾತಿ ಲಿಖಿತ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಪ್ರಕರಣ ಸಂಬಂಧ ತನಿಖೆಗೆ ಸರ್ಕಾರವು ಹೈಕೋರ್ಟ್​ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ಸಮಿತಿ ರಚಿಸಿತ್ತು. ಅದರಂತೆ ತನಿಖೆ ನಡೆಸುತ್ತಿರುವ ಸಮೀತಿಯು ಶೀಘ್ರದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತನಿಖಾ ವರದಿ ಸಲ್ಲಿಸಲಿದೆ.

ಶೀಘ್ರದಲ್ಲೇ ಸಿಎಂ ಸಿದ್ದರಾಮಯ್ಯ ಕೈ ಸೇರಲಿದೆ 545 PSI ನೇಮಕಾತಿ ಅಕ್ರಮದ ವರದಿ
ಶೀಘ್ರದಲ್ಲೇ ಸಿಎಂ ಸಿದ್ದರಾಮಯ್ಯ ಕೈ ಸೇರಲಿದೆ 545 PSI ನೇಮಕಾತಿ ಅಕ್ರಮದ ವರದಿ
Follow us on

ಬೆಂಗಳೂರು, ಜ.18: ರಾಜ್ಯದಲ್ಲಿ ನಡೆದ 545 ಪಿಎಸ್​ಐ ನೇಮಕಾತಿ ಲಿಖಿತ ಪರೀಕ್ಷೆಯಲ್ಲಿ (545 PSI Recruitment Scam) ಅಕ್ರಮ ಎಸಗಿದ ಪ್ರಕರಣ ಸಂಬಂಧ ತನಿಖೆಗೆ ಸರ್ಕಾರವು ಹೈಕೋರ್ಟ್​ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ಸಮಿತಿ ರಚಿಸಿತ್ತು. ಅದರಂತೆ ತನಿಖೆ ನಡೆಸುತ್ತಿರುವ ಸಮೀತಿಯು ಶೀಘ್ರದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ತನಿಖಾ ವರದಿ ಸಲ್ಲಿಸಲಿದೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ 545 PSI ನೇಮಕಾತಿ ಲಿಖಿತ ಪರೀಕ್ಷೆಯಲ್ಲಿ ಅಕ್ರಮ ಎಸಗಲಾಗಿತ್ತು. ಮರು ತನಿಖೆ ನಡೆಸುವ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರವು ಪ್ರಕರಣದ ಮರು ತನಿಖೆಗಾಗಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ಸಮಿತಿ ರಚಿಸಿತ್ತು. ಸರ್ಕಾರದ ನಿರ್ದೇಶನದಂತೆ ವಿಚಾರಣಾ ಆಯೋಗವು PSI ನೇಮಕಾತಿಯ ಅಕ್ರಮದ ವರದಿ‌ ಸಿದ್ದಪಡಿಸಿದೆ.

ಇದನ್ನೂ ಓದಿ: 545 ಪಿಎಸ್‌ಐ ನೇಮಕಾತಿ ಮರುಪರೀಕ್ಷೆಯ ಮಾರ್ಗಸೂಚಿ ಬಿಡುಗಡೆ, ಇಲ್ಲಿದೆ ಸಂಪೂರ್ಣ ವಿವರ

ಇದೇ ವಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ವಿಚಾರಣಾ ಆಯೋಗವು PSI ಅಕ್ರಮದ ವರದಿ ಸಲ್ಲಿಸುವ ಸಾಧ್ಯತೆ ಇದೆ. ಅಕ್ರಮ ಪ್ರಕರಣದಲ್ಲಿ ಈಗಾಗಲೇ ಪೊಲೀಸ್ ನೇಮಕಾತಿ ವಿಭಾಗ ADGP ಅಮೃತ್ ಪಾಲ್‌ ಸೇರಿದಂತೆ ಕೆಲ ಪೊಲೀಸ್ ಅಧಿಕಾರಿಗಳ ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಪ್ರಭಾವಿ ರಾಜಕೀಯ ಮುಖಂಡರೂ ಭಾಗಿಯಾಗಿದ್ದಾರೆ ಎಂಬ ಆರೋಪದಡಿ ಕೆಲ ರಾಜಕಾರಣಿಗಳಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ