ಮೈಸೂರು: ಕೇಂದ್ರ ಗುಪ್ತಚರ ಇಲಾಖೆ ನಿವೃತ್ತ ಅಧಿಕಾರಿ ಅನುಮಾನಾಸ್ಪದ ಸಾವು

ಕೇಂದ್ರ ಗುಪ್ತಚರ ಇಲಾಖೆ ನಿವೃತ್ತ ಅಧಿಕಾರಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮಾನಸಗಂಗೋತ್ರಿ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ನಡೆದಿದೆ.

ಮೈಸೂರು: ಕೇಂದ್ರ ಗುಪ್ತಚರ ಇಲಾಖೆ ನಿವೃತ್ತ ಅಧಿಕಾರಿ ಅನುಮಾನಾಸ್ಪದ ಸಾವು
ಕೇಂದ್ರ ಗುಪ್ತಚರ ಇಲಾಖೆ ನಿವೃತ್ತ ಅಧಿಕಾರಿ ಆರ್​.ಎಸ್​.ಕುಲಕರ್ಣಿ
Follow us
TV9 Web
| Updated By: ವಿವೇಕ ಬಿರಾದಾರ

Updated on:Nov 05, 2022 | 9:04 PM

ಮೈಸೂರು: ಕೇಂದ್ರ ಗುಪ್ತಚರ ಇಲಾಖೆ (Intelligence Bureau-IB) ನಿವೃತ್ತ ಅಧಿಕಾರಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮಾನಸಗಂಗೋತ್ರಿ ವಿಶ್ವವಿದ್ಯಾಲಯದ (Manasagangotri university)ಕ್ಯಾಂಪಸ್‌ನಲ್ಲಿ ನಡೆದಿದೆ. ಆರ್​.ಎಸ್​.ಕುಲಕರ್ಣಿ (83) ಮೃತ ನಿವೃತ್ತ ಅಧಿಕಾರಿ. ನಿನ್ನೆ (ನ. 4) ರ ಸಂಜೆ ಆರ್​.ಎಸ್​.ಕುಲಕರ್ಣಿ ಅವರು ಕ್ಯಾಂಪಸ್​​ನ ಕಂಪ್ಯೂಟರ್ ಸೈನ್ಸ್ ವಿಭಾಗದ ಪಕ್ಕದ ರಸ್ತೆಯಲ್ಲಿ ವಾಕ್ ಮಾಡುತ್ತಿದ್ದರು. ಈ ವೇಳೆ ಕಾರು ಡಿಕ್ಕಿಯಾಗಿದೆ. ಇದರಿಂದ ಗಾಯಗೊಂಡಿದ್ದ ಆರ್​.ಎಸ್​.ಕುಲಕರ್ಣಿ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸದ್ಯ ಕುಲಕರ್ಣಿ ಕುಟುಂಬಸ್ಥರು ಇದೊಂದು ಕೊಲೆ ಎಂದು ಆರೋಪ ಮಾಡುತ್ತಿದ್ದಾರೆ. ಜಯಲಕ್ಷ್ಮೀ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರು ಅಪಘಾತ ಮಾಡಿದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅಪಘಾತದ ದೃಶ್ಯ  ಸಿಸಿ ಕ್ಯಾಮೆರಾ ಸೆರೆಯಾಗಿದೆ. ನಿವೃತ್ತ ಅಧಿಕಾರಿ ಪಕ್ಕಕ್ಕೆ ಹೋದರು, ಡಿಕ್ಕಿ ಹೊಡೆದಿದ್ದಾರೆ.  ಅಪಘಾತಕ್ಕೆ ನಂಬರ್ ಪ್ಲೇಟ್ ಇಲ್ಲದ ಕಾರು ಬಳಸಿದ್ದು, ಯೋಜಿತ ಕೊಲೆ ಎಂದು ಶಂಕೆ ವ್ಯಕ್ತವಾಗಿದೆ.

ಆಸ್ತಿ ವಿಚಾರವಾಗಿ ಸಹೋದರರಿಂದಲೇ ಅಣ್ಣನ ಬರ್ಬರ ಹತ್ಯೆ

ಉತ್ತರ ಕನ್ನಡ: ಆಸ್ತಿ ವಿಚಾರವಾಗಿ ಸಹೋದರರಿಂದಲೇ ಅಣ್ಣನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹೊನ್ನಾವರ ತಾಲೂಕಿನ ತೊಟ್ಟಿಲಗುಂಡಿಯಲ್ಲಿ ನಡೆದಿದೆ. ಹನುಮಂತ ಹೊನ್ನಪ್ಪ ನಾಯ್ಕ್ (54) ಕೊಲೆಯಾದ ವ್ಯಕ್ತಿ. ಘಟನೆಯಲ್ಲಿ ಮೃತನ ಸೋದರ ಮಾವ ಮಾರುತಿ ನಾಯ್ಕ್ (70)ಗೆ ಗಂಭೀರ ಗಾಯಗಳಾಗಿದ್ದು, ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿನಾಯಕ ನಾಯ್ಕ, ಚಿದಾನಂದ ನಾಯ್ಕ್  ಕೊಲೆ ಆರೋಪಿಗಳಾಗಿದ್ದು, ಹೊನ್ನಾವರ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳು ಹನುಮಂತ ಹೊನ್ನಪ್ಪ ನಾಯ್ಕ್​ಗೆ  ರಾಡ್‌ನಲ್ಲಿ ತಲೆಗೆ ಹೊಡೆದಿದ್ದಾರೆ.  ಇದರಿಂದ ಗಂಭೀರ ಗಾಯಗೊಂಡಿದ್ದ ಹೊನ್ನಪ್ಪ ನಾಯ್ಕ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಹಿಂದೆ ಕೂಡಾ ಅಡಿಕೆ, ಆಸ್ತಿ ವಿಚಾರದಲ್ಲಿ ಅಣ್ಣ ತಮ್ಮಂದಿರಿ ನಡುವೆ ಗಲಾಟೆಗಳಾಗಿದ್ದವು.  ಇಂದು ಈ ಜಗಳ ತಾರಕಕ್ಕೇರಿ ತಮ್ಮಂದಿರು, ಅಣ್ಣನನ್ನು ಕೊಲೆ ಮಾಡಿದ್ದಾರೆ. ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:54 pm, Sat, 5 November 22